Kannada News Lifestyle Health Tips : Top wellness habits to carry into the New Year 2025 Kannada News
Health Tips : 2025ಕ್ಕೆ ಫಿಟ್ ಹಾಗೂ ಆರೋಗ್ಯವಂತ ವ್ಯಕ್ತಿ ನೀವಾಗಲು ಬಯಸಿದ್ರೆ ಇಲ್ಲಿದೆ ಸಿಂಪಲ್ ಟಿಪ್ಸ್
ಇಂದಿನ ಜೀವನ ಶೈಲಿ ಹಾಗೂ ಆಹಾರ ಕ್ರಮದಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಹೀಗಾಗಿ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳು ಮಾಡಿಕೊಂಡು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿದರೆ ಆರೋಗ್ಯವು ಸುಧಾರಿಸುತ್ತದೆ. 2025 ಕ್ಕೆ ಕೆಲ ಸಲಹೆಗಳನ್ನು ಅನುಸರಿಸುವ ಮೂಲಕ ಆರೋಗ್ಯವಂತ ವ್ಯಕ್ತಿ ನೀವಾಗಬಹುದು. ಹಾಗಾದ್ರೆ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಏನೆಲ್ಲಾ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳಬಹುದು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಾಂದರ್ಭಿಕ ಚಿತ್ರ
Follow us on
2024 ರ ಕೊನೆಯ ತಿಂಗಳಿನಲ್ಲಿ ಇದ್ದೇವೆ. ಹೊಸ ವರ್ಷಕ್ಕೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಅನೇಕ ಜನರು ಕೆಲವು ಅಭ್ಯಾಸಗಳನ್ನು ಬದಲಾಯಿಸಲು ಅಥವಾ ಹೊಸ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಹೊಸ ವರ್ಷದ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ. ಫಿಟ್ ಮತ್ತು ಆರೋಗ್ಯಕರವಂತ ವ್ಯಕ್ತಿ ನೀವಾಗ ಬಯಸಿದರೆ ಈ ನಿಮ್ಮ ಜೀವನ ಶೈಲಿಯಲ್ಲಿ ಈ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಅಗತ್ಯ.
ಸಮತೋಲಿತ ಆಹಾರ ಸೇವಿಸುವತ್ತ ಗಮನ ಕೊಡಿ : ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪ್ರೋಟೀನ್, ಕಾರ್ಬೋಹೈಡ್ರೇಟ್,, ಕೊಬ್ಬುಗಳು, ವಿಟಮಿನ್ ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಆಹಾರಗಳನ್ನು ಸೇವಿಸುತ್ತ ಗಮನ ಕೊಡಿ. ಅದಲ್ಲದೇ ನಿಮ್ಮ ಆಹಾರ ಕ್ರಮದಲ್ಲಿ ತಾಜಾ ಹಣ್ಣುಗಳು, ಹಸಿರು ತರಕಾರಿಗಳು, ಧಾನ್ಯಗಳು ಸೇರಿರಲಿ. ಜಂಕ್ ಫುಡ್, ಅತಿಯಾದ ಸಿಹಿತಿಂಡಿಗಳು ಮತ್ತು ಉಪ್ಪು ಸೇವನೆಯಿಂದ ದೂರವಿರಿ. 2025 ರಲ್ಲಿ ಸಮತೋಲಿತ ಆಹಾರ ಸೇವಿಸುವ ಅಭ್ಯಾಸವನ್ನು ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.
ದಿನನಿತ್ಯ ವ್ಯಾಯಾಮ ಮಾಡುವ ಅಭ್ಯಾಸವಿರಲಿ : ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮವಾಗಿರಲು ನಿಯಮಿತವಾಗಿ ವ್ಯಾಯಾಮ ಮಾಡುವುದು ಬಹಳ ಮುಖ್ಯ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಜಾಗಿಂಗ್, ಸೈಕ್ಲಿಂಗ್, ಯೋಗ ಅಥವಾ ಏರೋಬಿಕ್ಸ್‌ನಂತಹ ಕಾರ್ಡಿಯೋ ನಂತಹ ವ್ಯಾಯಾಮಗಳಿಗೆ ಹೆಚ್ಚು ಒತ್ತು ನೀಡಿ. ಆರೋಗ್ಯವನ್ನು ಕಾಪಾಡಿಕೊಳ್ಳುವುದರೊಂದಿಗೆ ತೂಕವನ್ನು ಇಳಿಸಬೇಕು ಎನ್ನುವುದಿದ್ದರೆ ತಜ್ಞರ ಸಲಹೆಯನ್ನು ಪಡೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.
ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ : ದೇಹದಲ್ಲಿರುವ ಪ್ರತಿಯೊಂದು ಅಂಗವು ಸರಿಯಾಗಿ ಕಾರ್ಯ ನಿರ್ವಹಿಸಬೇಕಾದರೆ ನೀರು ಅವಶ್ಯಕ. ಪ್ರತಿಯೊಬ್ಬ ವ್ಯಕ್ತಿಯೂ ದಿನಕ್ಕೆ ಎರಡರಿಂದ ಮೂರು ಲೀಟರ್ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ದೇಹವನ್ನು ತೇವಾಂಶವಾಗಿಡಲು, ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು, ಉತ್ತಮ ಜೀರ್ಣಕ್ರಿಯೆಗಾಗಿ ದೇಹಕ್ಕೆ ನೀರು ಬಹಳ ಮುಖ್ಯ. ಆ ಪ್ರತಿದಿನ ಕನಿಷ್ಠ 2 ಲೀಟರ್ ನೀರು ಕುಡಿಯಲು ಪ್ರಯತ್ನಿಸಿ. ಈ ಮೂಲಕ ಮುಂದಿನ ವರ್ಷ ಇದನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ.
ಇಂತಿಷ್ಟು ಗಂಟೆಗಳ ಕಾಲ ನಿದ್ರಿಸಿ : ಒಬ್ಬ ವ್ಯಕ್ತಿಯೂ ಆರೋಗ್ಯವಂತನಾಗಿರಲು ನಿದ್ರೆಯೂ ಅತ್ಯವಶ್ಯಕ. ನಿದ್ರೆ ನಮ್ಮ ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ನಿದ್ರೆಯಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಮೂಡ್ ಸ್ವಿಂಗ್, ಕಿರಿಕಿರಿ ಸೇರಿದಂತೆ ಇನ್ನಿತ್ತರ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಪ್ರತಿದಿನ 7-8 ಗಂಟೆಗಳ ಕಾಲ ನಿದ್ರೆ ಮಾಡಿ. ರಾತ್ರಿ ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿ ಬೆಳಗ್ಗೆ ಬೇಗನೇ ಎದ್ದೇಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಿ : ಉತ್ತಮ ಆರೋಗ್ಯವನ್ನು ಹೊಂದಬೇಕಾದರೆ ಸೇವಿಸುವ ಆಹಾರದೊಂದಿಗೆ ಸಮಯವು ಕೂಡ ಬಹಳ ಮುಖ್ಯವಾಗುತ್ತದೆ. ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿರಲು ಸಾಧ್ಯ. ಹೀಗಾಗಿ ಪ್ರತಿದಿನ ಸಮಯಕ್ಕೆ ಸರಿಯಾಗಿ ಊಟ ತಿಂಡಿಯನ್ನು ಸೇವಿಸುವುದನ್ನು ಅಭ್ಯಾಸವನ್ನು ಬೆಳೆಸಿಕೊಳ್ಳಿ. ತಡರಾತ್ರಿ ಆಹಾರ ಸೇವಿಸುವುದನ್ನು ತಪ್ಪಿಸುವುದರೊಂದಿಗೆ ಸಂಜೆ ಏಳು ಗಂಟೆಯೊಳಗೆ ಊಟವನ್ನು ಮಾಡಿ ಮುಗಿಸಿ.
ಒತ್ತಡ ನಿರ್ವಹಣೆ ಬಗ್ಗೆ ತಿಳಿದಿರಲಿ : ಇತ್ತೀಚೆಗಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗೆ ಒತ್ತಡವು ಪ್ರಮುಖ ಕಾರಣವಾಗಿದೆ. ಒತ್ತಡವು ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ. ಹೀಗಾಗಿ ಧ್ಯಾನ, ಯೋಗ ಮತ್ತು ಇತರ ಹಲವು ಒತ್ತಡ ನಿರ್ವಹಣೆ ತಂತ್ರಗಳನ್ನು ಅಳವಡಿಸಿಕೊಂಡು ದಿನನಿತ್ಯದ ಕೆಲಸವನ್ನು ಸುಗಮವಾಗಿಸಿಕೊಳ್ಳಿ. ಅದಲ್ಲದೇ, ಕೆಲಸದ ನಡುವೆ ವಿಶ್ರಾಂತಿ, ಇಷ್ಟದ ಹವ್ಯಾಸದಲ್ಲಿ ತೊಡಗಿಕೊಳ್ಳುವ ಮೂಲಕ ಒತ್ತಡವನ್ನು ನಿರ್ವಹಿಸುವ ಕಲೆ ತಿಳಿದಿರಲಿ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ