AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bread Upma: ಚಳಿಗಾಲದಲ್ಲಿ ತ್ವರಿತ ಮತ್ತು ಸುಲಭವಾಗಿ ಬ್ರೆಡ್ ಉಪ್ಪಿಟ್ಟು ತಯಾರಿಸಿ

ಗಡಿಬಿಡಿ ಜೀವನಕ್ಕೆ ಒಗ್ಗಿಕೊಂಡಿರುವವರಿಗೂ ಈ ರೆಸಿಪಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಕೇವಲ 15 ನಿಮಿಷಗಳಲ್ಲಿ ತಯಾರಿಸಬಹುದಾಗಿದೆ.

Bread Upma: ಚಳಿಗಾಲದಲ್ಲಿ ತ್ವರಿತ ಮತ್ತು ಸುಲಭವಾಗಿ ಬ್ರೆಡ್ ಉಪ್ಪಿಟ್ಟು ತಯಾರಿಸಿ
Bread UpmaImage Credit source: NDTV FOOD
TV9 Web
| Edited By: |

Updated on: Nov 13, 2022 | 4:20 PM

Share

ಚಳಿಗಾಲ ಪ್ರಾರಂಭವಾಯಿತೆಂದರೆ ಸಾಕು ಕಂಬಳಿ ಹೊದ್ದು ಬೆಚ್ಚಗೆ ಮಲಗುವವರೇ ಹೆಚ್ಚು. ಈ ಚಳಿಗಾಲದ ಸಮಯದಲ್ಲಿ ಕೇವಲ 15 ನಿಮಿಷಗಳಲ್ಲಿ ತಯಾರಿಸಬಹುದಾದ ಬ್ರೆಡ್ ಉಪ್ಪಿಟ್ಟು ಬೆಚ್ಚಗೆ ಸವಿಯಿರಿ.

ಗಡಿಬಿಡಿ ಜೀವನಕ್ಕೆ ಒಗ್ಗಿಕೊಂಡಿರುವವರಿಗೂ ಈ ರೆಸಿಪಿ ಅತ್ಯಂತ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಸಾಕಷ್ಟು ಜನರು ಬೆಳಗ್ಗಿನ ಉಪಹಾರಕ್ಕೆ ಸಾಕಷ್ಟು ಸಮಯ ತಗಲುತ್ತದೆ ಎಂದು ತಿಂಡಿಯನ್ನು ಬಿಡುವವರೇ ಹೆಚ್ಚು. ಊಟವನ್ನು ಬಿಟ್ಟುಬಿಡುವುದು, ವಿಶೇಷವಾಗಿ ಉಪಹಾರ, ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಬೇಕಾಗುವ ಪದಾರ್ಥಗಳು: ಸಣ್ಣ ಆಯತಗಳಾಗಿ ಕತ್ತರಿಸಿದ 4 ಬ್ರೆಡ್ ಸ್ಲೈಸ್‌ಗಳು 2 ಚಮಚ ಎಣ್ಣೆ ಸಣ್ಣಗೆ ಕತ್ತರಿಸಿದ 1 ಈರುಳ್ಳಿ 1/4 ಕಪ್ ಕತ್ತರಿಸಿದ ಬೀನ್ಸ್ ಕತ್ತರಿಸಿದ 1/4 ಕಪ್ ಕ್ಯಾರೆಟ್ 1/4 ಕಪ್ ಹಸಿರು ಬಟಾಣಿ ರುಚಿಗೆ ತಕ್ಕಷ್ಟು ಉಪ್ಪು 1 ಹಸಿರು ಮೆಣಸಿನಕಾಯಿ 1/4 ಚಮಚ ಅರಿಶಿನ ಪುಡಿ 9 -10 ಕರಿಬೇವಿನ ಎಲೆಗಳು 1/4 ಕಪ್ ಹುರಿದ ಕಡಲೆಕಾಯಿ 1 ನಿಂಬೆ

ಮಾಡುವ ವಿಧಾನ: 1. ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ, ನಂತರ ಈರುಳ್ಳಿ, ಕರಿಬೇವಿನ ಎಲೆಗಳು ಮತ್ತು ಹಸಿರು ಮೆಣಸಿನಕಾಯಿಯನ್ನು ಸೇರಿಸಿ. ಒಂದು ನಿಮಿಷ ಹುರಿಯಿರಿ ಮತ್ತು ನಂತರ ಕತ್ತರಿಸಿದ ತರಕಾರಿಗಳನ್ನು ಸೇರಿಸಿ. ಇದನ್ನು 2-3 ನಿಮಿಷ ಬೇಯಲು ಬಿಡಿ.

2.ಉಪ್ಪು ಮತ್ತು ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಬ್ರೆಡ್ ತುಂಡುಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಲಘುವಾಗಿ ಗರಿಗರಿಯಾಗುವವರೆಗೆ 2-3 ನಿಮಿಷಗಳ ಕಾಲ ಫ್ರೈ ಮಾಡಿ.

3. ನಂತರ ಒಲೆಯಿಂದ ಕೆಳಗಿಳಿಸಿ ಮತ್ತು ಹುರಿದ ಬೀಜಗಳನ್ನು ಸೇರಿಸಿ ಮತ್ತು ನಿಂಬೆ ಹಿಂಡಿ. ಬಿಸಿ ಬಿಸಿಯಾದ ಬ್ರೆಡ್ ಉಪ್ಪಿಟ್ಟು ಸವಿಯಲು ಸಿದ್ದ.

ಇದನ್ನು ಓದಿ: ನಿಮ್ಮ ಆರೋಗ್ಯವನ್ನು ಕಾಪಾಡುವ ರಾಗಿಯ ಈ ರೆಸಿಪಿಯನ್ನೊಮ್ಮೆ ಪ್ರಯತ್ನಿಸಿ

ಜೀವನ ಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್