AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತೆ ಗೊತ್ತಾ?

HealthTips : ಟೈಪ್ 2 ಡಯಾಬಿಟಿಸ್‌ನಲ್ಲಿ ಜೀರಿಗೆ ರಕ್ತದಲ್ಲಿನ ಸಕ್ಕರೆ ಮತ್ತು ಸೀರಮ್ ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಜೀರಿಗೆಯಲ್ಲಿರುವ ಕಬ್ಬಿಣ ಮತ್ತು ಫೈಬರ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಋತುಮಾನದ ಕಾಯಿಲೆಗಳ ವಿರುದ್ಧ ಹೋರಾಡಲು ಒಳ್ಳೆಯದು. ಒಂದು ಲೋಟ ಜೀರಿಗೆ ನೀರನ್ನು ಕುಡಿಯುವುದರಿಂದ ನಿಮ್ಮ ಹೊಟ್ಟೆಯು ಹೆಚ್ಚು ಕಾಲ ತುಂಬಿರುತ್ತದೆ. ಬೇರೆ ಯಾವುದೇ ಜಂಕ್ ಫುಡ್ ತಿನ್ನುವುದನ್ನು ತಪ್ಪಿಸಿ.

Health Tips : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತೆ ಗೊತ್ತಾ?
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತೆ ಗೊತ್ತಾ
ಸಾಧು ಶ್ರೀನಾಥ್​
|

Updated on:Mar 09, 2024 | 8:39 AM

Share

ಅಯ್ಯೋ ಜೀರಿಗೆಯಾ ಎಂದು ಮೂಗೆಳೆಯಬೇಡಿ! ಜೀರಿಗೆ ಆಹಾರಕ್ಕೆ ಪರಿಮಳವನ್ನು ಸೇರಿಸುವುದಲ್ಲದೆ, ಅನೇಕ ಆರೋಗ್ಯ ಪ್ರಯೋಜನಗಳನ್ನು ಕಲ್ಪಿಸುತ್ತದೆ. ಜೀರಿಗೆ ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವುದರಿಂದ ತೂಕ ನಷ್ಟದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೀರಿಗೆ ಪಾಲಿಫಿನಾಲ್‌ಗಳಲ್ಲಿ ಸಮೃದ್ಧವಾಗಿದೆ, ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ತಡೆಯುವ ಅನೇಕ ಇತರ ಸಂಯುಕ್ತಗಳು ಇವೆ. ಜೀರಿಗೆ ನೀರು ವಿವಿಧ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಉತ್ತಮ ಜೀರ್ಣಾಂಗ ವ್ಯವಸ್ಥೆಯು ಪರಿಣಾಮಕಾರಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಉತ್ತಮ ಜೀರ್ಣಕ್ರಿಯೆಯು ಚಯಾಪಚಯ ಪ್ರಮಾಣವನ್ನು ಸುಧಾರಿಸುತ್ತದೆ.

ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆ ಮಾಡಲು ಜೀರಿಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸಿವೆ. ಜೀರಿಗೆ ನೀರನ್ನು ಕುಡಿಯುವುದರಿಂದ ದೇಹವು ಹೊಸ, ಆರೋಗ್ಯಕರ ಕೋಶಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಚಯಾಪಚಯ ದರವನ್ನು ಹೆಚ್ಚಿಸುತ್ತದೆ. ಜೀರಿಗೆ ನೀರಿನಲ್ಲಿ ಕ್ಯಾಲೋರಿ ಕಡಿಮೆ. ಒಂದು ಟೀ ಚಮಚ ಜೀರಿಗೆ ಕೇವಲ ಏಳರಿಂದ ಎಂಟು ಕ್ಯಾಲೋರಿಗಳನ್ನು ಹೊಂದಿರುತ್ತದೆ.

ಗರ್ಭಾವಸ್ಥೆಯಲ್ಲಿ ಜೀರ್ಣಕ್ರಿಯೆಯನ್ನು ಸುಧಾರಿಸಲು ಜೀರಿಗೆ ನೀರು ಸಹ ಪರಿಣಾಮಕಾರಿ ಎಂದು ತಜ್ಞರು ಹೇಳುತ್ತಾರೆ. ಇದು ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬಿನ ಜೀರ್ಣಕ್ರಿಯೆಗೆ ಅಗತ್ಯವಾದ ಕಿಣ್ವಗಳಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಜೀರಿಗೆಯಲ್ಲಿರುವ ಫ್ಲೇವನಾಯ್ಡ್‌ಗಳು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ.

Also Read: ಯೂರಿಕ್ ಆಸಿಡ್ ಅಧಿಕವಾಗಿರುವವರು ಏನು ತಿನ್ನಬೇಕು.. ಏನು ತಿನ್ನಬಾರದು? ಇಲ್ಲಿ ತಿಳಿದುಕೊಳ್ಳಿ

ಟೈಪ್ 2 ಡಯಾಬಿಟಿಸ್‌ನಲ್ಲಿ ಜೀರಿಗೆ ರಕ್ತದಲ್ಲಿನ ಸಕ್ಕರೆ ಮತ್ತು ಸೀರಮ್ ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಜೀರಿಗೆಯಲ್ಲಿರುವ ಕಬ್ಬಿಣ ಮತ್ತು ಫೈಬರ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಋತುಮಾನದ ಕಾಯಿಲೆಗಳ ವಿರುದ್ಧ ಹೋರಾಡಲು ಒಳ್ಳೆಯದು. ಒಂದು ಲೋಟ ಜೀರಿಗೆ ನೀರನ್ನು ಕುಡಿಯುವುದರಿಂದ ನಿಮ್ಮ ಹೊಟ್ಟೆಯು ಹೆಚ್ಚು ಕಾಲ ತುಂಬಿರುತ್ತದೆ. ಬೇರೆ ಯಾವುದೇ ಜಂಕ್ ಫುಡ್ ತಿನ್ನುವುದನ್ನು ತಪ್ಪಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 am, Sat, 9 March 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ