AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kokum Fruit: ಬೇಸಿಗೆಯ ಸೂಪರ್ ಫ್ರೂಟ್ ಪುನರ್ಪುಳಿ, ಇದರಲ್ಲಿದೆ ಆರೋಗ್ಯ ಪ್ರಯೋಜನ

ಬೇಸಿಗೆ ಹಣ್ಣು ಅಂತಲೇ ಹೆಸರುವಾಸಿಯಾದ ಪುನರ್ಪುಳಿಯ (ಮುರುಗಲ ಹಣ್ಣು) ಶರಬತ್ತು ಬೇಸಿಗೆಯಲ್ಲಿ ಸೇವನೆ ಮಾಡಲು ಯೋಗ್ಯವಾದ ಪಾನೀಯವಾಗಿದೆ. ಇದು ಉತ್ಕರ್ಷಣ ನಿರೊಧಕಗಳಿಂದ ಸಮೃದ್ಧವಾಗಿರುವ ಹಣ್ಣಾಗಿದ್ದು, ಹಲವಾರು ಆರೋಗ್ಯ ಪ್ರಯೋಜಗಳನ್ನು ಹೊಂದಿದೆ.

Kokum Fruit: ಬೇಸಿಗೆಯ ಸೂಪರ್ ಫ್ರೂಟ್ ಪುನರ್ಪುಳಿ, ಇದರಲ್ಲಿದೆ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: May 02, 2023 | 5:11 PM

Share

ಬೇಸಿಗೆಯ ಶಾಖವನ್ನು ಸಹಿಸಿಕೊಳ್ಳಲು ನಮ್ಮ ದೇಹದಲ್ಲಿ ನೀರಿನಾಂಶ ಬಹಳ ಮುಖ್ಯ. ಬೇಸಿಗೆಯಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದಿಂದ ಪರಿಹಾರ ಪಡೆಯಲು ದೇಹವನ್ನು ತಂಪಾಗಿರಿಸುವ ಮತ್ತು ಉಲ್ಲಾಸದಾಯಕವಾಗಿರಿಸುವ ಪಾನೀಯಗಳನ್ನು ನಾವು ಸೇವಿಸುತ್ತಿರುತ್ತೇವೆ. ಆದರೆ ಈ ಕೆಲವೊಂದು ಶೂನ್ಯ ಕ್ಯಾಲೋರಿ ಪಾನೀಯಗಳ ಜೊತೆಗೆ ನಮಗೆ ಈ ಬೇಸಿಗೆಯಲ್ಲಿ ಸ್ವಲ್ಪ ಹೆಚ್ಚು ಪೌಷ್ಟಿಕಾಂಶದ ಅಗತ್ಯವಿರುತ್ತದೆ. ಈ ಕ್ರಮದಲ್ಲಿ ಬೇಸಿಗೆಯಲ್ಲಿ ಸಿಗುವ ಋತುಮಾನದ ಹಣ್ಣುಗಳು ಉತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಬೇಸಿಯಲ್ಲಿ ಸಿಗುವ ಹಣ್ಣುಗಳಲ್ಲಿ ಕೋಕಮ್ ಅಥವಾ ಪುನರ್ಪುಳಿ (ಮುರುಗಲ ಹಣ್ಣು) ಕೂಡಾ ಒಂದು. ಈ ಹಣ್ಣಿನ ಜ್ಯೂಸ್ ಬೇಸಿಗೆಯಲ್ಲಿ ಸೇವನೆ ಮಾಡಲು ಉತ್ತಮವಾದ ಪಾನೀಯವಾಗಿದೆ. ಇದನ್ನು ಗಾರ್ಸಿನಿಯಾ ಇಂಡಿಕಾ ಎಂದು ಕರೆಯುತ್ತಾರೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ಋತುಮಾನದ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ಇದಲ್ಲದೆ ಪುನರ್ಪುಳಿ ವಿಟಮಿನ್ ಎ, ಬಿ, ಸಿ ಮತ್ತು ಫೋಲಿಕ್ ಆಮ್ಲ, ಕ್ಯಾಲ್ಸಿಯಂ, ಕಬ್ಬಿಣಾಂಶ, ಮ್ಯಾಂಗನೀಸ್ ಸತುಗಳಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ದೇಹಕ್ಕೆ ಉಪಯುಕ್ತವಾಗಿದ್ದು, ಈ ಹಣ್ಣಿನ ಶರಬತ್ತನ್ನು ಸೇವಿಸುವ ಮೂಲಕ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಪುನರ್ಪುಳಿಯ ಆರೋಗ್ಯ ಪ್ರಯೋಜನಗಳು:

ಹೃದಯದ ಆರೋಗ್ಯ: ಪುನರ್ಪುಳಿ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಫೈಬರ್​​​ನಿಂದ ಸಮೃದ್ಧವಾಗಿದೆ. ಅಲ್ಲದೆ ಇದು ಶೂನ್ಯ ಕೊಲೆಸ್ಟ್ರಾಲ್​​​​ನ್ನು ಹೊಂದಿರುತ್ತದೆ. ಆದ್ದರಿಂದ ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದರಲ್ಲಿರುವ ಮೆಗ್ನೇಷಿಯಂ, ಪೊಟ್ಯಾಷಿಯಂ, ಮತ್ತು ಮ್ಯಾಂಗನೀಸ್ ನಂತಹ ಖನಿಜಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಪರಿಣಾಮವಾಗಿ ಇದು ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.

ಜೀರ್ಣಕ್ರಿಯೆಗೆ ಸಹಕಾರಿ: ಸಿಹಿಯಾದ, ಕಟುವಾದ ಮತ್ತು ಹೆಚ್ಚು ಉಲ್ಲಾಸಕರವಾದ ಪುನರ್ಪುಳಿ ಶರಬತ್ತು ಕರುಳಿನ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆಮ್ಲೀಯತೆ ಮತ್ತು ಅಜೀರ್ಣದಿಂದ ಬಳಲುತ್ತಿರುವ ರೋಗಿಗಳು ಈ ಪಾನೀಯವನ್ನು ಕುಡಿಯುವುದರಿಂದ ಅಪಾರ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಇದರ ಹೆಲ್ಮಿಂಟಿಕ್ ವಿರೋಧಿ ಗುಣಲಕ್ಷಣಗಳು ಹೊಟ್ಟೆಯಿಮದ ಆಸ್ಕರಿಸ್​​​ನಂತಹ ಹುಳಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Healthy Summer Drinks: ತೂಕ ಇಳಿಕೆಗೆ ಸಹಾಯಕ ಈ ರಿಫ್ರೆಶ್ ಬೇಸಿಗೆ ಪಾನೀಯ

ಇಮ್ಯುನಿಟಿ ಬೂಸ್ಟರ್: ಈ ಹಣ್ಣು ಆಂಟಿ-ಬ್ಯಾಕ್ಟೀರಿಯಲ್ ಮತ್ತು ಆಂಟಿ-ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಈ ಹಣ್ಣು ಅನೇಕ ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳನ್ನು ನಿಭಾಯಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮತ್ತು ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.

ಚರ್ಮಕ್ಕೆ ಒಳ್ಳೆಯದು: ಪುನರ್ಪುಳಿ ಹಣ್ಣು ಒಂದು ಪರಿಣಾಮಕಾರಿ ಉತ್ಕರ್ಷಣ ನಿರೋಧಕವಾಗಿದ್ದು, ಅದು ವಯಸ್ಸಾಗುವಿಕೆಯ ಲಕ್ಷಣವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ. ಇದು ಸತ್ತ ಚರ್ಮ ಮತ್ತು ತ್ವಚೆಯ ಮೊಡವೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಉತ್ತಮ ಕೂಲಿಂಗ್ ಮತ್ತು ನೀರಿನಾಂಶಗಳ ಏಜೆಂಟ್: ಇದು ಬೇಸಿಗೆಯ ಹಣ್ಣು ಮತ್ತು ಇದರ ಶರಬತ್ತು ನಿರ್ಜಲೀಕರಣ ಮತ್ತು ಶಾಖದ ಹೊಡೆತದ ಸಂಭವನೀಯತೆಯನ್ನು ತಪ್ಪಿಸಲು ನಮಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ಪಾನೀಯ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ರಿಫ್ರೆಶ್ ಆಗಿರಿಸುತ್ತದೆ.

ಮಧುಮೇಹದ ನಿರ್ವಹಣೆಗೆ ಸಹಾಯಕ: ಪುನರ್ಪುಳಿ ಅತ್ಯುತ್ತಮವಾದ ಮಧುಮೇಹ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ. ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವೂ ಆಗಿದೆ. ಇದು ನಮ್ಮ ದೇಹದಲ್ಲಿ ಇನ್ಸುಲಿನ್ ಸ್ರವಿಕೆಯನ್ನು ಹೆಚ್ಚಿಸುತ್ತದೆ, ಹೀಗಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಹೆಚ್ಚಳವನ್ನು ತಡೆಗಟ್ಟಬಹುದು.

ಜೀವನಶೈಲಿಯ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!