Health Tips: ಬೆಳ್ಳುಳ್ಳಿ ಮತ್ತು ಜೇನುತುಪ್ಪದಲ್ಲಡಗಿದೆ ದಿವ್ಯ ಔಷಧ; ತೂಕ ನಷ್ಟಕ್ಕೆ ರಾಮಬಾಣ

ಬೆಳ್ಳುಳ್ಳಿ ಮತ್ತು ಜೇನುತುಪ್ಪ ದಿವ್ಯ ಔಷಧವಿದ್ದಂತೆ ಎನ್ನುತ್ತಾರೆ ತಜ್ಞರು. ಇವುಗಳನ್ನು ನಿತ್ಯವೂ ಸೇವಿಸಿದರೆ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ.

Health Tips: ಬೆಳ್ಳುಳ್ಳಿ ಮತ್ತು ಜೇನುತುಪ್ಪದಲ್ಲಡಗಿದೆ ದಿವ್ಯ ಔಷಧ; ತೂಕ ನಷ್ಟಕ್ಕೆ ರಾಮಬಾಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 19, 2022 | 7:00 AM

ಬೆಳ್ಳುಳ್ಳಿ ಮತ್ತು ಜೇನುತುಪ್ಪವು ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಜೇನುತುಪ್ಪ ಮತ್ತು ಬೆಳ್ಳುಳ್ಳಿಯನ್ನು ಒಟ್ಟಿಗೆ ಸೇವಿಸುವುದರಿಂದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್, ಆ್ಯಂಟಿ ಬಯೋಟಿಕ್, ಆ್ಯಂಟಿ ಫಂಗಲ್ ಮತ್ತು ಸೋಂಕು ನಿವಾರಕ ಗುಣಗಳು ಹೇರಳವಾಗಿವೆ. ಇವುಗಳನ್ನು ಒಟ್ಟಿಗೆ ಸೇವಿಸುವುದರಿಂದ ಜ್ವರ, ವೈರಲ್, ನೆಗಡಿ ಮತ್ತು ಕೆಮ್ಮು ಮುಂತಾದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಇದಲ್ಲದೆ, ಬೆಳ್ಳುಳ್ಳಿಯಲ್ಲಿ ಅಲಿಸಿನ್ ಮತ್ತು ಫೈಬರ್ ಗುಣಲಕ್ಷಣಗಳು ಸಹ ಇವೆ. ಇದು ತೂಕ ಹೆಚ್ಚಾಗುವುದನ್ನು ಸಹ ನಿಯಂತ್ರಿಸುತ್ತದೆ. ಆದ್ದರಿಂದಲೇ ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಇವೆರಡೂ ದಿವ್ಯ ಔಷಧವಿದ್ದಂತೆ ಎನ್ನುತ್ತಾರೆ ತಜ್ಞರು. ಇವುಗಳನ್ನು ನಿತ್ಯವೂ ಸೇವಿಸಿದರೆ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂದು ಹೇಳಲಾಗುತ್ತದೆ.

ಬೆಳ್ಳುಳ್ಳಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ಆಗುವ ಪ್ರಯೋಜನಗಳು:

ತೂಕವನ್ನು ಕಡಿಮೆ ಮಾಡಬಹುದು: ಬೆಳ್ಳುಳ್ಳಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ದೇಹದಲ್ಲಿನ ಹೆಚ್ಚುವರಿ ಕೊಬ್ಬು ಕಡಿಮೆಯಾಗುತ್ತದೆ. ಇದು ಬೆಳೆಯುತ್ತಿರುವ ಬೊಜ್ಜನ್ನು ನಿಯಂತ್ರಿಸುತ್ತದೆ. ನೀವು ಸಹ ತೂಕ ಇಳಿಸಿಕೊಳ್ಳಲು ಬಯಸಿದರೆ, ನಿಯಮಿತವಾಗಿ ಜೇನುತುಪ್ಪ ಮತ್ತು ಬೆಳ್ಳುಳ್ಳಿಯ ಮಿಶ್ರಣವನ್ನು ಸೇವಿಸಿ.

ಶೀತದಿಂದ ಮುಕ್ತಿ: ಜೇನು ಮತ್ತು ಬೆಳ್ಳುಳ್ಳಿ ತಿನ್ನುವುದರಿಂದ ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ಕಡಿಮೆಯಾಗುತ್ತದೆ. ಇದರ ಉರಿಯೂತ ನಿವಾರಕ ಗುಣಗಳು ಗಂಟಲಿನ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ. ಇದರಿಂದ ನೋವು ಮತ್ತು ಕಫದಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ.

ಹೃದಯವನ್ನು ಆರೋಗ್ಯವಾಗಿರಿಸುತ್ತದೆ: ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಮಿಶ್ರಣವನ್ನು ತಿನ್ನುವುದರಿಂದ ಹೃದಯವನ್ನು ಆರೋಗ್ಯವಾಗಿಡಬಹುದು. ಇದರ ಸೇವನೆಯಿಂದ ಹೃದಯದ ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಹೊರಹಾಕುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಹೃದಯವನ್ನು ಸದಾ ಆರೋಗ್ಯವಾಗಿರಿಸುತ್ತದೆ.

ಹೊಟ್ಟೆ ಸಮಸ್ಯೆ ನಿವಾರಿಸುತ್ತದೆ: ಬೆಳ್ಳುಳ್ಳಿ – ಜೇನುತುಪ್ಪದ ಮಿಶ್ರಣವು ಹೊಟ್ಟೆಗೆ ಸಂಬಂಧಿಸಿದ ಅಸ್ವಸ್ಥತೆಗಳನ್ನು ತೆಗೆದುಹಾಕುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ನೀವು ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದರೆ ನಿಮ್ಮ ಆಹಾರದಲ್ಲಿ ಬೆಳ್ಳುಳ್ಳಿ ಮತ್ತು ಜೇನುತುಪ್ಪವನ್ನು ಸೇವಿಸಿ. ಬೆಳ್ಳುಳ್ಳಿ-ಜೇನು ಮಿಶ್ರಣವು ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್