Sign In

By signing in or creating an account, you agree with Associated Broadcasting Company's Terms & Conditions and Privacy Policy.

Hindi Diwas 2023: ಹಿಂದಿ ದಿನದ ಆಚರಣೆಯ ಹಿಂದಿನ ಇತಿಹಾಸ ಮತ್ತು ಮಹತ್ವದ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಭಾರತದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಹಿಂದಿ ಮಾತನಾಡುವವರಿದ್ದಾರೆ. ಆದ್ದರಿಂದ ಹಿಂದಿ ಭಾಷೆಯನ್ನು ಮಹತ್ವವನ್ನು ಮುಂದಿನ ಪೀಳಿಗೆಗೆ ಸಾರುವ ಸಲುವಾಗಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ 'ಹಿಂದಿ ದಿವಸ್' ಅನ್ನು ಆಚರಿಸಲಾಗುತ್ತದೆ.

Hindi Diwas 2023: ಹಿಂದಿ ದಿನದ ಆಚರಣೆಯ ಹಿಂದಿನ ಇತಿಹಾಸ ಮತ್ತು ಮಹತ್ವದ ಬಗ್ಗೆ ಇಲ್ಲಿ ತಿಳಿದುಕೊಳ್ಳಿ
Hindi Diwas 2023Image Credit source: HT Photo
Follow us
ಅಕ್ಷತಾ ವರ್ಕಾಡಿ
|

Updated on: Sep 14, 2023 | 11:02 AM

ಹಿಂದಿ ಭಾರತದಾದ್ಯಂತ ಮಾತನಾಡುವ ಅತ್ಯಂತ ಜನಪ್ರಿಯ ಭಾಷೆಯಾಗಿದೆ. ಭಾರತದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಹಿಂದಿ ಮಾತನಾಡುವವರಿದ್ದಾರೆ. ಆದ್ದರಿಂದ ಹಿಂದಿ ಭಾಷೆಯನ್ನು ಮಹತ್ವವನ್ನು ಮುಂದಿನ ಪೀಳಿಗೆಗೆ ಸಾರುವ ಸಲುವಾಗಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ‘ಹಿಂದಿ ದಿವಸ್’ ಅನ್ನು ಆಚರಿಸಲಾಗುತ್ತದೆ. ದೇವನಾಗರಿ ಲಿಪಿಯಲ್ಲಿ ಬರೆಯಲ್ಪಟ್ಟ ಭಾರತದ ಸಂವಿಧಾನವು 14 ಸೆಪ್ಟೆಂಬರ್ 1949 ರಂದು ಹಿಂದಿ ಭಾಷೆಯನ್ನು ಭಾರತದ ಅಧಿಕೃತ ಭಾಷೆಯಾಗಿ ಸ್ವೀಕರಿಸಿತು. ಜೊತೆಗೆ ಸೆಪ್ಟೆಂಬರ್ 14, 1953 ರಂದು ಭಾರತವು ಮೊದಲ ಹಿಂದಿ ದಿನವನ್ನು ಆಚರಿಸಲಾಯಿತು. ಭಾರತೀಯರಲ್ಲಿ ಸುಮಾರು 425 ಮಿಲಿಯನ್ ಜನರು ಹಿಂದಿಯನ್ನು ತಮ್ಮ ಮೊದಲ ಭಾಷೆಯಾಗಿ ಮಾತನಾಡುತ್ತಾರೆ ಮತ್ತು ಸುಮಾರು 120 ಮಿಲಿಯನ್ ಜನರು ಹಿಂದಿಯನ್ನು ಎರಡನೇ ಭಾಷೆಯಾಗಿ ಮಾತನಾಡುತ್ತಾರೆ.

ಹಿಂದಿ ದಿನದ ಇತಿಹಾಸ:

1918 ರಲ್ಲಿ, ಹಿಂದಿಯನ್ನು ಭಾರತದ ರಾಷ್ಟ್ರೀಯ ಭಾಷೆಯಾಗಿ ಪ್ರಚಾರ ಮಾಡಲು ಹಿಂದಿ ವಿದ್ವಾಂಸರು ಮತ್ತು ಕಾರ್ಯಕರ್ತರಿಂದ ಹಿಂದಿ ಸಾಹಿತ್ಯ ಸಮ್ಮೇಳನವನ್ನು ರಚಿಸಲಾಯಿತು. 1947 ರಲ್ಲಿ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆದ ನಂತರ, ಹಿಂದಿಯನ್ನು ದೇಶದ ಏಕೈಕ ಅಧಿಕೃತ ಭಾಷೆಯನ್ನಾಗಿ ಮಾಡಲು ಹಲವಾರು ದಿಗ್ಗಜರು ಪ್ರಪಂಚದಾದ್ಯಂತ ಒಟ್ಟುಗೂಡಿದರು . ಹಜಾರಿ ಪ್ರಸಾದ್ ದ್ವಿವೇದಿ, ಕಾಕಾ ಕಾಲೇಲ್ಕರ್, ಮೈಥಿಲಿ ಶರಣ್ ಗುಪ್ತ್ ಮತ್ತು ಸೇಠ್ ಗೋವಿಂದ್ ದಾಸ್ ಅವರೊಂದಿಗೆ ರಾಜೇಂದ್ರ ಸಿಂಹ ಪ್ರಮುಖ ವ್ಯಕ್ತಿಗಳು. ಸೆಪ್ಟೆಂಬರ್ 14, 1949 ರಂದು, ದೇವನಾಗರಿ ಲಿಪಿಯಲ್ಲಿ ಬರೆದ ಹಿಂದಿಯನ್ನು ಭಾರತದ ಸಂವಿಧಾನ ಸಭೆಯು ದೇಶದ ಅಧಿಕೃತ ಭಾಷೆಗಳಲ್ಲಿ ಒಂದಾಗಿ ಅಂಗೀಕರಿಸಿತು.

ಹಿಂದಿ ದಿನವನ್ನು ಏಕೆ ಆಚರಿಸಲಾಗುತ್ತದೆ?

ಹಿಂದಿ ದಿನವನ್ನು ಆಚರಿಸುವ ಹಿಂದಿನ ಪ್ರಮುಖ ಕಾರಣವೆಂದರೆ ದೇಶದಲ್ಲಿ ಇಂಗ್ಲಿಷ್ ಭಾಷೆಯ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಕಡಿಮೆ ಮಾಡುವುದು. ಈ ದಿನ ಸಚಿವಾಲಯ, ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ರಾಜಭಾಷಾ ಕೀರ್ತಿ ಪುರಸ್ಕಾರ ಮತ್ತು ರಾಜಭಾಷಾ ಗೌರವ ಪುರಸ್ಕಾರದಂತಹ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಜೊತೆಗೆ ಈ ದಿನವು ಹಿಂದಿಯನ್ನು ಅಧಿಕೃತ ಭಾಷೆಗಳಲ್ಲಿ ಒಂದನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಿದ ಭಾರತೀಯ ಬರಹಗಾರ ರಾಜೇಂದ್ರ ಸಿಂಹ ಅವರ ಜನ್ಮದಿನವು ಕೂಡ ಹೌದು. ಮಹಾತ್ಮ ಗಾಂಧಿಯವರು ಹಿಂದಿಯನ್ನು ಜನರ ಭಾಷೆ ಎಂದು ಕರೆದಿದ್ದಾರೆ.

ಹಿಂದಿ ದಿನದ ಮಹತ್ವ:

ಈ ದಿನವು ಭಾರತದಲ್ಲಿ ವ್ಯಾಪಕವಾಗಿ ಮಾತನಾಡುವ ಹಿಂದಿ ಭಾಷೆಯ ಇತಿಹಾಸವನ್ನು ಉತ್ತೇಜಿಸುವುದು ಪ್ರಮುಖ ಉದ್ದೇಶ. ಜೊತೆಗೆ ಹಿಂದಿಯ ಶ್ರೀಮಂತ ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಸ್ತಾರದ ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದೆ.

ಅಧಿಕೃತ ಭಾಷೆ:

ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ, ಛತ್ತೀಸ್‌ಗಢ, ಬಿಹಾರ, ಹರಿಯಾಣ ಮತ್ತು ರಾಜಸ್ಥಾನಗಳ ಜೊತೆಗೆ ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ ಹಿಂದಿ ಅಧಿಕೃತ ಭಾಷೆಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್