AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fitness Tips: ದೇಹದ ಹೆಚ್ಚುವರಿ ತೂಕ ನಷ್ಟಕ್ಕೆ ಸಹಾಯಕವಾಗುವ ಐದು ಪಾನೀಯಗಳು ಇಲ್ಲಿವೆ

ಕೆಲವು ನೈಸರ್ಗಿಕ ಪಾನೀಯಗಳನ್ನು ಕುಡಿಯುವ ಮೂಲಕ ನೀವು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಬಹುದು. ನಿಮ್ಮ ತೂಕವನ್ನು ಇಳಿಸಲು ಸಹಾಯ ಮಾಡುವ 5 ನೈಸರ್ಗಿಕ ಕೊಬ್ಬು ಬರ್ನರ್ ಪಾನೀಯಗಳ ಮಾಹಿತಿ ಇಲ್ಲಿದೆ.

Fitness Tips: ದೇಹದ ಹೆಚ್ಚುವರಿ ತೂಕ ನಷ್ಟಕ್ಕೆ ಸಹಾಯಕವಾಗುವ ಐದು ಪಾನೀಯಗಳು ಇಲ್ಲಿವೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 31, 2022 | 6:16 PM

Share

ಇತ್ತೀಚಿನ ತಪ್ಪಾದ ಜೀವನಶೈಲಿಯಿಂದಾಗಿ ದೇಹದ ತೂಕವು ಹೆಚ್ಚಾಗುತ್ತಿದೆ. ಹೀಗಾಗಿ ಒಂದಷ್ಟು ಮಂದಿ ಜಿಮ್​ಗೆ ಹೋಗಿ ಕಠಿಣ ತರಬೇತಿಯನ್ನು ಪಡೆಯುತ್ತಾರೆ. ಹಾಗಿದ್ದರೆ ಮನೆಯಲ್ಲೇ ಇದ್ದುಕೊಂಡು ದೇಹವನ್ನು ಫಿಟ್ ಆಗುವಂತೆ ಮಾಡಲು ಸಾಧ್ಯವಿಲ್ವಾ? ನೀವು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಬೇಕಾದರೆ ಕೆಲವೊಂದು ಪಾನೀಯಗಳನ್ನು ಸೇವಿಸುವುದರ ಜೊತೆಗೆ ವ್ಯಾಯಾಮಗಳನ್ನು ಮಾಡಬೇಕಾಗುತ್ತದೆ. ಕೆಲವು ನೈಸರ್ಗಿಕ ಪಾನೀಯಗಳನ್ನು ಕುಡಿಯುವ ಮೂಲಕ ನೀವು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಬಹುದು. ನಿಮ್ಮ ತೂಕವನ್ನು ಇಳಿಸಲು ಸಹಾಯ ಮಾಡುವ 5 ನೈಸರ್ಗಿಕ ಕೊಬ್ಬು ಬರ್ನರ್ ಪಾನೀಯಗಳು ಇಲ್ಲಿವೆ:

ಜೀರಾ ನೀರು: ಸಾಮಾನ್ಯವಾಗಿ ಭಾರತೀಯ ಆಹಾರಗಳಲ್ಲಿ ಜೀರಾವನ್ನು ಬಳಸಲಾಗುತ್ತದೆ. ಜೀರಾ ನೀರು ಕಡಿಮೆ ಕ್ಯಾಲೋರಿ ಪಾನೀಯವಾಗಿದ್ದು, ಅದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಇದು ಹಸಿವನ್ನು ನಿಗ್ರಹಿಸುವ ಮತ್ತು ತೂಕ ನಷ್ಟ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ವಿಷಯದಲ್ಲಿ ಅದ್ಭುತಗಳನ್ನು ಮಾಡುತ್ತದೆ.

ಹಸಿರು ಚಹಾ: ಕಳೆದ ಕೆಲವು ದಶಕಗಳಲ್ಲಿ ಹಸಿರು ಚಹಾವು ಜನಪ್ರಿಯತೆಯನ್ನು ಗಳಿಸಿದೆ. ಹಸಿರು ಚಹಾವು ಉತ್ಕರ್ಷಣ ನಿರೋಧಕಗಳನ್ನು (ಕ್ಯಾಟೆಚಿನ್ಸ್) ಹೊಂದಿರುತ್ತದೆ, ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಆದರೆ ನೀವು ಹೆಚ್ಚು ಸಕ್ಕರೆ ಸೇರಿಸುವುದನ್ನು ತಪ್ಪಿಸಬೇಕು.

ಕೇರಮ್ ಪಾನೀಯ: ಅಜ್ವೈನ್ ಅಥವಾ ಕೇರಮ್ ಬೀಜಗಳು ನೈಸರ್ಗಿಕವಾಗಿ ಚಯಾಪಚಯವನ್ನು ಉತ್ತೇಜಿಸುತ್ತದೆ, ಜೀರ್ಣಕ್ರಿಯೆ ಮತ್ತು ಆಹಾರವನ್ನು ಹೀರಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ. 2 ಟೀಸ್ಪೂನ್ ಒಣ ಹುರಿದ ಅಜ್ವೈನ್ ಬೀಜಗಳನ್ನು ರಾತ್ರಿಯಿಡೀ ಒಂದು ಕಪ್ ನೀರಿನಲ್ಲಿ ನೆನೆಸಿಡಬೇಕು. ಬೆಳಗ್ಗೆ ನೀರನ್ನು ಚೆನ್ನಾಗಿ ಮಿಶ್ರಣ ಮಾಡಿ ಕುಡಿಯಬೇಕು.

ಸೋಂಪು ಕಾಳುಗಳ ಪಾನೀಯ: ಸೋಂಪು ಬೀಜಗಳನ್ನು ಅಜೀರ್ಣ ಮತ್ತು ಉಬ್ಬುವಿಕೆ ಸಮಸ್ಯೆ ನಿವಾರಿಸಲು ಬಳಸಲಾಗುತ್ತದೆ. ಸೋಂಪು ಮೂತ್ರವರ್ಧಕ ಗುಣಲಕ್ಷಣಗಳನ್ನು ಹೊಂದಿದ್ದು, ಅದು ನಿರ್ವಿಶೀಕರಣಕ್ಕೆ ಸಹಾಯ ಮಾಡುತ್ತದೆ, ಇದು ಅಂತಿಮವಾಗಿ ತೂಕ ನಷ್ಟಕ್ಕೆ ಕಾರಣವಾಗುತ್ತದೆ. ರಾತ್ರಿಯಿಡೀ ನೀರಿನಲ್ಲಿ ಒಂದು ಟೀಚಮಚ ಸೋಂಪು ಬೀಜಗಳನ್ನು ನೆನೆಸಿ ಮರುದಿನ ಬೆಳಗ್ಗೆ ಸೋಸಿಕೊಂಡು ಕುಡಿಯಬೇಕು.

ನೀರು: ನೀರಿನ ಸೇವನೆಯನ್ನು ಹೆಚ್ಚಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸರಳ ಮತ್ತು ನೇರವಾದ ಮಾರ್ಗಗಳಲ್ಲಿ ಒಂದಾಗಿದೆ. ಹೆಚ್ಚು ನೀರು ಕುಡಿಯುವುದರಿಂದ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. (ಸುದ್ದಿ ಮೂಲ)

Published On - 6:16 pm, Sun, 31 July 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ