Hot Oil Massage: ಕೂದಲು ಉದುರುವಿಕೆಯನ್ನು ತಡೆಯಲು ಉಗುರು ಬೆಚ್ಚಗಿನ ಎಣ್ಣೆ ಮಸಾಜ್ ಟ್ರೈ ಮಾಡಿ

ಉಗುರು ಬೆಚ್ಚಗಿನ ಎಣ್ಣೆಯಿಂದ ತಲೆಯ ಬುಡಕ್ಕೆ ಮಸಾಜ್ ಮಾಡಿದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. 

Hot Oil Massage: ಕೂದಲು ಉದುರುವಿಕೆಯನ್ನು ತಡೆಯಲು ಉಗುರು ಬೆಚ್ಚಗಿನ ಎಣ್ಣೆ ಮಸಾಜ್ ಟ್ರೈ ಮಾಡಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2022 | 7:00 AM

ದೈನಂದಿನ ಒತ್ತಡದ ಜೀವನಶೈಲಿಯಿಂದಾಗಿ ಮನಸ್ಸಿನ ಜೊತೆಗೆ ದೇಹದ ಮೇಲೆ ಪರಿಣಾಮ ಬೀರುತ್ತವೆ. ಅದರಲ್ಲಿಯೂ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಆದರೆ ಉಗುರು ಬೆಚ್ಚಗಿನ (Hot Oil Massage) ಎಣ್ಣೆಯಿಂದ ತಲೆಯ ಬುಡಕ್ಕೆ ಮಸಾಜ್ ಮಾಡಿದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ವಿಶ್ರಾಂತಿ ಸಿಗುತ್ತದೆ. ಕೂದಲು ಉದುರುವುದು ನಿಲ್ಲುತ್ತದೆ ಮತ್ತು ಆರೋಗ್ಯಕರ ಕೂದಲು ಬೆಳೆಯುತ್ತದೆ. ಇದು ಹೊಸ ವಿಧಾನವೆನಲ್ಲ. ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ನಮ್ಮ ಪೂರ್ವಜರ ಕಾಲದಿಂದಲೂ ಮಾಡಿಕೊಂಡು ಬರಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ‘ಹಾಟ್ ಆಯಿಲ್ ಮಸಾಜ್’ ಎಂಬ ಚಿಕಿತ್ಸೆ ಸಹ ನಡೆಯುತ್ತಿದೆ.

ಯಾವುದೇ ರೀತಿಯ ಕೂದಲನ್ನು ಹೊಂದಿರುವ ಯಾರು ಬೇಕಾದರು ಹಾಟ್ ಆಯಿಲ್ ಮಸಾಜ್​ನ್ನು ಬಳಸಬಹುದು. ಬಿಸಿ ಎಣ್ಣೆಯಿಂದ ಪದೇ ಪದೇ ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಕೂದಲಿನ ಬೆಳವಣಿಗೆಗೆ ಕಾರಣವಾಗುತ್ತದೆ. ಕೂದಲು ತೇವಾಂಶವನ್ನು ಕಳೆದುಕೊಂಡಾಗ ಸಾಮಾನ್ಯವಾಗಿ ಮಂದವಾಗಿ ಕಾಣುತ್ತದೆ. ಇಂತಹ ಕೂದಲಿಗೆ ಪ್ರತಿನಿತ್ಯ ಎಣ್ಣೆ ಹಚ್ಚಿ ಮಸಾಜ್ ಮಾಡುತ್ತಾ ಬಂದರೆ ಕೂದಲು ಮೃದುವಾಗಿ ಸ್ಟ್ರಾಂಗ್ ಆಗುತ್ತದೆ. ಮಸಾಜ್ ಮಾಡುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಮುನ್ನೆಚ್ಚರಿಕೆ ಕ್ರಮ ಏನು?

ಹೆಚ್ಚು ಒತ್ತಡ ಬೇಡ:

ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವಾಗ ಹೆಚ್ಚು ಒತ್ತಡ ಹಾಕಬೇಡಿ. ನೆತ್ತಿಯ ಮೇಲೆ ಹೆಚ್ಚಿನ ಒತ್ತಡವನ್ನು ಹಾಕುವುದರಿಂದ  ಕೂದಲು ಉದುರುವುದು ಹೆಚ್ಚಾಗಬಹುದು. ಬದಲಾಗಿ ನೆತ್ತಿಯನ್ನು ಮೃದುವಾಗಿ ಮಸಾಜ್ ಮಾಡುವುದರಿಂದ ಕೂದಲಿನ ಕೋಶಗಳು ಬಲಗೊಳ್ಳುತ್ತವೆ. ಕೂದಲಿಗೆ ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದು ಕೂದಲು ದಪ್ಪವಾಗಿ ಕಾಣುವಂತೆಯೂ ಮಾಡುತ್ತದೆ.

ತಲೆಹೊಟ್ಟು ಕಡಿಮೆ ಮಾಡುತ್ತದೆ

‘ಹಾಟ್ ಆಯಿಲ್ ಮಸಾಜ್’ ಎಂದರೆ ನೆತ್ತಿಯನ್ನು ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು. ಆದರೆ ಎಣ್ಣೆಯನ್ನು ಹೆಚ್ಚು ಬಿಸಿ ಮಾಡಬೇಡಿ. ಅತಿಯಾಗಿ ಬಿಸಿಯಾದ ಎಣ್ಣೆಯು ಕೂದಲನ್ನು ಹಾನಿಗೊಳಿಸುತ್ತದೆ. ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ ತಲೆ ಮತ್ತು ಕೂದಲಿಗೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ತಲೆಹೊಟ್ಟು ಕಡಿಮೆಯಾಗುತ್ತದೆ.

ಮತ್ತಷ್ಟು ಜೀವನಶೈಲಿ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್