ಅಧಿಕ ಕೊಲೆಸ್ಟ್ರಾಲ್​​​ನಿಂದಾಗಿ ದೇಹದಲ್ಲಿ ಈ ಲಕ್ಷಣಗಳು ಕಂಡುಬರಬಹುದು

ದೇಹದಲ್ಲಾಗುವ ಕೆಲವೊಂದು ಬದಲಾವಣೆಗಳು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಅಧಿಕವಾಗಿದೆ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದ ಇಂತಹ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯ ಬೇಡ.

ಅಧಿಕ ಕೊಲೆಸ್ಟ್ರಾಲ್​​​ನಿಂದಾಗಿ ದೇಹದಲ್ಲಿ ಈ ಲಕ್ಷಣಗಳು ಕಂಡುಬರಬಹುದು
Follow us
|

Updated on: Jul 02, 2023 | 7:08 PM

ಅಧಿಕ ಕೊಲೆಸ್ಟ್ರಾಲ್ ಇದು ಯಾವುದೇ ಲಕ್ಷಣಗಳನ್ನು ಹೊಂದಿರುವುದಿಲ್ಲ, ಜೊತೆಗೆ ಆರಂಭದಲ್ಲಿ ದೇಹದ ಮೇಲೆ ಯಾವುದೇ ಪರಿಣಾಮವನ್ನುಂಟು ಮಾಡುವುದಿಲ್ಲ. ಆದ್ದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಆಗಾಗ ಪರೀಕ್ಷಿಸುವುದು ಮುಖ್ಯ. ಇದರ ಹೊರತಾಗಿಯೂ ನಿಮ್ಮ ದೇಹದಲ್ಲಾಗುವ ಕೆಲವೊಂದು ಬದಲಾವಣೆಗಳು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಅಧಿಕವಾಗಿದೆ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದ ಇಂತಹ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯ ಬೇಡ.

ಕಾಲು ಭಾರವಾದಂತೆ ಅನುಭವ:

ತೀವ್ರವಾದ ನೋವಿನಿಂದಾಗಿ ಕಾಲುಗಳಲ್ಲಿ ಭಾರವಾದ ಭಾವನೆಯು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಿದೆ ಎಂಬುದರ ಸೂಚನೆಯಾಗಿರಬಹುದು. ವಾಕಿಂಗ್ ಸಮಯದಲ್ಲಿ ತೊಡೆಯ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳಬಹುದು.

ಆಗಾಗ್ಗೆ ಸೆಳೆತ:

ವಿಶೇಷವಾಗಿ ಹಿಮ್ಮಡಿ ಮತ್ತು ಕಾಲ್ಬೆರಳುಗಳಲ್ಲಿ ಸೆಳೆತ ಸಾಮಾನ್ಯವಾಗಿ ಅಧಿಕ ಕೊಲೆಸ್ಟ್ರಾಲ್ ಹೊಂದಿರುವವರಲ್ಲಿ ಕಂಡುಬರುತ್ತವೆ. ಹಾನಿಕಾರಕ ಅಪಧಮನಿಗಳ ಕಾರಣದಿಂದಾಗಿ ಇದು ಸಂಭವಿಸುತ್ತದೆ. ಸೆಳೆತಗಳು ಹೆಚ್ಚಾಗಿ ರಾತ್ರಿಯಲ್ಲಿ ಸಂಭವಿಸುತ್ತವೆ.

ಇದನ್ನೂ ಓದಿ: ದೇಹದ ಮೇಲಿನ ಮಚ್ಚೆಯ ಆಕಾರವು ಬದಲಾಗುತ್ತಿದೆಯೇ? ಇದು ಚರ್ಮದ ಕ್ಯಾನ್ಸರ್​​ನ ಅಪಾಯದ ಸೂಚಕವಾಗಿರಬಹುದು

ಶೀತ ಪಾದಗಳು:

ಹವಾಮಾನವು ತಂಪಾಗಿರುವಾಗ ಸಾಮಾನ್ಯವಾಗಿ ಪಾದಗಳು ತಣ್ಣಗಾಗುತ್ತದೆ. ಆದರೆ ಯಾವುದೇ ಕಾರಣವಿಲ್ಲದೆ ನಿಮ್ಮ ಕಾಲುಗಳು ತಣ್ಣಗಾಗುತ್ತಿದ್ದರೆ ನಿಮ್ಮ ಕೊಲೆಸ್ಟ್ರಾಲ್ ಅದಕ್ಕೆ ಕಾರಣವಾಗಬಹುದು. ಈ ಚಿಹ್ನೆಯನ್ನು ನಿರ್ಲಕ್ಷಿಸಬೇಡಿ ಮತ್ತು ಸಾಧ್ಯವಾದಷ್ಟು ಬೇಗ ನಿಮ್ಮ ರಕ್ತ ಪರೀಕ್ಷೆ ಮಾಡುವುದು ಅಗತ್ಯ.

ಚರ್ಮದ ಬಣ್ಣದಲ್ಲಿ ಬದಲಾವಣೆ:

ಮುಚ್ಚಿಹೋಗಿರುವ ಅಪಧಮನಿಗಳ ಕಾರಣ, ರಕ್ತದ ಹರಿವು ದೇಹದ ಕೆಲವು ಭಾಗಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಕಡಿಮೆ ರಕ್ತ ಪೂರೈಕೆಯಿಂದಾಗಿ ಚರ್ಮದ ಬಣ್ಣದಲ್ಲಿ ಬದಲಾವಣೆಯು ಕಂಡುಬರುತ್ತದೆ. ನಿಮ್ಮ ಚರ್ಮದ ಬಣ್ಣದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದರೆ ನಿರ್ಲಕ್ಷಿಸಬೇಡಿ.

ಗಾಯದ ಬೇಗ ಗುಣ ಆಗದೆ ಇರುವುದು:

ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವು ದೇಹದಲ್ಲಿ ಕಳಪೆ ರಕ್ತ ಪರಿಚಲನೆಗೆ ಕಾರಣವಾಗುತ್ತದೆ. ಇದು ಯಾವುದೇ ಗಾಯಗಳು ಬೇಗ ವಾಸಿಯಾಗದಿರಲು ಕಾರಣವಾಗುತ್ತದೆ. ಇದಕ್ಕೆ ಅಧಿಕ ಕೊಲೆಸ್ಟ್ರಾಲ್ ಮಟ್ಟದ ಹೊರತಾಗಿ ಮಧುಮೇಹ ಸೇರಿದಂತೆ ಇತರ ಕಾರಣಗಳೂ ಇರಬಹುದು. ಆದ್ದರಿಂದ ಇಂತಹ ಲಕ್ಷಣಗಳು ಕಂಡು ಬಂದರೆ ರಕ್ತ ಪರೀಕ್ಷೆಯ ಮಾಡಿಸುವುದು ಅಗತ್ಯ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ