Eid-Ul-Fitr 2023: ಇಸ್ಲಾಮಿಕ್ ಹಬ್ಬವಾದ ಈದ್-ಉಲ್-ಫಿತರ್ ಇತಿಹಾಸ, ಮಹತ್ವ ಮತ್ತು ಆಚರಣೆಗಳು

ಈದ್-ಉಲ್-ಫಿತರ್ ಹಬ್ಬವನ್ನು ಮುಸಲ್ಮಾನರು ಬಹಳ ವಿಜೃಂಭನೆಯಿಂದ ಆಚರಿಸುತ್ತಾರೆ. ಈ ಬಾರಿ ಈದ್-ಉಲ್-ಫಿತರ್ ಅಥವಾ ರಂಜಾನ್ ಹಬ್ಬವನ್ನು ಏಪ್ರಿಲ್ 21 ರಿಂದ ಏಪ್ರಿಲ್ 23ರ ವರೆಗೆ ಆಚರಿಸುವ ನಿರೀಕ್ಷೆಯಿದೆ. ಇಸ್ಲಾಮಿಕ್ ಹಬ್ಬವಾದ ಈದ್-ಉಲ್-ಫಿತಾರ್ ನ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಕುರಿತ ಮಾಹಿತಿ ಇಲ್ಲಿದೆ.

Eid-Ul-Fitr 2023: ಇಸ್ಲಾಮಿಕ್ ಹಬ್ಬವಾದ ಈದ್-ಉಲ್-ಫಿತರ್ ಇತಿಹಾಸ, ಮಹತ್ವ ಮತ್ತು ಆಚರಣೆಗಳು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 18, 2023 | 5:12 PM

ಇನ್ನೇನೂ ಮುಸ್ಲಿಮರ ಪವಿತ್ರ ತಿಂಗಳ ರಂಜಾನ್ ಮುಗಿದು ಈದ್-ಉಲ್-ಫಿತರ್ ಹಬ್ಬ (Eid-Ul-Fitr 2023) ಬರುತ್ತಿದೆ. ಈ ಹಬ್ಬವು ಪವಿತ್ರ ರಂಜಾನ್ ತಿಂಗಳ ಉಪವಾಸದ ಕೊನೆಯನ್ನು ಸೂಚಿಸುತ್ತದೆ. ಈ ರಂಜಾನ್ ಸಮಯದಲ್ಲಿ ಮುಸ್ಲಿಮರು ಒಂದು ತಿಂಗಳ ಕಾಲ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸವನ್ನು ಮಾಡುತ್ತಾರೆ. ಮತ್ತು ಆಧ್ಯಾತ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ. ರಂಜಾನ್ ತಿಂಗಳ ಉಪವಾಸ ಕೊನೆಗೊಂಡ ನಂತರ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಮಿಕ್ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಇದು ಕೂಡಾ ಒಂದು. ಈ ದಿನದಂದು ಮುಸ್ಲಿಮರು ತಮ್ಮ ಉಪವಾಸ(ರೋಜಾ)ವನ್ನು ಕೊನೆಗೊಳಿಸುತ್ತಾರೆ. ರಂಜಾನ್ ಸಮಯದಲ್ಲಿ ಅವರಿಗೆ ಆರೋಗ್ಯ ಮತ್ತು ಪ್ರತಿರೋಧಕವನ್ನು ನೀಡಿದ್ದಕ್ಕಾಗಿ ಅಲ್ಲಾಹನಿಗೆ ಧನ್ಯವಾದ ಹೇಳಿ ಹೊಸ ಬಟ್ಟೆಯನ್ನು ಧರಿಸುತ್ತಾರೆ. ವಿಶೇಷ ಭಕ್ಷ್ಯಗಳನ್ನು ತಯಾರಿಸುತ್ತಾರೆ, ದಾನ ಮಾಡುತ್ತಾರೆ, ಕುಟುಂಬ ಮತ್ತು ಸ್ನೇಹಿತರ ಜೊತೆ ಸೇರಿ ಸಮಯವನ್ನು ಕಳೆಯುತ್ತಾರೆ.

ಈದ್-ಉಲ್-ಫಿತಾರ್ ಹಬ್ಬವನ್ನು ಇಸ್ಲಾಮಿಕ್ ಕ್ಯಾಲೆಂಡರ್​​ನ ಹತ್ತನೇ ತಿಂಗಳಾದ ಶವ್ವಾಲ್​​ನ ಮೊದಲ ದಿನದಂದು ಅಮಾವಾಸ್ಯೆಯ ದರ್ಶನದ ನಂತರ ಆಚರಿಸಲಾಗುತ್ತದೆ. ಇಸ್ಲಾಮಿಕ್ ಕ್ಯಾಲೆಂಡರ್​​ನ ಅನುಗುಣವಾಗಿ ಚಂದ್ರನ ಹಿಜ್ರಿ ತಿಂಗಳ ಆರಂಭವು ಧಾರ್ಮಿಕ ವ್ಯವಸ್ಥೆಗಳು ಅಂದರೆ ಕಾಲನುಕ್ರಮದಲ್ಲಿ ಬದಲಾವಣೆಯು ಅಮವಾಸ್ಯೆಯ ವೀಕ್ಷಣೆಗೆ ಅನುಗುಣವಾಗಿ ಬದಲಾಗುವುದರಿಂದ ಈದ್-ಉಲ್-ಫಿತರ್ ವಿವಿಧ ಪ್ರದೇಶಗಳಲ್ಲಿ ವಿವಿಧ ದಿನಗಳಲ್ಲಿ ಬರುತ್ತದೆ. ಈ ವರ್ಷ ಈದ್-ಉಲ್-ಫಿತಾರ್ ನ್ನು ಏಪ್ರಿಲ್ 21 ಶುಕ್ರವಾರದಿಂದ ಏಪ್ರಿಲ್ 23 ಭಾನುವಾರದವರೆಗೆ ಆಚರಿಸಲಾಗುತ್ತದೆ ಎಂದು ಹೇಳಲಾಗಿದೆ. ಚಂದ್ರನ ವೀಕ್ಷಣೆಗೆ ಅನುಗುಣವಾಗಿ ನಿಜವಾದ ದಿನಾಂಕ ಬದಲಾಗಬಹುದು.

ಇದನ್ನೂ ಓದಿ: Eid-ul-Fitr 2021 Date: ಭಾರತದಲ್ಲಿ ರಂಜಾನ್ ಹಬ್ಬ ಆಚರಣೆ ಯಾವಾಗ? ಇಲ್ಲಿದೆ ಡಿಟೇಲ್ಸ್

ಈದ್-ಉಲ್-ಫಿತಾರ್ ಹಬ್ಬದ ಇತಿಹಾಸ ಮತ್ತು ಮಹತ್ವ:

ಪವಿತ್ರ ಕುರಾರ್​​​ನ್ನು ಪ್ರವಾದಿ ಮುಹಮ್ಮದ್ ಅವರಿಗೆ ರಂಜಾನ್ ತಿಂಗಳಲ್ಲಿ ಬಹಿರಂಗಪಡಿಸಲಾಯಿತು ಎಂದು ನಂಬಲಾಗಿದೆ. ಆ ಕಾರಣದಿಂದ ಮುಸ್ಲಿಮರು ಈ ತಿಂಗಳನ್ನು ಮಂಗಳಕರವೆಂದು ಪರಿಗಣಿಸುತ್ತಾರೆ. ಮತ್ತು ಈ ತಿಂಗಳಲ್ಲಿ ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸವನ್ನು ಹಿಡಿಯುತ್ತಾರೆ. ಅಲ್ಲಾಹನಿಗೆ ಪ್ರಾರ್ಥಿಸಲು ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ ಮತ್ತು ನಕಾರಾತ್ಮಕ ಆಲೋಚನೆಗಳಿಂದ ದೂರವಿರುತ್ತಾರೆ. ಈದ್-ಉಲ್-ಫಿತಾರ್ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುತ್ತದೆ. ಮತ್ತು ಅವರು ರುಚಿಕರವಾದ ಊಟದೊಂದಿಗೆ ಉಪವಾಸವನ್ನು ಮುಗಿಸುತ್ತಾರೆ. ಈದ್-ಉಲ್-ಫಿತಾರ್ ದಿನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸೇರಿ ಹಬ್ಬವನ್ನು ಆಚರಿಸುತ್ತಾರೆ.

ಈದ-ಉಲ್-ಫಿತರ್ ಆಚರಣೆ

ಪ್ರಪಂಚದಾತ್ಯಂತ ಮುಸ್ಲಿಮರು ಈದ್-ಉಲ್-ಫಿತರ್​​ನ್ನು ಅಲ್ಲಾಹನಿಗೆ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಆಚರಿಸುತ್ತಾರೆ. ಮತ್ತು ಬೆಳಗಿನ ಜಾವದ ನಂತರ ಧರ್ಮೋಪದೇಶವನ್ನು ಮಾಡುತ್ತಾರೆ. ಜತೆಗೆ ಹೊಸ ಬಟ್ಟೆಯನ್ನು ಧರಿಸುತ್ತಾರೆ. ಬಡವರಿಗೆ ದಾನ (ಜಕಾತ್) ನೀಡುತ್ತಾರೆ. ಎಲ್ಲರಿಗೂ ಸಿಹಿ ಹಂಚುತ್ತಾರೆ ಮತ್ತು ಅವರು ತಮ್ಮ ಮನೆಗಳಲ್ಲಿ ಬಿರಿಯಾನಿ, ಹಲೀಮ್, ಕಬಾಬ್, ಶ್ಯಾವಿಗೆ ಸೇರಿದಂತೆ ವಿವಿಧ ಭಕ್ಷ್ಯಗಳನ್ನು ಈ ಹಬ್ಬದ ದಿನ ತಯಾರಿಸುತ್ತಾರೆ. ಮತ್ತು ಮಕ್ಕಳು ಹಿರಿಯವರಿಂದ ಉಡುಗೊರೆಗಳು ಮತ್ತು ಹಣವನ್ನು ಪಡೆಯುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Tue, 18 April 23

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ