AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

High BP: ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ ಫೈಬರ್ ಭರಿತ ಆಹಾರಗಳು: ಇಲ್ಲಿದೆ ಆಹಾರಗಳ ಪಟ್ಟಿ

Fiber Rich Foods For High BP: ಆಹಾರದಲ್ಲಿ ಪೋಷಕಾಂಶಗಳನ್ನು ಸೇರಿಸುವುದು ಬಹಳ ಮುಖ್ಯ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಫೈಬರ್ ಭರಿತ ಆಹಾರವನ್ನು ಸೇವಿಸಬೇಕು.

High BP: ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ ಫೈಬರ್ ಭರಿತ ಆಹಾರಗಳು: ಇಲ್ಲಿದೆ ಆಹಾರಗಳ ಪಟ್ಟಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 20, 2022 | 9:03 AM

Share

ಇಂದು ಬಹುತೇಕ ಪ್ರತಿ ಮೂರನೇ ವ್ಯಕ್ತಿ ಅಧಿಕ ರಕ್ತದೊತ್ತಡ (High BP) ದಿಂದ ಬಳಲುತ್ತಿದ್ದಾರೆ. ಈ ಅಧಿಕ ರಕ್ತದೊತ್ತಕ್ಕೆ ನಮ್ಮ ಜೀವನಶೈಲಿ ಮತ್ತು ಅಧಿಕ ಒತ್ತಡ ಕಾರಣ ಎಂದು ತಜ್ಞರು ಹೇಳುತ್ತಾರೆ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕಷ್ಟವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸರಿಯಾದ ಆಹಾರವನ್ನು ಅನುಸರಿಸಿದರೆ ಅದನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತಿದೆ. ನಾವು ಸೇವಿಸುವ ಆಹಾರದಲ್ಲಿ ಪೋಷಕಾಂಶಗಳನ್ನು ಹೊಂದಿರುವುದು ಬಹಳ ಮುಖ್ಯವಾಗುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಫೈಬರ್ ಭರಿತ ಆಹಾರವನ್ನು ಸೇವಿಸಬೇಕು. ಇದರೊಂದಿಗೆ, ಪ್ರತಿ ಊಟದಲ್ಲಿ ಸಾಕಷ್ಟು ಪ್ರಮಾಣದ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಇರುವ ಆಹಾರವನ್ನು ಸೇವಿಸಬೇಕು. ಫೈಬರ್ ಭರಿತ ಆಹಾರಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ.

ಇದನ್ನೂ ಓದಿ: ಮಣ್ಣಿನ ಮಡಕೆಯಲ್ಲಿ ನೀರು ಕುಡಿಯುವುದರಿಂದ ಏನು ಪ್ರಯೋಜನ? ಆಯುರ್ವೇದ ತಜ್ಞರು ಹೇಳಿದ್ದೇನು ಗೊತ್ತಾ?

ಸಿಟ್ರಸ್ ಹಣ್ಣುಗಳು:

ಹೆಲ್ತ್ಲೈನ್ ​​ಪ್ರಕಾರ ಸಿಟ್ರಸ್ ಹಣ್ಣುಗಳಿಂದ ದೇಹವು ವಿಟಮಿನ್ ಸಿ ಪಡೆಯುವುದು ಮಾತ್ರವಲ್ಲದೇ ಫೈಬರ್ ಕೂಡ ದೊರೆಯುತ್ತದೆ. ದ್ರಾಕ್ಷಿ, ಕಿತ್ತಳೆ, ನಿಂಬೆ ಮತ್ತು ಮೋಸಂಬಿ ಸೇವನೆಯಿಂದ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ. ಕಿತ್ತಳೆ ಮತ್ತು ನಾರಿನ ಹಣ್ಣುಗಳು ಫೈಬರ್​ನ್ನು ಹೊಂದಿರುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮೀನು:

ಮೀನುಗಳನ್ನು ಸೇವಿಸುವ ಜನರು ಹೆಚ್ಚಿನ ಪ್ರಮಾಣದಲ್ಲಿ ಫೈಬರ್​ನ್ನು ಹೊಂದುತ್ತಾರೆ. ಕೊಬ್ಬಿನ ಮೀನುಗಳು ಒಮೆಗಾ -3 ಕೊಬ್ಬನ್ನು ಹೊಂದಿರುತ್ತವೆ. ಇವುಗಳನ್ನು ಹೆಚ್ಚಿನ ಫೈಬರ್ ಎಂದು ಪರಿಗಣಿಸಲಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಬಹುದಾಗಿದೆ.

ಕುಂಬಳಕಾಯಿ:

ಕುಂಬಳಕಾಯಿ ಬೀಜಗಳು ಅಧಿಕ ರಕ್ತದೊತ್ತಡಕ್ಕೆ ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಇದರಲ್ಲಿರುವ ಎಣ್ಣೆಯು ಬಿಪಿಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕುಂಬಳಕಾಯಿ ಬೀಜದಲ್ಲಿ ನಾರಿನಂಶ ಕಡಿಮೆ ಇದ್ದರೂ, ಅದರ ಆರೋಗ್ಯ ಪ್ರಯೋಜನಗಳು ಒಟ್ಟಾರೆ ದೇಹಕ್ಕೆ ಪ್ರಯೋಜನಕಾರಿಯಾಗಿದೆ.

ಬೀನ್ಸ್ ಮತ್ತು ಕಾಳುಗಳು:

ಬೀನ್ಸ್ ಮತ್ತು ಬೇಳೆಕಾಳುಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇದು ಅಧಿಕ ಬಿಪಿಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಫೈಬರ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಇದರೊಂದಿಗೆ, ಬೇಳೆಕಾಳುಗಳ ಸೇವನೆಯಿಂದ ಪ್ರೋಟೀನ್ ಕೊರತೆಯನ್ನು ಸಹ ಪೂರೈಸಲಾಗುತ್ತದೆ.

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ