AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digestion: ರಾತ್ರಿ ಚೆನ್ನಾಗಿ ಜೀರ್ಣಕ್ರಿಯೆ ಆಗಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ಜೀರ್ಣಕಾರಿ ಸಮಸ್ಯೆ ಅಥವಾ ಸೂಕ್ಷ್ಮತೆಯನ್ನು ಪ್ರಚೋದಿಸುವ ಆಹಾರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಪ್ರತಿಯೊಬ್ಬರ ಜೀರ್ಣಾಂಗ ವ್ಯವಸ್ಥೆಯು ವಿಶಿಷ್ಟವಾಗಿರುತ್ತದೆ. ನಿಮ್ಮ ದೇಹಕ್ಕೆ ಯಾವುದು ಹೊಂದುತ್ತದೆ ಎಂಬುದನ್ನು ಕಂಡುಹಿಡಿಯುವುದು ಅತ್ಯಗತ್ಯ. ನೀವು ದೀರ್ಘಕಾಲದ ಜೀರ್ಣಕಾರಿ ಸಮಸ್ಯೆಗಳನ್ನು ಹೊಂದಿದ್ದರೆ, ಆಹಾರ ತಜ್ಞರ ಮಾರ್ಗದರ್ಶನವನ್ನು ಪಡೆಯುವುದು ಸೂಕ್ತ.

Digestion: ರಾತ್ರಿ ಚೆನ್ನಾಗಿ ಜೀರ್ಣಕ್ರಿಯೆ ಆಗಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
ಜೀರ್ಣಕ್ರಿಯೆImage Credit source: iStock
ಸುಷ್ಮಾ ಚಕ್ರೆ
|

Updated on:Feb 26, 2024 | 7:42 PM

Share

ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಉತ್ತಮ ಜೀರ್ಣಕ್ರಿಯೆ (Digestion) ಅತ್ಯಗತ್ಯ. ಸರಿಯಾಗಿ ಜೀರ್ಣಕ್ರಿಯೆ ಆಗದಿದ್ದರೆ ಅಸ್ವಸ್ಥತೆ, ಗ್ಯಾಸ್ಟ್ರಿಕ್ (Gastric) ಮತ್ತು ಇತರ ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು. ನಿಮ್ಮ ಭೋಜನದ ಅಭ್ಯಾಸಗಳು ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಬಹುದು. ಉತ್ತಮ ಜೀರ್ಣಕ್ರಿಯೆಗಾಗಿ ರಾತ್ರಿಯ ವೇಳೆ ಈ 7 ಅಭ್ಯಾಸಗಳನ್ನು ರೂಢಿಸಿಕೊಳ್ಳಿ.

ತುಂಬಾ ವೇಗವಾಗಿ ತಿನ್ನಬೇಡಿ:

ಅತಿಯಾಗಿ ತಿನ್ನುವುದು ಮತ್ತು ವೇಗವಾಗಿ ತಿನ್ನುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಒಡೆಯಲು ಕಷ್ಟವಾಗುತ್ತದೆ. ಜಗಿದು, ಆಹಾರವನ್ನು ಸವಿಯಲು ನಿಮ್ಮ ಸಮಯವನ್ನು ತೆಗೆದುಕೊಳ್ಳಿ, ಸಂಪೂರ್ಣವಾಗಿ ಅಗಿಯಿರಿ ಮತ್ತು ನಿಮ್ಮ ಊಟವನ್ನು ಆನಂದಿಸಿ. ಇದು ನಿಮ್ಮ ದೇಹವು ಜೀರ್ಣಕಾರಿ ಕಿಣ್ವಗಳನ್ನು ಉತ್ಪಾದಿಸಲು ಅನುವು ಮಾಡಿಕೊಡುತ್ತದೆ ಮತ್ತು ಉತ್ತಮ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ.

ಭಾರೀ ಊಟವನ್ನು ಸೇವಿಸಬೇಡಿ:

ದೊಡ್ಡ ಪ್ರಮಾಣದ ಊಟವನ್ನು ತಿನ್ನುವುದು ಅದರಲ್ಲೂ ವಿಶೇಷವಾಗಿ ಮಲಗುವ ಮುನ್ನ ಭಾರೀ ಊಟ ಮಾಡುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡವನ್ನು ಉಂಟುಮಾಡಬಹುದು. ಹೀಗಾಗಿ, ದಿನವಿಡೀ ಸಣ್ಣ, ಸಮತೋಲಿತ ಊಟವನ್ನು ಸೇವಿಸಿ. ನಿಮ್ಮ ದೇಹವು ಮಲಗುವ ಮುನ್ನ ಜೀರ್ಣಿಸಿಕೊಳ್ಳಲು ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಜೀರ್ಣಕ್ರಿಯೆಗೆ ತೊಂದರೆಯಾಗುತ್ತಿದೆಯೇ?; ಒಣದ್ರಾಕ್ಷಿಯನ್ನು ಈ ರೀತಿ ಸೇವಿಸಿ

ಹೆಚ್ಚು ಸಂಸ್ಕರಿಸಿದ ಆಹಾರಗಳನ್ನು ತಿನ್ನಬೇಡಿ:

ತ್ವರಿತ ಆಹಾರ, ಶೈತ್ಯೀಕರಿಸಿದ ಊಟ ಮತ್ತು ಪ್ಯಾಕೇಜ್ ಮಾಡಿದ ತಿಂಡಿಗಳಂತಹ ಹೆಚ್ಚು ಸಂಸ್ಕರಿಸಿದ ಆಹಾರಗಳು ಹೆಚ್ಚಾಗಿ ಅನಾರೋಗ್ಯಕರ ಕೊಬ್ಬುಗಳು, ಸಕ್ಕರೆ ಅಂಶಗಳು ಮತ್ತು ಕೃತಕ ಪದಾರ್ಥಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇವುಗಳು ನಿಮ್ಮ ದೇಹಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು ಮತ್ತು ಜೀರ್ಣಕಾರಿ ಸಮಸ್ಯೆಗೆ ಕಾರಣವಾಗಬಹುದು. ಉತ್ತಮ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಹಣ್ಣುಗಳು, ತರಕಾರಿಗಳು, ಧಾನ್ಯಗಳು, ನೇರ ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳಂತಹ ಸಂಪೂರ್ಣ, ಸಂಸ್ಕರಿಸದ ಆಹಾರವನ್ನು ಆರಿಸಿ.

ಅತಿಯಾದ ಕೊಬ್ಬನ್ನು ಸೇವಿಸಬೇಡಿ:

ಅಧಿಕ ಕೊಬ್ಬಿನ ಆಹಾರಗಳು ಅದರಲ್ಲೂ ವಿಶೇಷವಾಗಿ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬುಗಳಿಂದ ತುಂಬಿರುವ ಆಹಾರಗಳು ಜೀರ್ಣಕ್ರಿಯೆಯನ್ನು ನಿಧಾನಗೊಳಿಸಬಹುದು. ಕರಿದ ಆಹಾರಗಳು, ಕೊಬ್ಬಿನ ಮಾಂಸ, ಕೆನೆ ಸಾಸ್ ಮತ್ತು ಅತಿಯಾದ ಎಣ್ಣೆಗಳ ಸೇವನೆಯನ್ನು ಮಿತಿಗೊಳಿಸಿ. ಆವಕಾಡೊಗಳು, ನಟ್ಸ್, ಸೀಡ್ಸ್ ಮತ್ತು ಆಲಿವ್ ಎಣ್ಣೆಯಂತಹ ಆರೋಗ್ಯಕರ ಕೊಬ್ಬಿನ ಮೂಲಗಳನ್ನು ಮಿತವಾಗಿ ಸೇವಿಸಿ.

ಮಸಾಲೆಯುಕ್ತ ಆಹಾರವನ್ನು ಸೇವಿಸಬೇಡಿ:

ಮಸಾಲೆಯುಕ್ತ ಆಹಾರಗಳು ಜೀರ್ಣಾಂಗ ವ್ಯವಸ್ಥೆಯನ್ನು ಕೆರಳಿಸಬಹುದು. ಇದು ಎದೆಯುರಿ, ಆಸಿಡ್ ರಿಫ್ಲಕ್ಸ್ ಮತ್ತು ಅಜೀರ್ಣಕ್ಕೆ ಕಾರಣವಾಗುತ್ತದೆ. ಮಸಾಲೆಯುಕ್ತ ಆಹಾರವನ್ನು ಸೇವಿಸಿದ ನಂತರ ನೀವು ಸಮಸ್ಯೆಯನ್ನು ಅನುಭವಿಸಿದರೆ ಅಂತಹ ಆಹಾರಗಳ ಸೇವನೆಯನ್ನು ಕಡಿಮೆ ಮಾಡುವುದು ಅಥವಾ ಅವುಗಳನ್ನು ಸಂಪೂರ್ಣವಾಗಿ ತ್ಯಜಿಸುವುದು ಉತ್ತಮ.

ಇದನ್ನೂ ಓದಿ: ಕೊಬ್ಬು ಕರಗಿಸುವುದರಿಂದ ಜೀರ್ಣಕ್ರಿಯೆವರೆಗೆ; ಅಡುಗೆಮನೆಯಲ್ಲಿರುವ ಹುಣಸೆಹಣ್ಣಿನ ಚಮತ್ಕಾರಗಳಿವು

ಅತಿಯಾದ ಮದ್ಯಪಾನ ಮಾಡಬೇಡಿ:

ಆಲ್ಕೊಹಾಲ್ ಹೊಟ್ಟೆ ಮತ್ತು ಕರುಳಿನ ಒಳಪದರವನ್ನು ಕೆರಳಿಸಬಹುದು. ಇದು ಉರಿಯೂತ ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅತಿಯಾದ ಆಲ್ಕೊಹಾಲ್ ಸೇವನೆಯು ಪ್ರಯೋಜನಕಾರಿ ಕರುಳಿನ ಬ್ಯಾಕ್ಟೀರಿಯಾದ ಸಮತೋಲನವನ್ನು ಅಡ್ಡಿಪಡಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸುತ್ತದೆ. ಉತ್ತಮ ಜೀರ್ಣಕಾರಿ ಆರೋಗ್ಯಕ್ಕಾಗಿ ನಿಮ್ಮ ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸಿ.

ತಡವಾಗಿ ತಿನ್ನಬೇಡಿ:

ಮಲಗುವ ಸಮಯಕ್ಕೆ ಸ್ವಲ್ಪ ಮೊದಲು ಭಾರೀ ಊಟ ಅಥವಾ ತಿಂಡಿ ತಿನ್ನುವುದು ನಿದ್ರೆ ಮತ್ತು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುತ್ತದೆ. ತಿಂದ ಕೂಡಲೆ ನೀವು ಮಲಗಿದಾಗ, ಅದು ಆಸಿಡ್ ರಿಫ್ಲಕ್ಸ್ ಮತ್ತು ಎದೆಯುರಿಯ ಅಪಾಯವನ್ನು ಹೆಚ್ಚಿಸುತ್ತದೆ. ಮಲಗುವ ಸಮಯಕ್ಕೆ ಕನಿಷ್ಠ 2-3 ಗಂಟೆಗಳ ಮೊದಲು ನಿಮ್ಮ ಭೋಜನವನ್ನು ಮುಗಿಸಲು ಪ್ರಯತ್ನಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 pm, Mon, 26 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ