AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಉತ್ತಮ ಸಂಬಂಧವನ್ನು ಸೃಷ್ಟಿ ಮಾಡಿಕೊಳ್ಳುವುದು ಹೇಗೆ? ನಿಮ್ಮ ಸಂಗಾತಿಯನ್ನು ಹೀಗೆ ಅರ್ಥಮಾಡಿಕೊಳ್ಳಿ

ನಿಮ್ಮ ಸಂಗಾತಿಯ ಜೊತೆಗೆ ಪ್ರಸ್ತುತ ಯಾವ ರೀತಿಯ ಸಂಬಂಧದಲ್ಲಿ ಇದ್ದೇವೆ ಎಂಬುದು, ನಾವು ಅವರೊಂದಿಗೆ ಭವಿಷ್ಯದಲ್ಲಿ ಹೇಗೆ ಇರುತ್ತೇವೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತದೆ. ಇದು ಭವಿಷ್ಯದಲ್ಲಿ ಸಂಬಂಧದ ನಿರೀಕ್ಷೆಯ ಬಗ್ಗೆ ನಮಗೆ ಹೆಚ್ಚಿನ ಸ್ಪಷ್ಟತೆಯನ್ನು ನೀಡುತ್ತದೆ.

Relationship Tips: ಉತ್ತಮ ಸಂಬಂಧವನ್ನು ಸೃಷ್ಟಿ ಮಾಡಿಕೊಳ್ಳುವುದು ಹೇಗೆ? ನಿಮ್ಮ ಸಂಗಾತಿಯನ್ನು ಹೀಗೆ ಅರ್ಥಮಾಡಿಕೊಳ್ಳಿ
ಸಾಂದರ್ಬೀಕ ಚಿತ್ರ
TV9 Web
| Edited By: |

Updated on: Feb 06, 2023 | 4:24 PM

Share

ನಿಮ್ಮ ಸಂಗಾತಿಯ ಜೊತೆಗೆ ಪ್ರಸ್ತುತ ಯಾವ ರೀತಿಯ ಸಂಬಂಧದಲ್ಲಿ ಇದ್ದೇವೆ ಎಂಬುದು, ನಾವು ಅವರೊಂದಿಗೆ ಭವಿಷ್ಯದಲ್ಲಿ ಹೇಗೆ ಇರುತ್ತೇವೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತದೆ. ಇದು ಭವಿಷ್ಯದಲ್ಲಿ ಸಂಬಂಧದ ನಿರೀಕ್ಷೆಯ ಬಗ್ಗೆ ನಮಗೆ ಹೆಚ್ಚಿನ ಸ್ಪಷ್ಟತೆಯನ್ನು ನೀಡುತ್ತದೆ. ಸಂಬಂಧವು ಉತ್ತಮ ಸಂವಹನ, ಪರಸ್ಪರ ಅರ್ಥಮಾಡಿಕೊಳ್ಳುವ ಕೌಶಲ್ಯ, ಪರಸ್ಪರ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಮತ್ತು ಬಹಳಷ್ಟು ಪ್ರೀತಿ ಮತ್ತು ತಾಳ್ಮೆಯನ್ನು ಆಧರಿಸಿದೆ. ಸಂಬಂಧದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ಸ್ಥಳವನ್ನು ರಚಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತೇವೆ. ಥೆರಪಿಸ್ಟ್ ಎಲಿಜಬೆತ್ ಆರ್ನ್ಶಾ ಅವರು ಪ್ರಣಯವನ್ನು ಪುನರುಜ್ಜೀವನಗೊಳಿಸುವುದು ಹಾಗೂ ಆರೋಗ್ಯಕರ, ಸಂತೋಷದಾಯಕ ಸಂಬಂಧವನ್ನು ಹೇಗೆ ರಚಿಸುವುದು ಎಂಬುದರ ಕುರಿತು ಸಲಹೆಗಳನ್ನು ಹಂಚಿಕೊಂಡಿದ್ದಾರೆ.

ಇಬ್ಬರು ಜೊತೆಯಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸಂಬಂಧದಲ್ಲಿ ಹಂಚಿಕೆಯ ಜವಬ್ದಾರಿಗಳ ಅರ್ಥವನ್ನು ಸೃಷ್ಟಿಸುತ್ತದೆ. ಮತ್ತು ಇಬ್ಬರೂ ಸಮನವಾಗಿ ಮುಖ್ಯ ಎಂಬ ಭಾವನೆಯನ್ನು ಮೂಡಿಸುತ್ತದೆ. ಕನಸು ಮತ್ತು ಗುರಿಗಳನ್ನು ಹಂಚಿಕೊಳ್ಳುವುದು ಹಾಗೂ ಇತರ ವ್ಯಕ್ತಿಗಳ ಭಾವೋದ್ರೇಕ, ಮಹತ್ವಾಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ಪರಸ್ಪರ ಗೌರವಿಸಲು ಮತ್ತು ಅರ್ಥಮಾಡಿಕೊಳ್ಳಲು ಇದು ನಿಮಗೆ ಸಹಾಯ ಮಾಡುತ್ತದೆ.

ಒಟ್ಟಿಗೆ ಸಮಯವನ್ನು ಕಳೆಯುವುದು ಮುಖ್ಯವಾಗಿದ್ದರೂ, ನಮ್ಮ ಹವ್ಯಾಸಗಳು, ಆಚರಣೆಗಳು ಮತ್ತು ಸ್ನೇಹವನ್ನು ಅಳವಡಿಸಿಕೊಳ್ಳುವ ಮೂಲಕ ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಬೇಕು. ನಮ್ಮ ಆಸೆಗಳು ಮತ್ತು ಭಾವನೆಗಳನ್ನು ನಮ್ಮ ಸಂಗಾತಿಯ ಜೊತೆ ಹಂಚಿಕೊಳ್ಳಬೇಕು. ಇದು ಆರೋಗ್ಯಕರ ಸಂವಹನ ಮತ್ತು ತಿಳುವಳಿಕೆಯನ್ನು ಸೃಷ್ಟಿಸುತ್ತದೆ.

ಇದನ್ನೂ ಓದಿ:Healthy Relationship: ನಿಮ್ಮಿಬ್ಬರ ನಡುವಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಿಂಪಲ್​​ ಟಿಪ್ಸ್​​ ಫಾಲೋ ಮಾಡಿ

ನಮ್ಮ ಸಂಗಾತಿಯ ಜೊತೆಗೆ ಪ್ರಸ್ತುತ ಯಾವ ರೀತಿಯ ಸಂಬಂಧದಲ್ಲಿ ಇದ್ದೇವೆ ಎಂಬುದು, ನಾವು ಅವರೊಂದಿಗೆ ಭವಿಷ್ಯದಲ್ಲಿ ಹೇಗೆ ಇರುತ್ತೇವೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತದೆ. ಇದು ಭವಿಷ್ಯದಲ್ಲಿ ಸಂಬಂಧದ ನಿರೀಕ್ಷೆಯ ಬಗ್ಗೆ ನಮಗೆ ಹೆಚ್ಚಿನ ಸ್ಪಷ್ಟತೆಯನ್ನು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು