ಈ ತರಕಾರಿಗಳು ನಿಮ್ಮ ಸಕ್ಕರೆ ಮಟ್ಟವನ್ನು ರಹಸ್ಯವಾಗಿ ಹೆಚ್ಚಿಸಬಹುದು ಎಚ್ಚರ!

ಮಧುಮೇಹ ಕೌಟುಂಬಿಕ ಹಿನ್ನೆಲೆಯಿಂದಲೂ ಬರಬಹುದು, ಅತಿಯಾಗಿ ಸಕ್ಕರೆ ಸೇವನೆಯಿಂದಲೂ ಬರಬಹುದು, ಅಥವಾ ಸಕ್ಕರೆ ಅಂಶ ಹೆಚ್ಚಾಗಿರುವ ಆಹಾರ ಸೇವನೆಯಿಂದಲೂ ಬರಬಹುದು. ನಾವು ಸಕ್ಕರೆ ಸೇವನೆಯನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡಿದರೂ ಕೆಲವೊಮ್ಮೆ ರಕ್ತದ ಸಕ್ಕರೆ ಮಟ್ಟ ಹೆಚ್ಚಾಗಿಬಿಡುತ್ತದೆ. ಇದಕ್ಕೆ ಕಾರಣವೇನಿರಬಹುದು ಎಂದು ನೀವು ಯೋಚಿಸಿದ್ದೀರಾ?

ಈ ತರಕಾರಿಗಳು ನಿಮ್ಮ ಸಕ್ಕರೆ ಮಟ್ಟವನ್ನು ರಹಸ್ಯವಾಗಿ ಹೆಚ್ಚಿಸಬಹುದು ಎಚ್ಚರ!
ತರಕಾರಿImage Credit source: iStock
Follow us
ಸುಷ್ಮಾ ಚಕ್ರೆ
|

Updated on: Mar 18, 2024 | 4:17 PM

ಸ್ನಾಯುಗಳು, ಅಂಗಾಂಶಗಳು ಮತ್ತು ಮೆದುಳಿನಲ್ಲಿರುವ ಎಲ್ಲಾ ಜೀವಕೋಶಗಳಿಗೆ ಶಕ್ತಿಯ ಮೂಲವಾಗಿ ಮಾನವನ ದೇಹಕ್ಕೆ ಗ್ಲೂಕೋಸ್ ಅಂಶದ ಅಗತ್ಯವಿರುತ್ತದೆ. ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಮೇದೋಜ್ಜೀರಕ ಗ್ರಂಥಿಯಿಂದ ಬಿಡುಗಡೆ ಮಾಡುವ ‘ಇನ್ಸುಲಿನ್’ ಎಂಬ ಹಾರ್ಮೋನ್ ನಿಯಂತ್ರಿಸುತ್ತದೆ. ಮಧುಮೇಹ ಇರುವವರಲ್ಲಿ ಮೇದೋಜ್ಜೀರಕ ಗ್ರಂಥಿಯಿಂದ ಸ್ರವಿಸುವ ಇನ್ಸುಲಿನ್ ಅಸಮರ್ಪಕ ಪ್ರಮಾಣದಲ್ಲಿರುತ್ತದೆ ಅಥವಾ ದೇಹದ ಜೀವಕೋಶಗಳು ಇನ್ಸುಲಿನ್‌ಗೆ ನಿರೋಧಕವಾಗಿರುತ್ತವೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ನಾವು ತಿನ್ನುವ ಕೆಲವು ತರಕಾರಿಗಳು ಕೂಡ ರಕ್ತದ ಸಕ್ಕರೆಮಟ್ಟವನ್ನು ಹೆಚ್ಚಿಸಬಹುದು. ಆ ತರಕಾರಿಗಳು ಯಾವುವು?

ಕ್ಯಾರೆಟ್:

ಕ್ಯಾರೆಟ್ ವಿಟಮಿನ್ ಎ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದರೂ ಅದು ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ.

ಬೀಟ್ರೂಟ್:

ಬೀಟ್ರೂಟ್​ ಗೆಡ್ಡೆಗಳು ನೈಸರ್ಗಿಕ ಸಕ್ಕರೆ ಅಂಶಗಳನ್ನು ಹೊಂದಿರುತ್ತವೆ. ಇದು ಸ್ವಲ್ಪ ಸಿಹಿ ರುಚಿಯನ್ನು ನೀಡುತ್ತದೆ. ಅವುಗಳನ್ನು ಮಿತವಾಗಿ ಸೇವಿಸುವುದು ಸೂಕ್ತವಾಗಿದೆ. ವಿಶೇಷವಾಗಿ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡುವವರಿಗೆ ಬೀಟ್ರೂಟ್ ಒಳ್ಳೆಯದಲ್ಲ.

ಇದನ್ನೂ ಓದಿ: ಉಪ್ಪಿಲ್ಲದ ಆಹಾರ, 10 ನಿಮಿಷದ ವಾಕ್; 1 ವರ್ಷದಲ್ಲಿ 23 ಕೆಜಿ ತೂಕ ಇಳಿಸಿಕೊಂಡ ಮಹಿಳೆ!

ಅವರೆಕಾಳು:

ಅವರೆಕಾಳು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿದ್ದು ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪ್ರಭಾವಿಸುತ್ತದೆ. ವಿಶೇಷವಾಗಿ ಕಡಿಮೆ ಕಾರ್ಬ್ ಆಹಾರ ಅಥವಾ ಮಧುಮೇಹವನ್ನು ನಿರ್ವಹಿಸುವವರಿಗೆ ಅವರೆಕಾಳು ಒಳ್ಳೆಯದಲ್ಲ.

ಜೋಳ:

ಇತರ ತರಕಾರಿಗಳಿಗೆ ಹೋಲಿಸಿದರೆ ಜೋಳ ಹೆಚ್ಚಿನ ಸಕ್ಕರೆ ಅಂಶವನ್ನು ಹೊಂದಿದೆ. ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಯಸುವವರು ಮಿತವಾಗಿ ಜೋಳವನ್ನು ತಿನ್ನುವುದು ಉತ್ತಮ.

ಗೆಣಸು:

ಹೆಚ್ಚಿನ ಫೈಬರ್ ಅಂಶ ಮತ್ತು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕದಿಂದಾಗಿ ಗೆಣಸು ನೈಸರ್ಗಿಕ ಸಕ್ಕರೆ ಅಂಶಗಳನ್ನು ಹೊಂದಿರುತ್ತದೆ. ಅದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Chikoo Benefits: ತೂಕ ಇಳಿಸಲು ಸಪೋಟ ಹೇಗೆ ಸಹಕಾರಿ?

ಆಲೂಗಡ್ಡೆ:

ನಿಯಮಿತವಾಗಿ ಆಲೂಗಡ್ಡೆ ಸೇವನೆಯಿಂದ ಅದರಲ್ಲೂ ವಿಶೇಷವಾಗಿ ಫ್ರೈಸ್ ಅಥವಾ ಚಿಪ್ಸ್‌ನಂತಹ ಸಂಸ್ಕರಿಸಿದ ರೂಪಗಳಲ್ಲಿ ಸೇವಿಸಿದಾಗ ಅವುಗಳ ಹೆಚ್ಚಿನ ಪಿಷ್ಟ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ತ್ವರಿತ ಏರಿಕೆ ಉಂಟಾಗುತ್ತದೆ.

ಕುಂಬಳಕಾಯಿ:

ಕುಂಬಳಕಾಯಿಯು ವಿಟಮಿನ್ ಎ ಮತ್ತು ಫೈಬರ್‌ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದರೂ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮ ಬೀರುವ ನೈಸರ್ಗಿಕ ಸಕ್ಕರೆಗಳನ್ನು ಒಳಗೊಂಡಿರುತ್ತದೆ. ವಿಶೇಷವಾಗಿ ಇವುಗಳನ್ನು ದೊಡ್ಡ ಪ್ರಮಾಣದಲ್ಲಿ ಅಥವಾ ಕುಂಬಳಕಾಯಿ ಪೈನಂತಹ ಸಂಸ್ಕರಿಸಿದ ರೂಪದಲ್ಲಿ ಸೇವಿಸಿದಾಗ ಸಕ್ಕರೆಮಟ್ಟ ಹೆಚ್ಚಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ