Healthy Juice: ನಿಮ್ಮ ಹೃದಯ ಆರೋಗ್ಯವಾಗಿರಬೇಕಾ? ಹಾಗಾದರೆ ಈ ಜ್ಯೂಸ್​ಗಳನ್ನು ಸೇವಿಸಿ!

ಹೃದಯವನ್ನು ಆರೋಗ್ಯವಾಗಿಡಲು, ನಿಯಮಿತವಾಗಿ ವ್ಯಾಯಾಮ ಮಾಡುವುದರೊಂದಿಗೆ, ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳುವುದು ಸಹ ಬಹಳ ಮುಖ್ಯ.

Healthy Juice: ನಿಮ್ಮ ಹೃದಯ ಆರೋಗ್ಯವಾಗಿರಬೇಕಾ? ಹಾಗಾದರೆ ಈ ಜ್ಯೂಸ್​ಗಳನ್ನು ಸೇವಿಸಿ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 27, 2022 | 9:26 AM

ನಮ್ಮ ದೇಹದಲ್ಲಿ ಪ್ರಮುಖ ಭಾಗವೆಂದರೇ ಅದು ಹೃದಯ. ಹೃದಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ ಹೃದಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇದು ಪಾರ್ಶ್ವವಾಯು, ಹೃದಯಾಘಾತ ಒಳಗೊಂಡಿರಬಹುದು. ಹೃದಯವನ್ನು ಆರೋಗ್ಯವಾಗಿಡಲು, ನಿಯಮಿತವಾಗಿ ವ್ಯಾಯಾಮ ಮಾಡುವುದರೊಂದಿಗೆ, ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳುವುದು ಸಹ ಬಹಳ ಮುಖ್ಯ. ನಿಮ್ಮ ಆಹಾರದಲ್ಲಿ ನೀವು ಅನೇಕ ರೀತಿಯ ಆರೋಗ್ಯಕರ ಪಾನೀಯಗಳನ್ನು ಸೇರಿಸಿಕೊಳ್ಳಬಹುದು. ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ತೆಂಗಿನ ನೀರು:

ತೆಂಗಿನ ನೀರು ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್​ನ್ನು ಹೊಂದಿರುತ್ತದೆ. ಇದು ನಿಮ್ಮನ್ನು ಹೈಡ್ರೇಟ್ ಆಗಿರಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ಪರಿಹಾರ ನೀಡುತ್ತದೆ. ಇದು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ತೆಂಗಿನ ನೀರಿನ ಸೇವನೆಯು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ದಾಳಿಂಬೆ ರಸ:

ದಾಳಿಂಬೆ ರಸ ತುಂಬಾ ಟೇಸ್ಟಿ ಮತ್ತು ಆರೋಗ್ಯಕರ. ಇದು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಮೆಗ್ನೀಸಿಯಮ್ ಮತ್ತು ವಿಟಮಿನ್ ಕೆನ್ನು ಹೊಂದಿರುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ರಕ್ತಹೀನತೆಯನ್ನು ತಡೆಯುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ದಾಳಿಂಬೆ ರಸವು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಗ್ರೀನ್​ ಟೀ:

ಗ್ರೀನ್​ ಟೀ ಅನೇಕ ಜೀವಸತ್ವಗಳು, ಖನಿಜಗಳು ಮತ್ತು ಇತರ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಕ್ಯಾಲ್ಸಿಯಂ, ಕಬ್ಬಿಣ ಮತ್ತು ಪೊಟ್ಯಾಸಿಯಮ್​ನ್ನು ಹೊಂದಿರುತ್ತದೆ. ಗ್ರೀನ್​ ಟೀ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ತೂಕ ಇಳಿಸಲು ಸಹಾಯ ಮಾಡುತ್ತದೆ. ಇದು ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡುವುದರೊಂದಿಗೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಗ್ರೀನ್ ಟೀ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಿತ್ತಳೆ ರಸ:

ಕಿತ್ತಳೆ ರಸವು ಸುವಾಸನೆ ಮತ್ತು ಆರೋಗ್ಯದಿಂದ ಕೂಡಿದೆ. ಪ್ರತಿದಿನ ಬೆಳಿಗ್ಗೆ ಇದನ್ನು ಸೇವಿಸುವುದರಿಂದ ಅನೇಕ ಋತುಮಾನದ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ರಕ್ತಹೀನತೆಯನ್ನು ತಡೆಯುತ್ತದೆ.

ನೀರು:

ಪ್ರತಿದಿನ 8 ರಿಂದ 10 ಗ್ಲಾಸ್ ನೀರು ಕುಡಿಯಿರಿ. ನೀರು ನಿಮ್ಮನ್ನು ಹೈಡ್ರೀಕರಿಸುವುದು ಮಾತ್ರವಲ್ಲದೆ ಇದು ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ತರುತ್ತದೆ. ಇದು ನಿಮ್ಮನ್ನು ದಿನವಿಡೀ ಶಕ್ತಿಯುತವಾಗಿರಿಸುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿರಿಸುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:00 am, Tue, 27 September 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್