AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಚಿ ಹಣ್ಣಿನ ಪ್ರಯೋಜನ, ಅಡ್ಡ ಪರಿಣಾಮ ಮತ್ತು ಸೇವಿಸಲು ಸರಿಯಾದ ಸಮಯ ಯಾವುದು? ಮಾಹಿತಿ ಇಲ್ಲಿದೆ

ಲಿಚಿ ಹಲವಾರು ಆರೋಗ್ಯಕರ ಖನಿಜಗಳು, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ, ಇದು ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಿಂದ ನಿಮ್ಮನ್ನು ರಕ್ಷಿಸುತ್ತದೆ.

ಲಿಚಿ ಹಣ್ಣಿನ ಪ್ರಯೋಜನ, ಅಡ್ಡ ಪರಿಣಾಮ ಮತ್ತು ಸೇವಿಸಲು ಸರಿಯಾದ ಸಮಯ ಯಾವುದು? ಮಾಹಿತಿ ಇಲ್ಲಿದೆ
Litchi BenefitsImage Credit source: NDTV
ಅಕ್ಷತಾ ವರ್ಕಾಡಿ
|

Updated on: Jun 21, 2023 | 6:40 AM

Share

ಸಿಹಿ ಮತ್ತು ರಸಭರಿತವಾದ ಲಿಚಿಗಳು ಅತ್ಯಂತ ಜನಪ್ರಿಯವಾದ ಹಣ್ಣಾಗಿದ್ದು, ಇದನ್ನು ಹಸಿಯಾಗಿ ತಿನ್ನುವುದರ ಹೊರತಾಗಿ ಇದು ಅನೇಕ ಸಿಹಿತಿಂಡಿಗಳು ಮತ್ತು ಜೆಲ್ಲಿಗಳು, ಕಾಕ್‌ಟೇಲ್‌ಗಳು ಮತ್ತು ಐಸ್ ಕ್ರೀಮ್‌ಗಳಂತಹ ಪಾನೀಯಗಳಲ್ಲಿ ಕಂಡುಬರುತ್ತದೆ. ಹಣ್ಣು ಮುಖ್ಯವಾಗಿ ನೀರು ಮತ್ತು ಕಾರ್ಬೋಹೈಡ್ರೇಟ್‌ಗಳಿಂದ ಕೂಡಿದೆ. 100 ಗ್ರಾಂ ಲಿಚಿಸ್ ಪ್ರೋಟೀನ್: ಸಕ್ಕರೆ: 15.2 ಗ್ರಾಂ, ಫೈಬರ್: 1.3 ಗ್ರಾಂ ಮತ್ತು ಕೊಬ್ಬು: 0.4 ಗ್ರಾಂಗಳಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ಲಿಚಿ ಹಲವಾರು ಆರೋಗ್ಯಕರ ಖನಿಜಗಳು, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ, ಇದು ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಿಂದ ನಿಮ್ಮನ್ನು ರಕ್ಷಿಸುತ್ತದೆ.

ಲಿಚಿಯ ಪ್ರಯೋಜನಗಳೇನು?

ಲಿಚಿಗಳು ಹಲವಾರು ಆರೋಗ್ಯಕರ ಖನಿಜಗಳು, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ, ಇದು ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಿಂದ ರಕ್ಷಿಸುತ್ತದೆ. ಕೆಲವು ಅಧ್ಯಯನಗಳು ಲಿಚಿ ಸಾರವು ಯಕೃತ್ತಿನ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಎಂದು ಸೂಚಿಸಿದೆ. ಇದಲ್ಲದೇ ಲಿಚಿಯಲ್ಲಿರುವ ತಾಮ್ರವು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಲಿಚಿಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವುದರಿಂದ, ಮಧ್ಯಮ ಪ್ರಮಾಣದಲ್ಲಿ ಸೇವಿಸಿದಾಗ ಮಧುಮೇಹ ರೋಗಿಗಳಿಗೆ ಇದು ಸುರಕ್ಷಿತವಾಗಿದೆ.

ಇದನ್ನೂ ಓದಿ: ಸೀತಾಫಲದ ಆರೋಗ್ಯ ಪ್ರಯೋಜನಗಳ ಬಗ್ಗೆ ತಜ್ಞರು ನೀಡಿರುವ ಉತ್ತರ ಇಲ್ಲಿದೆ

ಲಿಚಿಯ ಅಡ್ಡಪರಿಣಾಮಗಳು ಯಾವುವು?

  • ಕೆಲವು ಜನರಲ್ಲಿ, ಲಿಚಿಯು ಚರ್ಮದ ಮೇಲೆ ತುರಿಕೆ ಮತ್ತು ದದ್ದು, ತುಟಿಗಳ ಊತ ಮತ್ತು ಗಂಟಲು ಮತ್ತು ಅತಿಸಾರದಂತಹ ಅಲರ್ಜಿಯ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು.
  • ಭಾರತದ ಕೆಲವು ಹಳ್ಳಿಗಳಲ್ಲಿ, ಲಿಚಿ ಹಣ್ಣು ಮಕ್ಕಳಲ್ಲಿ ಮೆದುಳಿನ ಉರಿಯೂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
  • ಲಿಚಿಯ ಅತಿಯಾದ ಬಳಕೆಯು ಹಾರ್ಮೋನ್ ಅಸಮತೋಲನ, ಜ್ವರ, ರಕ್ತಸ್ರಾವ, ಆಂತರಿಕ ರಕ್ತಸ್ರಾವ ಮತ್ತು ಸೋಂಕುಗಳಿಗೆ ಕಾರಣವಾಗಬಹುದು.

ಲಿಚಿ ತಿನ್ನಲು ಸರಿಯಾದ ಸಮಯ ಯಾವಾಗ?

ತಜ್ಞರ ಪ್ರಕಾರ, ನೀವು ಬೆಳಗಿನ ಉಪಾಹಾರದ ನಂತರ ಅಥವಾ ಊಟದ ನಂತರ ಲಿಚಿಗಳನ್ನು ತಿನ್ನುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?