ಇನ್ನೇನೂ ಮುಸ್ಲಿಮರ ಪವಿತ್ರ ತಿಂಗಳ ರಂಜಾನ್ ಮುಗಿದು ಈದ್-ಉಲ್-ಫಿತರ್ ಹಬ್ಬ (Eid-Ul-Fitr 2023) ಬರುತ್ತಿದೆ. ಈ ಹಬ್ಬವು ಪವಿತ್ರ ರಂಜಾನ್ ತಿಂಗಳ ಉಪವಾಸದ ಕೊನೆಯನ್ನು ಸೂಚಿಸುತ್ತದೆ. ಈ ರಂಜಾನ್ ಸಮಯದಲ್ಲಿ ಮುಸ್ಲಿಮರು ಒಂದು ತಿಂಗಳ ಕಾಲ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸವನ್ನು ಮಾಡುತ್ತಾರೆ. ಮತ್ತು ಆಧ್ಯಾತ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ. ರಂಜಾನ್ ತಿಂಗಳ ಉಪವಾಸ ಕೊನೆಗೊಂಡ ನಂತರ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಮಿಕ್ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಇದು ಕೂಡಾ ಒಂದು. ಈ ದಿನದಂದು ಮುಸ್ಲಿಮರು ತಮ್ಮ ಉಪವಾಸ(ರೋಜಾ)ವನ್ನು ಕೊನೆಗೊಳಿಸುತ್ತಾರೆ. ರಂಜಾನ್ ಸಮಯದಲ್ಲಿ ಅವರಿಗೆ ಆರೋಗ್ಯ ಮತ್ತು ಪ್ರತಿರೋಧಕವನ್ನು ನೀಡಿದ್ದಕ್ಕಾಗಿ ಅಲ್ಲಾಹನಿಗೆ ಧನ್ಯವಾದ ಹೇಳಿ ಹೊಸ ಬಟ್ಟೆಯನ್ನು ಧರಿಸುತ್ತಾರೆ. ವಿಶೇಷ ಭಕ್ಷ್ಯಗಳನ್ನು ತಯಾರಿಸುತ್ತಾರೆ, ದಾನ ಮಾಡುತ್ತಾರೆ, ಕುಟುಂಬ ಮತ್ತು ಸ್ನೇಹಿತರ ಜೊತೆ ಸೇರಿ ಸಮಯವನ್ನು ಕಳೆಯುತ್ತಾರೆ.
ಈದ್-ಉಲ್-ಫಿತಾರ್ ಹಬ್ಬವನ್ನು ಇಸ್ಲಾಮಿಕ್ ಕ್ಯಾಲೆಂಡರ್ನ ಹತ್ತನೇ ತಿಂಗಳಾದ ಶವ್ವಾಲ್ನ ಮೊದಲ ದಿನದಂದು ಅಮಾವಾಸ್ಯೆಯ ದರ್ಶನದ ನಂತರ ಆಚರಿಸಲಾಗುತ್ತದೆ. ಇಸ್ಲಾಮಿಕ್ ಕ್ಯಾಲೆಂಡರ್ನ ಅನುಗುಣವಾಗಿ ಚಂದ್ರನ ಹಿಜ್ರಿ ತಿಂಗಳ ಆರಂಭವು ಧಾರ್ಮಿಕ ವ್ಯವಸ್ಥೆಗಳು ಅಂದರೆ ಕಾಲನುಕ್ರಮದಲ್ಲಿ ಬದಲಾವಣೆಯು ಅಮವಾಸ್ಯೆಯ ವೀಕ್ಷಣೆಗೆ ಅನುಗುಣವಾಗಿ ಬದಲಾಗುವುದರಿಂದ ಈದ್-ಉಲ್-ಫಿತರ್ ವಿವಿಧ ಪ್ರದೇಶಗಳಲ್ಲಿ ವಿವಿಧ ದಿನಗಳಲ್ಲಿ ಬರುತ್ತದೆ. ಈ ವರ್ಷ ಈದ್-ಉಲ್-ಫಿತಾರ್ ನ್ನು ಏಪ್ರಿಲ್ 21 ಶುಕ್ರವಾರದಿಂದ ಏಪ್ರಿಲ್ 23 ಭಾನುವಾರದವರೆಗೆ ಆಚರಿಸಲಾಗುತ್ತದೆ ಎಂದು ಹೇಳಲಾಗಿದೆ. ಚಂದ್ರನ ವೀಕ್ಷಣೆಗೆ ಅನುಗುಣವಾಗಿ ನಿಜವಾದ ದಿನಾಂಕ ಬದಲಾಗಬಹುದು.
ಇದನ್ನೂ ಓದಿ: Eid-ul-Fitr 2021 Date: ಭಾರತದಲ್ಲಿ ರಂಜಾನ್ ಹಬ್ಬ ಆಚರಣೆ ಯಾವಾಗ? ಇಲ್ಲಿದೆ ಡಿಟೇಲ್ಸ್
ಪವಿತ್ರ ಕುರಾರ್ನ್ನು ಪ್ರವಾದಿ ಮುಹಮ್ಮದ್ ಅವರಿಗೆ ರಂಜಾನ್ ತಿಂಗಳಲ್ಲಿ ಬಹಿರಂಗಪಡಿಸಲಾಯಿತು ಎಂದು ನಂಬಲಾಗಿದೆ. ಆ ಕಾರಣದಿಂದ ಮುಸ್ಲಿಮರು ಈ ತಿಂಗಳನ್ನು ಮಂಗಳಕರವೆಂದು ಪರಿಗಣಿಸುತ್ತಾರೆ. ಮತ್ತು ಈ ತಿಂಗಳಲ್ಲಿ ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸವನ್ನು ಹಿಡಿಯುತ್ತಾರೆ. ಅಲ್ಲಾಹನಿಗೆ ಪ್ರಾರ್ಥಿಸಲು ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ ಮತ್ತು ನಕಾರಾತ್ಮಕ ಆಲೋಚನೆಗಳಿಂದ ದೂರವಿರುತ್ತಾರೆ. ಈದ್-ಉಲ್-ಫಿತಾರ್ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುತ್ತದೆ. ಮತ್ತು ಅವರು ರುಚಿಕರವಾದ ಊಟದೊಂದಿಗೆ ಉಪವಾಸವನ್ನು ಮುಗಿಸುತ್ತಾರೆ. ಈದ್-ಉಲ್-ಫಿತಾರ್ ದಿನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸೇರಿ ಹಬ್ಬವನ್ನು ಆಚರಿಸುತ್ತಾರೆ.
ಪ್ರಪಂಚದಾತ್ಯಂತ ಮುಸ್ಲಿಮರು ಈದ್-ಉಲ್-ಫಿತರ್ನ್ನು ಅಲ್ಲಾಹನಿಗೆ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಆಚರಿಸುತ್ತಾರೆ. ಮತ್ತು ಬೆಳಗಿನ ಜಾವದ ನಂತರ ಧರ್ಮೋಪದೇಶವನ್ನು ಮಾಡುತ್ತಾರೆ. ಜತೆಗೆ ಹೊಸ ಬಟ್ಟೆಯನ್ನು ಧರಿಸುತ್ತಾರೆ. ಬಡವರಿಗೆ ದಾನ (ಜಕಾತ್) ನೀಡುತ್ತಾರೆ. ಎಲ್ಲರಿಗೂ ಸಿಹಿ ಹಂಚುತ್ತಾರೆ ಮತ್ತು ಅವರು ತಮ್ಮ ಮನೆಗಳಲ್ಲಿ ಬಿರಿಯಾನಿ, ಹಲೀಮ್, ಕಬಾಬ್, ಶ್ಯಾವಿಗೆ ಸೇರಿದಂತೆ ವಿವಿಧ ಭಕ್ಷ್ಯಗಳನ್ನು ಈ ಹಬ್ಬದ ದಿನ ತಯಾರಿಸುತ್ತಾರೆ. ಮತ್ತು ಮಕ್ಕಳು ಹಿರಿಯವರಿಂದ ಉಡುಗೊರೆಗಳು ಮತ್ತು ಹಣವನ್ನು ಪಡೆಯುತ್ತಾರೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:11 pm, Tue, 18 April 23