AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲುಗಳನ್ನು ಸ್ಟ್ರಾಂಗ್‌ ಆಗಿರಿಸಲು ಸಹಕಾರಿ ಈ ನ್ಯಾಚುರಲ್‌ ಟೂತ್‌ಪೇಸ್ಟ್‌; ಇದನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು

ಆರೋಗ್ಯಕರ ಹಲ್ಲು ಮತ್ತು ಒಸಡುಗಳಿಗಾಗಿ ಬಾಯಿಯ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಬೆಳಗ್ಗೆ ಮತ್ತು ರಾತ್ರಿ ದಿನಕ್ಕೆ ಎರಡು ಬಾರಿ ಹಲ್ಲುಜ್ಜುತ್ತಾರೆ. ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿರುವ ವಿವಿಧ ಟೂತ್‌ಪೇಸ್ಟ್‌ಗಳನ್ನು ಬಳಸುತ್ತಾರೆ. ಇವುಗಳಲ್ಲಿ ಹೆಚ್ಚಿನ ಪ್ರಮಾಣದ ರಾಸಾಯನಿಕ ಇರುವ ಸಾಧ್ಯತೆ ಇರುತ್ತದೆ. ಇವುಗಳ ಬದಲು ಮನೆಯಲ್ಲಿಯೇ ನ್ಯಾಚುರಲ್‌ ಟೂತ್‌ಪೇಸ್ಟ್‌ ತಯಾರಿಸಬಹುದು. ಅದು ಹೇಗೆ ಎಂಬ ಪೂರ್ಣ ವಿವರ ಇಲ್ಲಿದೆ.

ಹಲ್ಲುಗಳನ್ನು ಸ್ಟ್ರಾಂಗ್‌ ಆಗಿರಿಸಲು ಸಹಕಾರಿ ಈ ನ್ಯಾಚುರಲ್‌ ಟೂತ್‌ಪೇಸ್ಟ್‌; ಇದನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು
ಸಾಂದರ್ಭಿಕ ಚಿತ್ರ Image Credit source: Pexels
ಮಾಲಾಶ್ರೀ ಅಂಚನ್​
|

Updated on: Oct 25, 2026 | 6:22 PM

Share

ಅನಾರೋಗ್ಯಕರ ಹಲ್ಲುಗಳು (teeth) ಮತ್ತು ಒಸಡುಗಳು ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹೌದು ಇದು  ಬಾಯಿಯಿಂದ ಬ್ಯಾಕ್ಟೀರಿಯಾಗಳು ದೇಹವನ್ನು ಪ್ರವೇಶಿಸಲು ಕಾರಣವಾಗಬಹುದು. ಇದಲ್ಲದೆ, ಬಾಯಿಯ ದುರ್ವಾಸನೆಯು ಇತರರ ಮುಂದೆ ಮುಜುಗರವನ್ನುಂಟುಮಾಡಬಹುದು. ಹಾಗಾಗಿ ಬಾಯಿಯ ನೈರ್ಮಲ್ಯ ಮತ್ತು ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ನಾವೆಲ್ಲರೂ ಪ್ರತಿನಿತ್ಯ ಹಲ್ಲುಜ್ಜುತ್ತೇವೆ. ಬ್ರಷ್‌ ಮಾಡುವಾಗ ಮಾರುಕಟ್ಟೆಯಲ್ಲಿ ಲಭ್ಯವಿರುವ ಬೇರೆ ಬೇರೆ ಟೂತ್‌ಪೇಸ್ಟ್‌ಗಳನ್ನು ಬಳಕೆ ಮಾಡುತ್ತೇವೆ. ಇಂತಹ ಪೇಸ್ಟ್‌ಗಳಲ್ಲಿ ಹೆಚ್ಚಿನ ಪ್ರಮಾಣದ ರಾಸಾಯನಿಕಗಳಿರುತ್ತವೆ. ಅಲ್ಲದೆ ಇವುಗಳು ಯಾವುದೇ ಉತ್ತಮ ಫಲಿತಾಂಶ ಕೂಡ ನೀಡೋದಿಲ್ಲ. ಹೀಗಿರುವಾಗ ನೀವು ಬೇವಿನ ಎಲೆಯನ್ನು ಉಪಯೋಗಿಸಿಕೊಂಡು ನೈಸರ್ಗಿಕ ಟೂತ್‌ಪೇಸ್ಟ್‌ ತಯಾರಿಸಬಹುದು. ಅದು ಹೇಗೆ ಎಂಬ ಪೂರ್ಣ ವಿವರ ಇಲ್ಲಿದೆ.

ಮನೆಯಲ್ಲಿಯೇ ತಯಾರಿಸಬಹುದು ನೈಸರ್ಗಿಕ ಟೂತ್‌ಪೇಸ್ಟ್:‌

ಮನೆಯಲ್ಲಿಯೇ ತಯಾರಿಸಿದ ನೈಸರ್ಗಿಕ ಟೂತ್‌ಪೇಸ್ಟ್‌ ಇದು ಬಾಯಿಯ ದುರ್ವಾಸನೆಯನ್ನು ನಿವಾರಿಸುವುದಲ್ಲದೆ ಆರೋಗ್ಯಕರ ಹಲ್ಲುಗಳು ಮತ್ತು ಒಸಡುಗಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಟೂತ್‌ಪೇಸ್ಟ್ ತಯಾರಿಸಲು ಬೇಕಾಗುವ ಪದಾರ್ಥಗಳು:

  • ಒಣಗಿದ ಬೇವಿನ ಎಲೆಗಳು – 1/2 ಕಪ್
  • ಲವಂಗ – 10-12 ತುಂಡುಗಳು
  • ಅರಿಶಿನ ಪುಡಿ ಅಥವಾ ಅರಶಿನ ಕೊಂಬು – 1 ಟೀಸ್ಪೂನ್
  • ಪಟಿಕ – 1 ಟೀಸ್ಪೂನ್
  • ತ್ರಿಫಲ ಪುಡಿ – 2 ಚಮಚ
  • ಕಲ್ಲು ಉಪ್ಪು – 1 ಟೀಸ್ಪೂನ್
  • ಎಳ್ಳೆಣ್ಣೆ – 2 ರಿಂದ 3 ಹನಿಗಳು

ಟೂತ್‌ಪೇಸ್ಟ್ ತಯಾರಿಸುವ ವಿಧಾನ:

ನೈಸರ್ಗಿಕ ಟೂತ್‌ಪೇಸ್ಟ್ ತಯಾರಿಸಲು, ಮೊದಲು ಒಣಗಿದ ಬೇವಿನ ಎಲೆಗಳು,  ಲವಂಗ, ಅರಶಿನ ಕೊಂಬು, ಪಟಿಕ, ತ್ರಿಫಲ ಪುಡಿ, ಉಪ್ಪು ಇವೆಲ್ಲವನ್ನೂ ನುಣ್ಣಗೆ ಪುಡಿ ಮಾಡಿ, ಗಾಳಿಯಾಡದ ಡಬ್ಬದಲ್ಲಿ ಸಂಗ್ರಹಿಸಿಡಿ ಮತ್ತು ಹಲ್ಲುಜ್ಜುವ ಮುನ್ನ ಸ್ವಲ್ಪ ಈ ಪುಡಿಯನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಳ್ಳೆಣ್ಣೆಯನ್ನು ಸೇರಿಸಿ ಟೇಸ್ಟ್‌ ತಯಾರಿಸಿಕೊಂಡು ಅದರಲ್ಲಿ ಹಲ್ಲುಜ್ಜಿ.

ಇದನ್ನೂ ಓದಿ: ಒಂದು ತಿಂಗಳು ಸಕ್ಕರೆ ಸೇವಿಸುವುದನ್ನು ಬಿಟ್ಟರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳನ್ನು ಸಂಭವಿಸುತ್ತವೆ ಗೊತ್ತಾ?

ನ್ಯಾಚುರಲ್‌ ಟೂತ್‌ಪೇಸ್ಟ್‌ನ  ಪ್ರಯೋಜನಗಳೇನು?

ಈ ಟೂತ್‌ಪೇಸ್ಟ್‌ನಲ್ಲಿ ಲವಂಗವಿದ್ದು, ಇದು ಹಲ್ಲಿನ ದಂತಕವಚವನ್ನು ಹಾನಿಯಿಂದ ರಕ್ಷಿಸಲು, ಹಲ್ಲು ನೋವನ್ನು ನಿವಾರಿಸಲು ಮತ್ತು ಜುಮ್ಮೆನಿಸುವಿಕೆಯನ್ನು ನಿವಾರಿಸುತ್ತದೆ. ಇನ್ನೂ ಪಟಿಕ ಹಲ್ಲುಗಳಲ್ಲಿ ಸಂಗ್ರಹವಾದ ಪ್ಲೇಕ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಇದು ನಿಮ್ಮ ಹಲ್ಲುಗಳು ಮತ್ತು ಒಸಡುಗಳನ್ನು ಆರೋಗ್ಯವಾಗಿಡುವುದಲ್ಲದೆ ಅವುಗಳನ್ನು ಹೊಳೆಯುವಂತೆ ಮಾಡುತ್ತದೆ. ಈ ನೈಸರ್ಗಿಕ ಟೂತ್‌ಪೇಸ್ಟ್‌ನಲ್ಲಿ ಬಳಸಲಾದ ಅರಿಶಿನವು ಒಸಡುಗಳ ಉರಿಯೂತ ಮತ್ತು ನೋವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು, ಇದು ಬಾಯಿಯಲ್ಲಿ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುತ್ತದೆ. ತ್ರಿಫಲವು ಒಸಡುಗಳಲ್ಲಿ ರಕ್ತಸ್ರಾವ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಪ್ಲೇಕ್ ನಿರ್ಮಾಣವನ್ನು ತಡೆಯುತ್ತದೆ. ಒಟ್ಟಾರೆಯಾಗಿ ಈ ನೈಸರ್ಗಿಕ ಟೂತ್‌ಪೇಸ್ಟ್ ನಿಮ್ಮ ಹಲ್ಲು ಮತ್ತು ಒಸಡುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ