AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantola: ಮಾಡ ಹಾಗಲಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ

ಮಳೆಗಾಲದಲ್ಲಿ ಹಾನಿಕಾರಕ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸಲು ಸಮತೋಲಿತ ಆಹಾರವನ್ನು ಸೇವಿಸುವುದು ಅತ್ಯಂತ ಅಗತ್ಯವಾಗಿರುತ್ತದೆ. ಕಂಟೋಲ ಅಥವಾ ಮಾಡ ಹಾಗಲಕಾಯಿಯ ಆರೋಗ್ಯ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ.

Kantola: ಮಾಡ ಹಾಗಲಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ
ಕಂಟೋಲ ಅಥವಾ ಮಾಡ ಹಾಗಲಕಾಯಿImage Credit source: Amazon.in
ಅಕ್ಷತಾ ವರ್ಕಾಡಿ
|

Updated on: Jul 18, 2023 | 4:13 PM

Share

ಕಂಟೋಲ ಕಳ್ಳಿ ಜಾತಿಗೆ ಸೇರಿದ ತರಕಾರಿ. ಇದನ್ನು ಮಾಡ ಹಾಗಲಕಾಯಿ ಎಂದು ಕೂಡ ಕರೆಯುತ್ತಾರೆ. ಮಳೆಗಾಲದಲ್ಲಿ ಸುಲಭವಾಗಿ ದೊರೆಯುವ ತರಕಾರಿಗಳಲ್ಲಿ ಇದೂ ಒಂದು. ಇದರಲ್ಲಿ ಫೈಬರ್, ವಿಟಮಿನ್‌, ಖನಿಜ ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿದ್ದು, ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಸಾಬೀತಾಗಿದೆ. ಮಳೆಗಾಲದಲ್ಲಿ ಹಾನಿಕಾರಕ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸಲು ಸಮತೋಲಿತ ಆಹಾರವನ್ನು ಸೇವಿಸುವುದು ಅತ್ಯಂತ ಅಗತ್ಯವಾಗಿರುತ್ತದೆ. ನಿಮ್ಮ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಒದಗಿಸುವಲ್ಲಿ ಈ ಮಾಡ ಹಾಗಲಕಾಯಿ ಸಾಕಷ್ಟು ಪ್ರಯೋಜನಕಾರಿಯಾಗಿದೆ.

ಕಂಟೋಲ ಅಥವಾ ಮಾಡ ಹಾಗಲಕಾಯಿಯ ಆರೋಗ್ಯ ಪ್ರಯೋಜನಗಳು ಇಲ್ಲಿವೆ:

ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ:

ಕಂಟೋಲದಲ್ಲಿ ವಿಟಮಿನ್ ಎ ಹೇರಳವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಇದು ನಿಮ್ಮ ಕಣ್ಣಿನ ಸ್ನಾಯುಗಳನ್ನು ಬಲಪಡಿಸಲು ಮತ್ತು ನಿಮ್ಮ ದೃಷ್ಟಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಂದ ನಿಮ್ಮ ಕಣ್ಣುಗಳನ್ನು ಕಾಪಾಡುತ್ತದೆ.

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ:

ಇತ್ತೀಚಿನ ದಿನಗಳಲ್ಲಿ, ಮಧುಮೇಹವು ಸಾಮಾನ್ಯ ಸಮಸ್ಯೆಯಾಗಿದೆ ಮತ್ತು ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕಷ್ಟಪಡುತ್ತಾರೆ. ಪ್ಯಾಂಕ್ರಿಯಾಟಿಕ್ ಬೀಟಾ ಕೋಶಗಳನ್ನು ರಕ್ಷಿಸಲು ಮತ್ತು ಪುನರುತ್ಪಾದಿಸಲು ಸಹಾಯ ಮಾಡುವ ಹೈಪೊಗ್ಲಿಸಿಮಿಕ್ ಗುಣಲಕ್ಷಣಗಳನ್ನು ಕಾಂಟೋಲಾ ಹೊಂದಿದೆ. ಇದು ಇನ್ಸುಲಿನ್ ಸ್ರವಿಸುವಿಕೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯ ಮಾಡುವ ಆರ್ಟ್ ಥೆರಪಿ

ತೂಕ ನಿರ್ವಹಣೆ:

ಒತ್ತಡದ ಜೀವನಶೈಲಿ ಹಾಗೂ ಕಳಪೆ ಆಹಾರ ಕ್ರಮಗಳಿಂದ ನಿಮ್ಮ ದೇಹದ ತೂಕವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವಲ್ಲ. ಆದ್ದರಿಂದ ನಿಮ್ಮ ಆಹಾರದಲ್ಲಿನ ಕಂಟೋಲವನ್ನು ಸೇರಿಸುವುದರಿಂದ ಅದು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಅಧಿಕ ನೀರಿನಾಂಶವನ್ನು ಹೊಂದಿರುವುದರಿಂದ ಆರೋಗ್ಯಕರ ಸಮತೋಲಿತ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ವಯಸ್ಸಾಗುವಿಕೆಯನ್ನು ನಿಧಾನಗೊಳಿಸುತ್ತದೆ:

ಆಂಟಿಆಕ್ಸಿಡೆಂಟ್‌ಗಳು, ಆಲ್ಫಾ-ಕ್ಯಾರೋಟಿನ್, ಲುಟೀನ್, ಬೀಟಾ-ಕ್ಯಾರೋಟಿನ್ ಮತ್ತು ಜಿಯಾಕ್ಸಾಂಥಿನ್‌ಗಳು ಈ ತರಕಾರಿಯಲ್ಲಿ ಸಮೃದ್ಧವಾಗಿರುವುರಿಂದ ವಯಸ್ಸಾಗುವಿಕೆಯ ವಿರೋಧಿ ಗುಣಗಳನ್ನು ಹೊಂದಿದೆ.

ಜೀರ್ಣಕ್ರಿಯೆಗೆ ಸಹಕಾರಿ:

ಕಂಟೋಲಾ ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಮಳೆಗಾಲದ ಸಮಯದಲ್ಲಿ ಹೊಟ್ಟೆಯ ಸೋಂಕಿನ ವಿರುದ್ಧ ಹೋರಾಡಲು ಮತ್ತು ನಿಮ್ಮ ಕರುಳನ್ನು ಸ್ವಚ್ಛವಾಗಿಡಲು ಈ ತರಕಾರಿ ನಿಮಗೆ ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?