ಮಲಬದ್ಧತೆ ಸಮಸ್ಯೆ ನಿವಾರಣೆಗೆ ಈ ತರಕಾರಿಗಳಿಗೂ ನಿಮ್ಮ ಅಡುಗೆಯಲ್ಲಿ ಜಾಗವಿರಲಿ

ತರಕಾರಿಗಳು, ಹಣ್ಣುಗಳು, ಡ್ರೈಫ್ರೂಟ್ಸ್, ಓಟ್ಸ್ ಮತ್ತು ಬಾರ್ಲಿಯಲ್ಲಿ ನಾರಿನಂಶ ಇರುತ್ತದೆ. ಫೈಬರ್ ಅಂಶ ಕ್ಯಾನ್ಸರ್ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಫೈಬರ್ ಅಥವಾ ನಾರಿನಂಶ ತೂಕ ಇಳಿಸಲು ಸಹಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ, ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.

ಮಲಬದ್ಧತೆ ಸಮಸ್ಯೆ ನಿವಾರಣೆಗೆ ಈ ತರಕಾರಿಗಳಿಗೂ ನಿಮ್ಮ ಅಡುಗೆಯಲ್ಲಿ ಜಾಗವಿರಲಿ
ನಾರಿನಂಶ ಹೆಚ್ಚಾಗಿರುವ ಆಹಾರImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 26, 2023 | 7:40 PM

ದೇಹದಲ್ಲಿ ನಾರಿನಂಶ ಕಡಿಮೆಯಾದರೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ, ನಾರಿನಂಶ ಹೆಚ್ಚಾಗಿರುವ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಫೈಬರ್ ಅಥವಾ ನಾರಿನಂಶ ತೂಕ ಇಳಿಸಲು ಸಹಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ, ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. ಹಾಗೇ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ತರಕಾರಿಗಳು, ಹಣ್ಣುಗಳು, ಡ್ರೈಫ್ರೂಟ್ಸ್, ಓಟ್ಸ್ ಮತ್ತು ಬಾರ್ಲಿಯಲ್ಲಿ ನಾರಿನಂಶ ಇರುತ್ತದೆ. ಫೈಬರ್ ಅಂಶ ಕ್ಯಾನ್ಸರ್ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ತರಕಾರಿಗಳು ನಮ್ಮ ದೇಹಕ್ಕೆ ಅತ್ಯಂತ ಒಳ್ಳೆಯದು. ಆದರೆ, ಕೆಲವು ತರಕಾರಿಗಳಲ್ಲಿ ಮಾತ್ರ ಫೈಬರ್ ಅಂಶ ಹೇರಳವಾಗಿದೆ. ಅಂತಹ ಕೆಲವು ತರಕಾರಿಗಳ ಪಟ್ಟಿ ಇಲ್ಲಿದೆ. ಇದನ್ನು ನಿಮ್ಮ ಅಡುಗೆ, ಸಲಾಡ್​ನಲ್ಲಿ ಸೇರಿಸಿಕೊಳ್ಳಲು ಮರೆಯಬೇಡಿ.

ಇದನ್ನೂ ಓದಿ: ತರಕಾರಿ ಹಸಿರಾಗಿ, ಫ್ರೆಶ್ ಆಗಿದೆ ಎಂದು ಮೋಸ ಹೋಗಬೇಡಿ; ಈ ವಿಡಿಯೋ ನೋಡಿ

ಹೂಕೋಸು: ಹೂಕೋಸು ಅನೇಕ ಪಾಕವಿಧಾನಗಳಲ್ಲಿ ಬಳಸಲಾಗುವ ಬಹುಮುಖ ತರಕಾರಿಯಾಗಿದೆ. ಕಾರ್ಬೋಹೈಡ್ರೇಟ್ ಸೇವನೆಯನ್ನು ಕಡಿಮೆ ಮಾಡಲು ಪ್ರಯತ್ನಿಸುವವರು ಹೂಕೋಸಿನ ಬಳಕೆ ಹೆಚ್ಚು ಮಾಡುತ್ತಾರೆ. ಇದು ಪೌಷ್ಠಿಕಾಂಶದ ಶಕ್ತಿ ಕೇಂದ್ರವಾಗಿದೆ. ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಫೋಲೇಟ್‌ನಿಂದ ತುಂಬಿದೆ. ಹೂಕೋಸು ಹೃದಯದ ಆರೋಗ್ಯಕ್ಕೆ ಒಳ್ಳೆಯದು.

ಕ್ಯಾರೆಟ್: ಕ್ಯಾರೆಟ್‌ಗಳು ಪ್ರತಿ ಕಪ್‌ಗೆ 3.6 ಗ್ರಾಂ ಫೈಬರ್ ಅನ್ನು ನೀಡುತ್ತವೆ. ಇದು ಹೆಚ್ಚಿನ ಫೈಬರ್ ಅಂಶವಿರುವ ತರಕಾರಿಯಾಗಿದೆ. ಕ್ಯಾರೆಟ್ ಕಣ್ಣಿನ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಕ್ಯಾರೆಟ್‌ನಲ್ಲಿರುವ ಕರಗುವ ಫೈಬರ್ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಗೆಣಸು: ಗೆಣಸಿನಲ್ಲಿ ಫೈಬರ್ ಅಂಶ ಯಥೇಚ್ಛವಾಗಿದೆ. ಗೆಣಸು ಹೆಚ್ಚಿನ ಫೈಬರ್ ಮತ್ತು ವಿಟಮಿನ್ ಎ ಮತ್ತು ಸಿ ಅಂಶವನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪಾಲಕ್: ಪಾಲಕ್ ಅನ್ನು ಸಲಾಡ್, ಚಟ್ನಿ, ಸ್ಮೂಥಿ ಹೀಗೆ ಯಾವ ರೂಪದಲ್ಲಿ ಬೇಕಾದರೂ ಸೇವಿಸಬಹುದು. ಪಾಲಕ್ ಸೊಪ್ಪು ಮೂಳೆಯ ಆರೋಗ್ಯ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಬೀಟಾ-ಕ್ಯಾರೋಟಿನ್‌ನಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ.

ಇದನ್ನೂ ಓದಿ: ದಿನಕ್ಕೆ ಐದಾರು ಎಸಳು ಪುದೀನಾ ಸೊಪ್ಪು ತಿಂದರೆ ಏನೇನೆಲ್ಲ ಆಗುತ್ತೆ ನೋಡಿ!

ಬ್ರೊಕೊಲಿ: ಬ್ರೊಕೊಲಿಯಲ್ಲಿ ಫೈಬರ್ ಅಂಶವಿದ್ದು, ಇದರ ಜೊತೆಗೆ ಆಂಟಿಆಕ್ಸಿಡೆಂಟ್ ವಿಟಮಿನ್‌ಗಳಾದ ಎ ಮತ್ತು ಸಿ, ಖನಿಜ, ಕ್ಯಾಲ್ಸಿಯಂ ಕೂಡ ಅಧಿಕವಾಗಿದೆ.

ಬಟಾಣಿ: ಬಟಾಣಿ ನೋಡಲು ಚಿಕ್ಕದಾದರೂ ಅದರ ಕೀರ್ತಿ ದೊಡ್ಡದು. ಪ್ರತಿ ಕಪ್‌ಗೆ 7 ಗ್ರಾಂ ಫೈಬರ್‌ ಅನ್ನು ಇದು ಹೊಂದಿರುತ್ತದೆ. ದೇಹಕ್ಕೆ ಖನಿಜ ಮತ್ತು ಫೈಬರ್ ಅಂಶವನ್ನು ಬಟಾಣಿ ಒದಗಿಸುತ್ತದೆ.

ಇದರ ಜೊತೆಗೆ ಇಡೀ ಧಾನ್ಯಗಳು, ಪಾಪ್​ಕಾರ್ನ್, ಅವಕಾಡೊ, ಬೆರಿ ಹಣ್ಣುಗಳು, ಸೇಬುಹಣ್ಣು, ಹರಿವೆ, ಬಸಳೆ, ಪಾಲಕ್ ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸಲು ಮರೆಯಬೇಡಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ