Hair Care: ಉದ್ದ ಕೂದಲು ಮತ್ತು ಹೊಳಪಿನ ಕೇಶರಾಶಿ ಪಡೆಯಲು ಇಲ್ಲಿವೆ ಕೆಲವು ಸರಳ ಸಲಹೆಗಳು

ತಲೆ ಕೂದಲು ಹೊಳಪು ಪಡೆಯಲು ಇಲ್ಲಿದೆ ಕೆಲವು ಸಲಹೆಗಳು, ಇವುಗಳನ್ನು ಅನುಸರಿಸುವ ಮೂಲಕ ನೀವು ಉದ್ದವಾದ ಕೇಶರಾಶಿ ಮತ್ತು ಕಾಂತಿಯುತ ಕೂದಲನ್ನು ಪಡೆಯಬಹುದು.

Hair Care: ಉದ್ದ ಕೂದಲು ಮತ್ತು ಹೊಳಪಿನ ಕೇಶರಾಶಿ ಪಡೆಯಲು ಇಲ್ಲಿವೆ ಕೆಲವು ಸರಳ ಸಲಹೆಗಳು
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Oct 25, 2021 | 1:16 PM

ಉದ್ದವಾದ ಮತ್ತು ಹೊಳೆಯುವ ಕೇಶರಾಶಿಯನ್ನು ಪಡೆಯಬೇಕು ಎಂಬ ಆಸೆ ಎಲ್ಲಾ ಹೆಣ್ಣು ಮಕ್ಕಳಲ್ಲಿಯೂ ಇರುತ್ತದೆ. ನಿಮ್ಮ ಕೂದಲಿನ ಬಣ್ಣ ಮತ್ತು ಹೊಳಪು ನಿಮ್ಮ ಸೌಂದರ್ಯವನ್ನೂ ಹೆಚ್ಚಿಸುತ್ತದೆ. ಬದಲಾಗಿರುವ ಕೆಲವು ಜೀವನಶೈಲಿಯಲ್ಲಿ ಕೂದಲು ಉದುರುವ ಸಮಸ್ಯೆಯೇ ಮಹಿಳೆಯರಿಗೆ ದೊಡ್ಡ ಚಿಂತೆಯಾಗಿಬಿಟ್ಟಿದೆ. ಹೀಗಿರುವಾಗ ನಿಮ್ಮ ತಲೆ ಕೂದಲು ಚೆನ್ನಾಗಿ ಬೆಳೆಯಲು ಮತ್ತು ಕಾಂತಿಯನ್ನು ಹೆಚ್ಚಿಸಲು ಇಲ್ಲಿದೆ ಕೆಲವು ಟಿಪ್ಸ್​ಗಳು. ಇವುಗಳನ್ನು ಅನುಸರಿಸುವ ಮೂಲಕ ನೀವು ಕೂದಲು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಪೌಷ್ಟಿಕ ತಜ್ಞರಾದ ಪೂಜಾ ಅವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಉದ್ದವಾದ ಕೂದಲು ಮತ್ತು ಕಾಂತಿಯುತ ಕೂದಲನ್ನು ಹೊಂದಲು ಏನೆಲ್ಲಾ ಮಾಡಬಹುದು ಎಂಬುದಕ್ಕೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಉದ್ದ ಮತ್ತು ಹೊಳೆಯುವ ಕೂದಲನ್ನು ಹೊಂದಲು ಅನುಸರಿಸಬಹುದಾದ ಸಲಹೆಗಳು ಈ ಕೆಳಗಿನಂತಿದೆ:

ಆಮ್ಲಾ ನೆಲ್ಲಿಕಾಯಿ ಔಷಧೀಯ ಗುಣಗಳಿಂದ ಕೂಡಿದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು ಜತೆಗೆ ಕಾಲಜನ್ ಇರುವುದರಿಂದ ಕೂದಲು ದಪ್ಪವಾಗಿ ಬೆಳೆಯಲು ಸಹಾಯ ಮಾಡುತ್ತದೆ. ವಯಸ್ಸು, ನಾವು ಸೇವಿಸುವ ಆಹಾರವನ್ನು ಅವಲಂಬಿಸಿ ಕೂದಲು ಪ್ರತೀ ವರ್ಷ ಸುಮಾರು ಆರು ಇಂಚು ಬೆಳೆಯುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಅಗಸೆ ಬೀಜ ಅಗಸೆ ಬೀಜದಲ್ಲಿ ಫೈಬರ್ ಮತ್ತು ಪ್ರೋಟೀನ್​ಗಳು ಸಮೃದ್ಧವಾಗಿರುತ್ತದೆ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಮತ್ತು ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಎರಡು ಚಮಚ ಅಗಸೆ ಬೀಜದಲ್ಲಿ 6,400mg ಒಮೆಗಾ 3 ಕೊಬ್ಬಿನಾಮ್ಲವಿರುತ್ತದೆ. ಇದು ನಿಮ್ಮ ಕೂದಲು ಚೆನ್ನಾಗಿ ಬೆಳೆಯಲು ಸಹಾಯಕವಾಗಿದೆ.

ಕರಿಬೇವು ಕರಿಬೇವಿನ ಎಲೆಗಳನ್ನು ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ರಸವನ್ನು ತಲೆಗೆ ಹಚ್ಚುವ ಮೂಲಕ ನೀವು ದಪ್ಪವಾದ ಕೂದಲನ್ನು ಪಡೆಯಬಹುದು ಜತೆಗೆ ಕೂದಲು ಹೊಳಪನ್ನು ಪಡೆದುಕೊಳ್ಳುತ್ತದೆ. ಇದರಲ್ಲಿ ವಿಟಮಿನ್ ಇ ಇದ್ದು ಇದು ನಿಮ್ಮ ಆರೋಗ್ಯಕ್ಕೆ ಉತ್ತಮ. ಜತೆಗೆ ಕೂದಲು ಕಾಂತಿಯುತವಾಗಿ ಬೆಳೆಯಲು ಸಹಾಯಕ ಎಂದು ಪೂಜಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

Health Benefits: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆಲ್ಲಿಕಾಯಿ, ಶುಂಠಿ ಜ್ಯೂಸ್ ಕುಡಿಯಿರಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್