High Blood Pressure: ಔಷಧಿಗಳಿಲ್ಲದೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಇಲ್ಲಿವೆ ಪರಿಣಾಮಕಾರಿ ಮಾರ್ಗ

ಅಧಿಕ ರಕ್ತದೊತ್ತಡ ಇಂದು ಬಹಳ ಸಾಮಾನ್ಯ ಆರೋಗ್ಯ  ಸಮಸ್ಯೆಗಳಲ್ಲಿ ಒಂದಾಗಿದೆ. ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ತಜ್ಞರು. ಮಾತ್ರವಲ್ಲದೆ ನೀವು ಔಷಧಿಗಳಿಲ್ಲದೆ ಈ ಕೆಲವು ಸುಲಭ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕವೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.    

High Blood Pressure: ಔಷಧಿಗಳಿಲ್ಲದೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿಡಲು ಇಲ್ಲಿವೆ ಪರಿಣಾಮಕಾರಿ ಮಾರ್ಗ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 30, 2023 | 4:56 PM

ಕಳಪೆಮಟ್ಟದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಪದ್ಧತಿಯ ಪಾಲನೆಯ ಕಾರಣದಿಂದಾಗಿ ಇಂದು ಅಧಿಕ ರಕ್ತದೊತ್ತಡದ ಅಪಾಯವು ತೀರಾ  ಹೆಚ್ಚಿದೆ. ಅಧಿಕ ರಕ್ತದೊತ್ತಡವು ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಅಲ್ಲದೆ ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ನಿರ್ಲಕ್ಷಿಸುವುದರಿಂದ ಅದು ಮಾರಣಾಂತಿಕವಾಗಿ ಪರಿಣಮಿಸಬಹುದು. ಕೆಲವು ಸಂದರ್ಭದಲ್ಲಿ ಇದು ಹೃದಯಾಘಾತ, ವಾರ್ಶ್ವವಾಯು, ದೃಷ್ಟಿ ನಷ್ಟ, ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು. ಹಾಗಾಗಿ ಈ ಸಮಸ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು  ರಕ್ತದೊತ್ತಡದಿಂದ ಬಳಲುತ್ತಿರುವವರು ಪ್ರತಿನಿತ್ಯ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಕೆಲವು ತಜ್ಞರು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಔಷಧಿ ಇಲ್ಲದೆಯೂ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ  ಗುಣಪಡಿಸಬಹುದು ಎಂದು ಹೇಳುತ್ತಾರೆ.  ಕೆಲವು ಸುಲಭ ವಿಧಾನಗಳನ್ನು ಅನುಸರಿಸುವ ಮೂಲಕ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಔಷಧಿಗಳಿಲ್ಲದೆ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವ ಸುಲಭ  ಮಾರ್ಗಗಳು:

ತೂಕ ನಿರ್ವಹಣೆ: ತೂಕ ಹೆಚ್ಚಾದಾಗ ರಕ್ತದೊತ್ತಡ ಹೆಚ್ಚಾಗುತ್ತದೆ. ಅಧಿಕ ತೂಕವು ನಿದ್ದೆ ಮಾಡುವಾಗ ಉಸಿರಾಟದ ತೊಂದರೆಗೆ ಕಾರಣವಾಗುತ್ತದೆ. ಇದು ರಕ್ತದೊತ್ತಡವನ್ನು ಸಹ ಹೆಚ್ಚಿಸುತ್ತದೆ. ಹಾಗಾಗಿ  ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಉತ್ತಮ ಮಾರ್ಗವೆಂದರೆ ತೂಕ ಇಳಿಕೆ.  ಆರೋಗ್ಯಕ ತೂಕವನ್ನು ಕಾಪಾಡಿಕೊಳ್ಳುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ನಿಯಮಿತ ವ್ಯಾಯಾಮ: ದೈನಂದಿನ ವ್ಯಾಯಾಮವು ರಕ್ತದೊತ್ತಡವನ್ನು ಕಡಿಮೆ ಮಾಡಲು ಬಹಳಷ್ಟು ಸಹಾಯ ಮಾಡುತ್ತದೆ. ತಜ್ಞರ ಪ್ರಕಾರ ನೀವು ಪ್ರತಿದಿನ ಸುಮಾರು 30 ನಿಮಿಷಗಳ ದೈಹಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.  ನಿಯಮಿತ ದೈಹಿಕ ಚಟುವಟಿಕೆಯು ರಕ್ತದೊತ್ತಡವನ್ನು 5 ರಿಂದ 8 MM HG ವರೆಗೆ ಕಡಿಮೆ ಮಾಡುತ್ತದೆ.

ಆರೋಗ್ಯಕರ ಆಹಾರ ಸೇವಿಸಿ: ಆರೋಗ್ಯಕರ ಆಹಾರವನ್ನು ಸೇವನೆ ಮಾಡುವುದರಿಂದ  ಒಟ್ಟಾರೆ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅಲ್ಲದೆ ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲೂ ಸಹಕಾರಿ. ಧ್ಯಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳನ್ನು ಸೇವನೆ ಮಾಡುವ ಮೂಲಕ  ಮತ್ತು ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಫೈಬರ್, ಪೊಟ್ಯಾಸಿಯಂ, ಕ್ಯಾಲ್ಸಿಯಂ ಮುಂತಾದ ಅಗತ್ಯವಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವನೆ ಮಾಡುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಮೂರು ಪಾನೀಯಗಳನ್ನು ಸೇವಿಸಿ

ಉಪ್ಪು ಸೇವನೆ ಕಡಿಮೆ ಮಾಡಿ: ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತೊಂದು ಪರಿಣಾಮಕಾರಿ ಮಾರ್ಗವೆಂದರೆ ಆಹಾರದಲ್ಲಿ ಮಿತ ಪ್ರಮಾಣ ಉಪ್ಪನ್ನು ಬಳಕೆ ಮಾಡಿ.    ಆಹಾರದಲ್ಲಿ ಸೋಡಿಯಂನ ಸಣ್ಣ ಕಡಿತವು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಅಧಿಕ ರಕ್ತದೊತ್ತಡವನ್ನು ಸುಮಾರು 5 ರಿಂದ 6 MM HG ವರೆಗೆ ಕಡಿಮೆ ಮಾಡುತ್ತದೆ.

ಉತ್ತಮ ನಿದ್ರೆಯನ್ನು ಪಡೆಯಿರಿ: ಸಾಕಷ್ಟು ನಿದ್ರೆ ಪಡೆಯುವುದು ನಮ್ಮ ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.  7 ಗಂಟೆಗಳಿಗಿಂತ ಕಡಿಮೆ ನಿದ್ರೆ ಪಡೆದಾಗ ಅದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹಾಗಾಗಿ ದಿನದಲ್ಲಿ 7 ರಿಂದ 8 ಗಂಟೆಗಳ ಕಾಲ ನೆಮ್ಮದಿಯ ನಿದ್ರೆ ಮಾಡುವ ಮೂಲಕ ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ