ಭಾರತೀಯರ ಅಡುಗೆ ಮನೆಯಲ್ಲಿರುವ ಪ್ರಮುಖ ಪದಾರ್ಥಗಳಲ್ಲಿ ಒಂದು ಈ ಅರಶಿನ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ, ಸತು ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿದ್ದು, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ಮತ್ತು ನಂಜುನಿರೋಧಕ ಗುಣವನ್ನು ಹೊಂದಿದೆ. ಹೀಗಾಗಿ ಅನಾದಿ ಕಾಲದಿಂದಲೂ ಔಷಧಿಗಳ ತಯಾರಿಕೆಯಲ್ಲಿ ಈ ಅರಶಿನವನ್ನು ಬಳಸುತ್ತಾ ಬರಲಾಗುತ್ತಿದೆ. ಅದಲ್ಲದೇ ಸೌಂದರ್ಯವರ್ಧಕಗಳಲ್ಲಿ ಅರಶಿನ ಅಗ್ರಸ್ಥಾನವನ್ನು ಪಡೆದುಕೊಂಡಿದೆ.
* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರ ಮಾಡುತ್ತದೆ. ಈ ಅರಶಿನದ ನೀರು ಜೀರ್ಣಕಾರಿ ಕಿಣ್ವಗಳಲ್ಲಿ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೊಟ್ಟೆ ಉಬ್ಬರ, ಮಲಬದ್ಧತೆ ಮತ್ತು ಇತರ ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರಾಗಿಸುತ್ತದೆ.
* ತೂಕ ನಷ್ಟಕ್ಕೆ ಸಹಕಾರಿ : ಅರಶಿನ ನೀರು ತೂಕ ಇಳಿಸಿಕೊಳ್ಳುವವರಿಗೆ ಸಹಕಾರಿಯಾಗಿದೆ. ಬೆಳಗ್ಗೆ ಅರಶಿನ ನೀರು ಸೇವನೆಯಿಂದ ದೇಹವು ಕೊಬ್ಬನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುತ್ತದೆ.
* ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ : ಅರಿಶಿನದಲ್ಲಿ ಉತ್ಕರ್ಷಣ ನಿರೋಧಕಗಳು, ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಗಳು ಹೇರಳವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅನಾರೋಗ್ಯ ಸಮಸ್ಯೆ ಬಾರದಂತೆ ನೋಡಿಕೊಳ್ಳುತ್ತದೆ.
* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ : ದಿನನಿತ್ಯ ಅರಿಶಿನ ನೀರನ್ನು ಕುಡಿಯುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಕೊಲೆಸ್ಟ್ರಾಲ್ ಮಟ್ಟ ಹಾಗೂ ರಕ್ತದೊತ್ತಡವನ್ನು ಕಡಿಮೆಗೊಳಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
* ಉರಿಯೂತವನ್ನು ಕಡಿಮೆ ಮಾಡುತ್ತದೆ : ಅರಶಿನದ ನೀರು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಯಸ್ಸಾದಂತೆ ಕೀಲುಗಳಲ್ಲಿನ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ದೋಸೆ, ಇಡ್ಲಿ ಜೊತೆಗೆ ಬೆಸ್ಟ್ ಕಾಂಬಿನೇಶನ್ ಈ ಬದನೆಕಾಯಿ ಚಟ್ನಿ, ಮಾಡುವ ವಿಧಾನವಂತೂ ತುಂಬಾನೇ ಸರಳ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ : ಅರಶಿನದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು ವಯಸ್ಸಾಗಿರುವುದನ್ನು ತಡೆದು, ಚರ್ಮವನ್ನು ಕಾಂತಿಯುತ ಹಾಗೂ ಆರೋಗ್ಯಕರವಾಗಿರಿಸುತ್ತದೆ.
* ನಂಜು ನಿರೋಧಕ : ಅರಶಿನದಲ್ಲಿ ನಂಜು ನಿರೋಧಕ ಗುಣವನ್ನು ಹೊಂದಿದೆ. ಮೈಯಲ್ಲಿ ಗಾಯಗಳಿದ್ದರೆ ಅರಶಿನ ನೀರನ್ನು ಕುಡಿಯುವುದರಿಂದ ಗಾಯವು ಮಾಗುತ್ತದೆ.
* ಮೆದುಳಿನ ಕಾರ್ಯವು ಸುಧಾರಿಸುತ್ತದೆ : ನಿಯಮಿತವಾಗಿ ಅರಶಿನ ನೀರು ಕುಡಿಯುವುದರಿಂದ ಮೆದುಳಿನ ಕಾರ್ಯವು ಸುಧಾರಿಸುತ್ತದೆ. ಅದಲ್ಲದೇ ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಅಲ್ಜೈಮೆರ್ ಕಾಯಿಲೆಯ ಮಟ್ಟವನ್ನು ಕಡಿಮೆಗೊಳಿಸಿ, ಈ ಮರೆವಿನ ಕಾಯಿಲೆಯು ಬಾರದಂತೆ ತಡೆಯುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ