AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಥೈರಾಯ್ಡ್​ ಸಮಸ್ಯೆ ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ

ಥೈರಾಯ್ಡ್ ರೋಗಲಕ್ಷಣಗಳನ್ನು ನಿರ್ವಹಿಸಲು ಆಹಾರವು ಸಹಾಯ ಮಾಡುತ್ತದೆ. ಪೌಷ್ಟಿಕ ಮತ್ತು ಸಮತೋಲಿತ ಆಹಾರದೊಂದಿಗೆ ಔಷಧಿಗಳನ್ನು ಸೇವಿಸುವ ಮೂಲಕ ರೋಗಲಕ್ಷಣಗಳನ್ನು ಕಡಿಮೆ ಮಾಡಿಕೊಳ್ಳಬಹುದು

Health Tips: ಥೈರಾಯ್ಡ್​ ಸಮಸ್ಯೆ ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Sep 17, 2021 | 9:13 AM

Share

ಜೀವನಶೈಲಿಯಲ್ಲಿನ ಕೆಲವು ಬದಲಾವಣೆಗಳು, ಆಹಾರ ಪದ್ಧತಿ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡದಿರುವುದು ಆರೋಗ್ಯ ಸುಧಾರಣೆಯಲ್ಲಿ ಸಮಸ್ಯೆ ಉಂಟು ಮಾಡಬಹುದು. ಥೈರಾಯ್ಡ್ ನಮ್ಮ ಗಂಟಲಿನಲ್ಲಿ ಕಂಡು ಬರುವ ಒಂದು ಗ್ರಂಥಿಯಾಗಿದೆ. ಇದರ ಕೆಲವು ಸಮಸ್ಯೆಗಳಿಂದಾಗಿ ಆಯಾಸ, ಶೀತ, ತೂಕ ಹೆಚ್ಚಾಗುವುದು ಮತ್ತು ಇತರ ಲಕ್ಷಣಗಳು ಕಾಣಿಸಿಕೊಳ್ಳು ಆರಂಭವಾಗುತ್ತದೆ. ಥೈರಾಯ್ಡ್​ನಲ್ಲಿ ಎರಡು ವಿಧಗಳಿವೆ. ಹೈಪೋಥೈರಾಯ್ಡಿಸಂ ಮತ್ತು ಹೈಪರ್ ಥೈರಾಯ್ಡಿಸಮ್. ಥೈರಾಯ್ಡ್ ಗ್ರಂಥಿಯ ಮೇಲೆ ಪರಿಣಾಮ ಬೀರುವ ಮೂಲಕ ಈ ಸಮಸ್ಯೆ ಕಾಡತೊಡಗುತ್ತದೆ.

ಥೈರಾಯ್ಡ್ ರೋಗಲಕ್ಷಣಗಳನ್ನು ನಿರ್ವಹಿಸಲು ಆಹಾರವು ಸಹಾಯ ಮಾಡುತ್ತದೆ. ಪೌಷ್ಟಿಕ ಮತ್ತು ಸಮತೋಲಿತ ಆಹಾರದೊಂದಿಗೆ ಔಷಧಿಗಳನ್ನು ಸೇವಿಸುವ ಮೂಲಕ ರೋಗಲಕ್ಷಣಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಅಯೋಡಿನ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಹೊಂದಿರುವ ವಸ್ತುಗಳನ್ನು ಸೇವಿಸುವುದರಿಂದ ಅದರ ರೋಗ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಥೈರಾಯ್ಡ್ ರೋಗ ಲಕ್ಷಣಗಳನ್ನು ಕಡಿಮೆ ಮಾಡುವಂತಹ ಹಣ್ಣುಗಳು ಬಗ್ಗೆ ನಾವು ತಿಳಿದುಕೊಳ್ಳೋಣ.

ಸೇಬು ಹಣ್ಣು ಸೇಬು ಹಣ್ಣು ಆರೋಗ್ಯಕರ ಆಹಾರಗಳಲ್ಲಿ ಒಖಂದಾಗಿದೆ. ಪ್ರತಿನಿತ್ಯ ಒಂದು ಸೇಬು ಹಣ್ಣು ಸೇವನೆಯಿಂದ ದೇಹದ ತೂಕವನ್ನು ನಿಯಂತ್ರಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಥೈರಾಯ್ಡ್ ಗ್ರಂಥಿಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಇದಲ್ಲದೇ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಬೊಜ್ಜು, ಮಧುಮೇಹ ಮತ್ತು ಹೃದಯ ಸಂಬಂಧಿ ಖಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

ಬೆರ್ರಿ ಹಣ್ಣು ಬೆರ್ರಿ ಹಣ್ಣುಗಳು ಅಂದರೆ ಆ್ಯಂಟಿ ಆ್ಯಕ್ಸಿಡೆಂಟ್​ಗಳಿಂದ ಸಮೃದ್ಧವಾಗಿದೆ. ಇದು ಥೈರಾಯ್ಡ್​ಗೆ ಪ್ರಯೋಜನಕಾರಿ. ಬೆರ್ರಿ ಹಣ್ಣುಗಳಲ್ಲಿ ವಿಟಮಿನ್ ಮತ್ತು ಖನಿಜಗಳಿಂದ ತುಂಬಿರುತ್ತದೆ. ಥೈರಾಯ್ಡ್ ಸಮಸ್ಯೆ ಇದ್ದಾಗ ಮಧುಮೇಹ ಮತ್ತು ತೂಕ ಹೆಚ್ಚಳದಂತಹ ಲಕ್ಷಣಗಳು ಕಂಡು ಬರುವುದು ಸಹಜ. ಹಾಗಿರುವಾಗ ನಿಮ್ಮ ಆಹಾರದಲ್ಲಿ ಸ್ಟ್ರಾಬೆರಿ, ಬೆರ್ರಿ ಹಣ್ಣುಗಳನ್ನು ಸೇವಿಸಿ.

ಕಿತ್ತಳೆ ಕಿತ್ತಳೆಯಲ್ಲಿ ವಿಟಮಿನ್ ಸಿ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್​ಗಳು ಸಮೃದ್ಧವಾಗಿರುವುದರಿಂದ ಇದು ಫ್ರೀ ರಾಡಿಕಲ್ಸ್​ಗಳನ್ನು ದೂರವಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲದೇ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ.

ಅನಾನಸ್ ಅನಾನಸ್​ನಲ್ಲಿ ವಿಟಮಿನ್ ಸಿ ಮತ್ತು ಮ್ಯಾಂಗನೀಸ್​ ಸಮೃದ್ಧವಾಗಿರುತ್ತದೆ. ಈ ಎರಡೂ ಪೋಷಕಾಂಶಗಳು ದೇಹವನ್ನು ಸ್ವತಂತ್ರ ರಾಡಿಕಲ್ಸ್​ಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಬಿ ಸಮೃದ್ಧವಾಗಿದ್ದು, ನಿಮ್ಮ ಆಯಾಸವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅನಾನಸ್ ಹಣ್ಣು ಕ್ಯಾನ್ಸರ್, ಗಡ್ಡೆ ಮತ್ತು ಮಲಬದ್ಧತೆ ರೋಗಗಳಿಂದ ಪರಿಹಾರ ಕಂಡುಕೊಳ್ಳಲು ಸಹಾಯಕಾರಿ.

ಇದನ್ನೂ ಓದಿ:

Power Nap: ಹಗಲಲ್ಲಿ ಮಲಗುವ ಅಭ್ಯಾಸ ಇದೆಯೇ? ಈ 5 ಆರೋಗ್ಯಯುತ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ಒಮ್ಮೆ ಮಾಡಿಟ್ಟ ಚಹಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ; ಕಾರಣ ತಿಳಿದುಕೊಳ್ಳಿ

(Health tips eat these 4 fruits for manage thyroid problems)

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ