Yellow Teeth: ಬಿಳುಪಾದ ಹಲ್ಲುಗಳನ್ನು ಪಡೆಯಲು ಈ ಎಲೆಗಳನ್ನು ಜಗಿಯಿರಿ

ಹಲ್ಲಿನ ಎಲ್ಲಾ ಸಮಸ್ಯೆ ನಿವಾರಣೆಯ ಜೊತೆಗೆ ನಿಮ್ಮ ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಔಷಧೀಯ ಗುಣಗಳಿರುವ ಈ ಸಸ್ಯಗಳ ಎಲೆಗಳನ್ನು ಜಗಿಯಿರಿ. ಕೆಲವೇ ದಿನಗಳಲ್ಲಿ ಹೊಳೆಯುವ ಬಿಳುಪಾದ ಹಲ್ಲುಗಳ ಫಲಿತಾಂಶ ಪಡೆಯುವಿರಿ.ಆ ಎಲೆಗಳು ಯಾವುವು ಎಂದು ಇಲ್ಲಿ ತಿಳಿದುಕೊಳ್ಳಿ.

Yellow Teeth: ಬಿಳುಪಾದ ಹಲ್ಲುಗಳನ್ನು ಪಡೆಯಲು ಈ ಎಲೆಗಳನ್ನು ಜಗಿಯಿರಿ
Home Remedies For Yellow TeethImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Nov 14, 2023 | 4:57 PM

ಸಾಕಷ್ಟು ಜನರು ಹಳದಿ ಹಲ್ಲಿನ ಸಮಸ್ಯೆಯನ್ನು ಹೊಂದಿರುತ್ತಾರೆ. ಹಲ್ಲುಗಳನ್ನು ನೋಡಿಯೇ ನಮ್ಮ ಆರೋಗ್ಯವನ್ನು ಹೇಳಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಜೊತೆಗೆ ಹಳದಿ ಹಲ್ಲಿನಿಂದಾಗಿ ಜನರು ಮಾತನಾಡಲು, ನಗಾಡಲು ಮುಜುಗರಪಡುತ್ತಾರೆ. ಸರಿಯಾಗಿ ಹಲ್ಲುಜ್ಜದೇ ಇರುವುದು, ಕಾಫಿ ಮತ್ತು ಚಹಾವನ್ನು ಅತಿಯಾಗಿ ಕುಡಿಯುವುದು ಮತ್ತು ವಯಸ್ಸು ಮುಂತಾದವುಗಳು ಹಲ್ಲುಗಳ ಬಣ್ಣ ಬದಲಾಗಲು ಕಾರಣವಾಗಬಹುದು. ಆದರೆ ಇವುಗಳನ್ನು ನಿರ್ಲಕ್ಷಿಸಿದರೆ ಹಲ್ಲುಗಳಿಂದ ರಕ್ತಸ್ರಾವ, ಬಾಯಿ ದುರ್ವಾಸನೆ ಮುಂತಾದ ಸಮಸ್ಯೆಗಳನ್ನು ತಂದೊಡ್ಡಬಹುದು. ಆದ್ದರಿಂದ ಈ ಎಲ್ಲಾ ಸಮಸ್ಯೆ ನಿವಾರಣೆಯ ಜೊತೆಗೆ ನಿಮ್ಮ ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಔಷಧೀಯ ಗುಣಗಳಿರುವ ಈ ಸಸ್ಯಗಳ ಎಲೆಗಳನ್ನು ಜಗಿಯಿರಿ. ಕೆಲವೇ ದಿನಗಳಲ್ಲಿ ಹೊಳೆಯುವ ಬಿಳುಪಾದ ಹಲ್ಲುಗಳ ಫಲಿತಾಂಶ ಪಡೆಯುವಿರಿ.ಆ ಎಲೆಗಳು ಯಾವುವು ಎಂದು ಇಲ್ಲಿ ತಿಳಿದುಕೊಳ್ಳಿ.

ಬೇವು:

ಹಳದಿ ಹಲ್ಲುಗಳನ್ನು ಮತ್ತೆ ಬಿಳಿಯಾಗಿಸಲು ಬೇವು ತುಂಬಾ ಉಪಯುಕ್ತವಾಗಿದೆ. ಬೇವಿನ ಎಲೆಗಳು ಆ್ಯಂಟಿ ಫಂಗಲ್ ಮತ್ತು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿಂದ ಸಮೃದ್ಧವಾಗಿವೆ. ಬೇವು ಬಾಯಿಯಲ್ಲಿರುವ ಬ್ಯಾಕ್ಟೀರಿಯಾವನ್ನು ನಾಶಮಾಡಿ ಹಲ್ಲುಗಳನ್ನು ಬಿಳಿಯಾಗಿಸುತ್ತದೆ. ಬೇವಿನ ಎಲೆಗಳಿಂದ ತಯಾರಿಸಿದ ಟೂತ್ಪೇಸ್ಟ್ ಕೂಡ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಇದಲ್ಲದೆ, ಇದು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ.

ಇದನ್ನೂ ಓದಿ: ಮುಖಕ್ಕೆ ನಿಂಬೆ ಹಣ್ಣಿನ ರಸ ಹಚ್ಚುವುದು ಒಳ್ಳೆಯದಾ?

ತುಳಸಿ ಎಲೆ:

ತುಳಸಿ ಎಲೆಗಳು ಕೂಡ ಉತ್ತಮ ಔಷಧೀಯ ಗುಣಗಳನ್ನು ಹೊಂದಿವೆ. ತುಳಸಿ ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ತುಳಸಿ ಎಲೆಗಳ ರಸವನ್ನು ಮೌತ್ ವಾಶ್ ಆಗಿ ಬಳಸುವುದು ಅಥವಾ ಎಲೆಗಳನ್ನು ಜಗಿಯುತ್ತಿದ್ದರೆ ಹಲ್ಲುಗಳ ಮೇಲೆ ಸಂಗ್ರಹವಾಗಿರುವ ಪ್ಲೇಕ್ ಮತ್ತು ಬ್ಯಾಕ್ಟೀರಿಯಾಗಳು ನಿವಾರಣೆಯಾಗಿ ಹಲ್ಲು ಬಿಳಿಯಾಗುತ್ತವೆ.

ವೀಳ್ಯದೆಲೆ:

ವೀಳ್ಯದೆಲೆ ಉತ್ತಮ ಔಷಧೀಯ ಗುಣಗಳನ್ನು ಹೊಂದಿದೆ. ಜೊತೆಗೆ ಇದನ್ನು ತಾಂಬೂಲವಾಗಿ ಬಳಸಲಾಗುತ್ತದೆ. ವೀಳ್ಯದೆಲೆಯಲ್ಲಿ ಸೂಕ್ಷ್ಮಜೀವಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಈ ಎಲೆ ಜಗಿಯುವುದರಿಂದ ಹಳದಿ ಹಲ್ಲುಗಳ ಸಮಸ್ಯೆಯನ್ನು ನಿವಾರಿಸಬಹುದು.ಇದಲ್ಲದೆ, ಇದು ಬಾಯಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಇದು ಬಾಯಿಯ ದುರ್ವಾಸನೆಯನ್ನೂ ಕಡಿಮೆ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ