ನಗುವಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ?

ಸೈಕೋಸೊಮ್ಯಾಟಿಕ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಬಲವಾದ ಹಾಸ್ಯ ಪ್ರಜ್ಞೆ ಹೊಂದಿರುವ ಮಹಿಳೆಯರು ಅನಾರೋಗ್ಯದ ಹೊರತಾಗಿಯೂ ಹೆಚ್ಚು ಕಾಲ ಬದುಕುತ್ತಾರೆ. ನಗುವು ಒಟ್ಟಾರೆ ಒತ್ತಡ ಮತ್ತು ಆತಂಕವನ್ನು ತಡೆಯಲು ಸಹಾಯ ಮಾಡುತ್ತದೆ.

ನಗುವಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ?
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Feb 23, 2023 | 7:09 PM

ಅಧ್ಯಯನದ ಪ್ರಕಾರ, ನೀವು ದಿನ ನಿತ್ಯ ನಗುವುದರಿಂದ ಹೊಟ್ಟೆಯಲ್ಲಿನ ಅತಿಯಾದ ಕೊಬ್ಬನ್ನು ಸುಲಭವಾಗಿ ಕರಗಿಸಬಹುದಾಗಿದೆ. ನಗುವುದು ಹೃದಯ ಬಡಿತನ್ನು ವೇಗಗೊಳಿಸುತ್ತದೆ ಮತ್ತು ವಿವಿಧ ಸ್ನಾಯುಗಳ ಕೆಲಸವನ್ನು ಸಕ್ರಿಯಗೊಳಿಸುತ್ತದೆ. ಆದ್ದರಿಂದ ನಗುವನ್ನು ಅತ್ಯುತ್ತಮ ಔಷಧವೆಂದು ಕರೆಯಲಾಗುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆದ್ದರಿಂದ ನಗುವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

ನಗುವಿನಿಂದಾಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ:

ನಗು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ:

ನಗು ಹೃದಯಕ್ಕೆ ಆರೋಗ್ಯಕರ ಎಂದು ಸೂಚಿಸಲಾಗಿದೆ ಏಕೆಂದರೆ ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಿಮೆ ರಕ್ತದೊತ್ತಡವು ಹೃದಯ ಸಂಬಂಧಿ ಕಾಯಿಲೆಗಳ ಕಡಿಮೆ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಪ್ರತಿದಿನ ನಗುವುದರಿಂದ ದೇಹವನ್ನು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುವ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದಲ್ಲದೇ ನೀವು ದೀರ್ಘಕಾಲ ಬದುಕಲು ಸಹಾಯ ಮಾಡಬಹುದು. ಸೈಕೋಸೊಮ್ಯಾಟಿಕ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಬಲವಾದ ಹಾಸ್ಯ ಪ್ರಜ್ಞೆ ಹೊಂದಿರುವ ಮಹಿಳೆಯರು ಅನಾರೋಗ್ಯದ ಹೊರತಾಗಿಯೂ ಹೆಚ್ಚು ಕಾಲ ಬದುಕುತ್ತಾರೆ. ನಗುವು ಒಟ್ಟಾರೆ ಒತ್ತಡ ಮತ್ತು ಆತಂಕವನ್ನು ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಹಿಳೆಯರೇ ಎಚ್ಚರ..! ಪೆಡಿಕ್ಯೂರ್​​ ಮಾಡಿಸುವ ಮುನ್ನ ಈ ಸ್ಟೋರಿ ಓದಿ

ನಿಮ್ಮ ಹೊಟ್ಟೆಯ ಬೊಜ್ಜನ್ನು ಕರಗಿಸುತ್ತದೆ:

ಸ್ಥೂಲಕಾಯತೆಯಂತಹ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡುವಲ್ಲಿ ನಗುವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪ್ರತಿ ದಿನ ಒಂದಷ್ಟು ಹೊತ್ತು ನಿಮ್ಮವರೊಂದಿಗೆ ಕಾಲ ಕಳೆಯಿರಿ. ಇದು ನಿಮ್ಮನ್ನು ಖುಷಿಯಿಂದಿರಲು ಸಹಾಯ ಮಾಡುತ್ತದೆ.

ಒತ್ತಡವನ್ನು ನಿವಾರಿಸುತ್ತದೆ:

ನಗುವುದು ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡಲು ನ್ಯೂರೋಪೆಪ್ಟೈಡ್ಸ್ ಎಂಬ ಸಣ್ಣ ಅಣುಗಳನ್ನು ಬಿಡುಗಡೆ ಮಾಡುತ್ತದೆ. ನೀವು ನಿಯಮಿತವಾಗಿ ಆತಂಕವನ್ನು ಎದುರಿಸುತ್ತಿದ್ದರೆ, ರಕ್ತಪ್ರವಾಹದಲ್ಲಿ ಒತ್ತಡ-ಪ್ರೇರಿತ ಹಾರ್ಮೋನುಗಳನ್ನು ಕಡಿಮೆ ಮಾಡಲು ನೀವು ಹೆಚ್ಚು ಸಂತೋಷದಿಂದಿರಲು ಪ್ರಯತ್ನಿಸಬೇಕು.

ರಕ್ತ ಚಯಾಪಚಯಕ್ಕೆ ಸಹಾಯ ಮಾಡಬಹುದು:

ನಗು ಕಾರ್ಟಿಸೋಲ್ ಎಂದು ಕರೆಯಲ್ಪಡುವ ಒತ್ತಡದ ಹಾರ್ಮೋನ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ನಗು ನಿಮ್ಮ ಚಯಾಪಚಯವನ್ನು ಸ್ವಾಭಾವಿಕವಾಗಿ ಸುಧಾರಿಸುತ್ತದೆ. ಇದು ನಿಮ್ಮ ದೇಹವನ್ನು ಹೆಚ್ಚು ಕ್ಯಾಲೊರಿಗಳನ್ನು ಸುಡಲು ಮಾಡಲು ಮತ್ತು ತೂಕವನ್ನು ಕಳೆದುಕೊಳ್ಳಲು ಪ್ರಭಾವ ಬೀರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ