
ಸೂರ್ಯಗ್ರಹಣ 2021: ಅಮಾವಾಸ್ಯೆಯ ದಿನ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬ೦ದಾಗ ಸೂರ್ಯ ಗ್ರಹಣ ಸ೦ಭವಿಸುತ್ತದೆ. ಈ ವರ್ಷದ ಎರಡನೇ ಸೂರ್ಯಗ್ರಹಣ (Solar Eclipse) ಮತ್ತು 2021ರ ಕೊನೆಯ ಸೂರ್ಯಗ್ರಹಣವು ಡಿಸೆಂಬರ್ 4 ರಂದು ಸಂಭವಿಸಲಿದೆ. 2021 ರ ಕೊನೆಯ ಸೂರ್ಯಗ್ರಹಣವು ಮಧ್ಯಾಹ್ನ 12:30 ಕ್ಕೆ ಪ್ರಾರಂಭವಾಗುತ್ತದೆ, 01:03 ಕ್ಕೆ ಗರಿಷ್ಠವಾಗಿರುತ್ತದೆ ಮತ್ತು 01:36 ಕ್ಕೆ ಕೊನೆಗೊಳ್ಳುತ್ತದೆ. ಈ ಸೂರ್ಯಗ್ರಹಣವು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೇರಿಕಾ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಜಗತ್ತಿನ ಕೆಲವು ಭಾಗಗಳಿಗೆ ಗೋಚರವಾಗಲಿದೆ. ಭೂಮಿಯ ಮೇಲ್ಮೈಯಲ್ಲಿ ಸೂರ್ಯಗ್ರಹಣದ ಹಾದಿಯನ್ನು ಪತ್ತೆಹಚ್ಚುವ ನಕ್ಷೆಯನ್ನು ನಾಸಾ ಬಿಡುಗಡೆ ಮಾಡಿದೆ. ಇದರ ಆಧಾರದಲ್ಲಿ ಡಿಸೆಂಬರ್ 4 ರ ಸೂರ್ಯಗ್ರಹಣವು ಭಾರತದಿಂದ ಗೋಚರಿಸುವುದಿಲ್ಲ.
ಇನ್ನು ಭಾರತದಲ್ಲಿ ಯಾವಾಗ ಸೂರ್ಯಗ್ರಹಣ ಗೋಚರವಾಗಲಿದೆ ಎಂದು ಯೋಚಿಸುತ್ತಿದ್ದೀರಾ? ಅಕ್ಟೋಬರ್ 25, 2022 ರಂದು ಭಾರತದಿಂದ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ. ಈ ಬಾರಿಯ ಸೂರ್ಯಗ್ರಹಣವನ್ನು ನೀವು ವೀಕ್ಷಿಸಬೇಕು ಎಂಬ ಆಸಕ್ತಿ ಹೊಂದಿದ್ದರೆ ಅದಕ್ಕೂ ಮಾರ್ಗಗಳಿವೆ. Timeanddate.com ವೆಬ್ಸೈಟ್ ಮೂಲಕ ಡಿಸೆಂಬರ್ 4 ರ ಸೂರ್ಯಗ್ರಹಣವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.
ಸೂರ್ಯಗ್ರಹಣವನ್ನು ವೀಕ್ಷಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು? ಇಲ್ಲಿದೆ ಮಾಹಿತಿ
ಇದನ್ನೂ ಓದಿ:
ಸದೃಢರಾಗಿಲು ಮತ್ತು ಉತ್ತಮ ಜೀವನಶೈಲಿ ಕಾಪಾಡಿಕೊಳ್ಳಲು ಇಲ್ಲಿವೆ 5 ಮಾರ್ಗಗಳು
ಹಾಸನದಲ್ಲಿ 24 ಆನೆಗಳ ದಾಳಿಗೆ ಅಪಾರ ಬೆಳೆ ಹಾನಿ! ಸಾಲಾಗಿ ಹೆಜ್ಜೆ ಹಾಕುತ್ತಿರುವ ಗಜಪಡೆಗಳ ವಿಡಿಯೋ ವೈರಲ್
Published On - 9:46 am, Sat, 27 November 21