ಡಿಸೆಂಬರ್ ವರ್ಷದ ಕೊನೆಯ ತಿಂಗಳಾಗಿದ್ದು, ಇದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಎರಡೂ ಪ್ರಮುಖ ಆಚರಣೆಗಳಿಂದ ಕೂಡಿದ ತಿಂಗಳು. ಈ ತಿಂಗಳಲ್ಲಿ ಆಚರಿಸಲಾಗುವ ಪ್ರತಿಯೊಂದು ಆಚರಣೆಯನ್ನೂ ನಿರ್ಧಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಆಚರಿಸಲಾಗುತ್ತದೆ. ವಿಶ್ವ ಏಡ್ಸ್ ದಿನ, ಭಾರತೀಯ ನೌಕಾಪಡೆ ದಿನ, ಅಂತರಾಷ್ಟ್ರೀಯ ಗುಲಾಮಗಿರಿ ನಿರ್ಮೂಲನಾ ದಿನ, ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳನ್ನು ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುತ್ತದೆ. ಈ ಪ್ರತಿಯೊಂದು ಆಚರಣೆಗಳು ತನ್ನದೇ ಆದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ಹೊಂದಿದ್ದು, ಇದರ ಮಹತ್ವದ ಬಗ್ಗೆ ಜರಿಗೆ ಅರಿವು ಮೂಡಿಸಲು ಈ ದಿನಗಳನ್ನು ಆಚರಿಸಲಾಗುತ್ತದೆ.
ಹೆಚ್.ಐ.ವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಮತ್ತು ಏಡ್ಸ್ (ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ.
ಮಾಲಿನ್ಯವನ್ನು ನಿಯಂತ್ರಿಸುವ ಮತ್ತು ತಡೆಗಟ್ಟುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ 1984 ರಲ್ಲಿ ನಡೆದ ಭೋಪಾಲ್ ಅನಿಲ ದುರಂತದಲ್ಲಿ ಮಡಿದವರ ಸ್ಮರಣಾರ್ಥವಾಗಿ ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್ 2 ರಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಗುತ್ತದೆ.
ಮಾನವ ಕಳ್ಳಸಾಗಣಿಕೆ ಮತ್ತು ಬಲವಂತದಿಂದ ಕೆಲಸವನ್ನು ಮಾಡಿಸುವಂತಹ ಇತ್ಯಾದಿ ಗುಲಾಮಗಿರಿ ಸಮಸ್ಯೆಗಳನ್ನು ತೊಡೆದುಹಾಕುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ಗುಲಾಮಗಿರಿ ನಿರ್ಮೂಲನೆ ದಿನವನ್ನು ಆಚರಿಸಲಾಗುತ್ತದೆ.
ಕಂಪ್ಯೂಟರ್ ಮತ್ತು ತಂತ್ರಜ್ಞಾನದ ಬಗ್ಗೆ ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸಲು ಹಾಗೂ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಸಾಕ್ಷರತೆಯ ಮಹತ್ವವನ್ನು ಒತ್ತಿಹೇಳಲು ಪ್ರತಿವರ್ಷ ಡಿಸೆಂಬರ್ 2 ರಂದು ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ.
ಅಂಗವೈಕಲ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಹಾಗೂ ವಿಕಲಚೇತನರ ಘನತೆ, ಹಕ್ಕುಗಳು ಮತ್ತು ಯೋಗಕ್ಷೇಮಕ್ಕಾಗಿ ಬೆಂಬಲವನ್ನು ಸೂಚಿಸಲು, ಅವರ ಸಾಧನೆಗಳನ್ನು ಗೌರವಿಸಲು ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ.
ಭಾರತೀಯ ನೌಕಾಪಡೆಯ ಸಾಧನೆಗಳು ಮತ್ತು ರಾಷ್ಟ್ರಕ್ಕೆ ನೌಕಾಪಡೆಯ ಕೊಡುಗಗಳನ್ನು ಸ್ಮರಿಸಲು ವಾರ್ಷಿಕವಾಗಿ ಡಿಸೆಂಬರ್ 4 ರಂದು ಭಾರತೀಯ ನೌಕಾಪಡೆಯ ದಿನವನ್ನು ಆಚರಿಸಲಾಗುತ್ತದೆ.
ಸುಸ್ಥಿರ ಭೂ ಬಳಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಮಣ್ಣಿನ ಮಾಲಿನ್ಯವನ್ನು ತಡೆಗಟ್ಟುವ ಮಹತ್ವದ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಲು ವಿಶ್ವ ಮಣ್ಣು ದಿನವನ್ನು ಆಚರಿಸಲಾಗುತ್ತದೆ.
ಸಶಸ್ತ್ರ ಪಡೆಯ ಸಿಬ್ಬಂದಿಗಳ ತ್ಯಾಗವನ್ನು ಮತ್ತು ಕೊಡುಗೆಗಳನ್ನು ಗೌರವಿಸಲು ಹಾಗೂ ಸೇನಾಪಡೆಗಳಿಗೆ ಹೆಚ್ಚಿನ ಸೌಕರ್ಯವನ್ನು ಒದಗಿಸುವ ಉದ್ದೇಶಕ್ಕಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತದೆ.
ಅಂತರಾಷ್ಟ್ರೀಯ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ನಾಗರಿಕ ವಿಮಾನಯಾನದ ಪ್ರಾಮುಖ್ಯತೆ ಹಾಗೂ ಮುಖ್ಯವಾಗಿ ಜಾಗತಿಕ ಸಂಪರ್ಕದಲ್ಲಿ ನಾಗರಿಕ ವಿಮಾನಯಾನ ವಹಿಸುವ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಡಿಸೆಂಬರ್ 7 ರಂದು ಅಂತರಾಷ್ಟ್ರೀಯ ವಿಮಾನಯಾನ ದಿನವನ್ನು ಆಚರಿಸಲಾಗುತ್ತದೆ.
ಭ್ರಷ್ಟಾಚಾರದ ಪರಿಣಾಮಗಳು ಮತ್ತು ಅದರ ತಡೆಗಟ್ಟುವಿಕೆಯ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಡಿಸೆಂಬರ್ 9 ರಂದು ಅಂತರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನು ಆಚರಿಸಲಾಗುತ್ತದೆ.
1948 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಅಂಗೀಕರಿಸಿದ ದಿನವನ್ನು ಸ್ಮರಿಸಲು ಪ್ರತಿವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಇದು ಜನರಿಗೆ ಅವರ ಹಕ್ಕುಗಳನ್ನು ಸರಿಯಾಗಿ ಬಳಸುವುದು ಹೇಗೆ ಎಂದು ಕಲಿಸುವ ಗುರಿಯನ್ನು ಹೊಂದಿದೆ.
ಮಾನವನ ಜೀವನೋಪಾಯಕ್ಕಾಗಿ ಪರ್ವತಗಳ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲು ಹಾಗೂ ಸುಸ್ಥಿರ ಪರ್ವತ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರತಿವರ್ಷ ಡಿಸೆಂಬರ್ 11 ರಂದು ಅಂತರಾಷ್ಟ್ರೀಯ ಪರ್ವತ ದಿನವನ್ನು ಆಚರಿಸಲಾಗುತ್ತದೆ.
ಯಾವುದೇ ರೀತಿಯ ಆರ್ಥಿಕ ಹೊರೆಗಳಿಲ್ಲದೆ ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಬೇಕೆನ್ನುವ ಬಗ್ಗೆ ಜಾಗೃತಿ ಮೂಡಿಸಲು ಯುನಿವರ್ಸಲ್ ಹೆಲ್ತ್ ಕವರೇಜ್ ದಿನವನ್ನು ಆಚರಿಸಲಾಗುತ್ತದೆ.
ಶಕ್ತಿ ಸಂರಕ್ಷಣೆಯ ಪ್ರಾಮುಖ್ಯತೆ ಮತ್ತು ನೈಸರ್ಗಿಕ ಇಂಧನಗಳ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.
ಇದನ್ನೂ ಓದಿ: ನೀವು ಸಹ ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರನ್ನು ಕುಡಿಯುತ್ತಿದ್ದೀರಾ? ಅದರ ಪರಿಣಾಮ ಇಲ್ಲಿದೆ
1971 ರ ಇಂಡೋ-ಪಾಕ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಪತಾಕೆಯನ್ನು ಹಾರಿಸಿದ ದಿನದ ನೆನಪಿಗಾಗಿ ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್ 16 ರಂದು ವಿಜಯ ದಿವಸವನ್ನು ಆಚರಿಸಲಾಗುತ್ತದೆ.
ಸಮಾಜಕ್ಕೆ ವಲಸಿಗರ ಕೊಡುಗೆಯನ್ನು ಗುರುತಿಸಲು ಮತ್ತು ಪ್ರಪಂಚದಾದ್ಯಂತ ವಲಸಿಗರ ಅಭಿವೃದ್ಧಿ ಮತ್ತು ಅವರು ಕುಟುಂಬದ ರಕ್ಷಣೆ, ಸೌಕರ್ಯಗಳನ್ನು ದೊರಕಿಸಿಕೊಡಲು ಹಾಗೂ ಅವರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ವಲಸಿಗರ ದಿನವನ್ನು ಆಚರಿಸಲಾಗುತ್ತದೆ.
ಖ್ಯಾತ ಭಾರತೀಯ ಗಣಿತಶಾಸ್ತ್ರಜ್ಞರಾದ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನದ ಸವಿನೆನಪಿಗಾಗಿ ಭಾರತದಲ್ಲಿ ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಗುತ್ತದೆ.
ಆಹಾರ ಭದ್ರತೆ ಮತ್ತು ಆರ್ಥಿಕತೆಯಲ್ಲಿ ರೈತರ ಪ್ರಮುಖ ಪಾತ್ರವನ್ನು ಗೌರವಿಸಲು ಹಾಗೂ ಮುಖ್ಯವಾಗಿ ಭಾರತದ ಐದನೇ ಪ್ರಧಾನ ಮಂತ್ರಿ ಮತ್ತು ರೈತರ ಹಕ್ಕುಗಳು ಮತ್ತು ಕಲ್ಯಾಣದ ಪ್ರತಿಪಾದನೆಗೆ ಹೆಸರುವಾಸಿಯಾದ ಚೌಧರಿ ಚರಣ್ ಸಿಂಗ್ ಅವರ ಜನ್ಮ ದಿನದ ನೆನಪಿಗಾಗಿ ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ.
ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಪ್ರತಿವರ್ಷ ಡಿಸೆಂಬರ್ 24 ರಂದು ರಾಷ್ಟ್ರೀಯ ಗ್ರಾಹರ ಹಕ್ಕು ದಿನವನ್ನು ಆಚರಿಸಲಾಗುತ್ತದೆ.
ಮಾಜಿ ಪ್ರಾಧನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನೆನಪಿಗಾಗಿ ಡಿಸೆಂಬರ್ 25 ರಂದು ಉತ್ತಮ ಆಡಳಿತ ದಿನವನ್ನು ಆಚರಿಸಲಾಗುತ್ತದೆ.
ಬಾಕ್ಸಿಂಗ್ ಆಟದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಾಕ್ಸಿಂಗ್ ದಿನವನ್ನು ಆಚರಿಸಲಾಗುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: