AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆಫೀಸು, ಮನೆ ಈ ಎಲ್ಲವುಗಳ ಒತ್ತಡದಿಂದ ಬಳಲುತ್ತಿದ್ದೀರಾ?; ಹೊರಬರಲು ಇಲ್ಲಿವೆ ಸುಲಭ ವಿಧಾನಗಳು

Stress: ಕೆಲಸ ಹಾಗೂ ಮನೆಯ ಕಾರಣಗಳಿಂದ ಬಹುತೇಕ ಜನರು ಒತ್ತಡ ಅನುಭವಿಸುತ್ತಾರೆ. ಇದರ ನಿರ್ವಹಣೆ ಬಹಳ ನಾಜೂಕು. ಅದಕ್ಕೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

Health Tips: ಆಫೀಸು, ಮನೆ ಈ ಎಲ್ಲವುಗಳ ಒತ್ತಡದಿಂದ ಬಳಲುತ್ತಿದ್ದೀರಾ?; ಹೊರಬರಲು ಇಲ್ಲಿವೆ ಸುಲಭ ವಿಧಾನಗಳು
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Sep 27, 2021 | 8:53 AM

Share

ಒತ್ತಡದಿಂದಾಗಿ, ಜನರು ಸಾಮಾನ್ಯವಾಗಿ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನವನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ನಮ್ಮ ಎಲ್ಲಾ ಒತ್ತಡದಿಂದ ಮುಕ್ತರಾಗಲು ಅಥವಾ ಆ ಕ್ಷಣಕ್ಕೆ ಮುಕ್ತಿ ಹೊಂದಲು ಬಹುತೇಕರು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಾರೆ. ಅಥವಾ ಯಾವುದೋ ನೆಚ್ಚಿನ ವೆಬ್ ಸಿರೀಸ್​ಗಳನ್ನು ನೋಡುತ್ತಾ ಸಮಯ ಕಳೆಯುತ್ತಾರೆ. ಈ ಎಲ್ಲ ಕೆಲಸಗಳನ್ನು ಮಾಡುವುದರಿಂದ, ತಾತ್ಕಾಲಿಕವಾಗಿ ನಾವು ನಮ್ಮ ಎಲ್ಲಾ ಒತ್ತಡಗಳನ್ನು ಮರೆತುಬಿಡುತ್ತೇವೆ. ಆದರೆ ಸಂಪೂರ್ಣವಾಗಿ ಆ ಒತ್ತಡಗಳಿಂದ ಹೇಗೆ ಮುಕ್ತಿ ಪಡೆಯಬಹುದು?

ಮೇಲೆ ತಿಳಿಸಿದ ತಾತ್ಕಾಲಿಕ ವಿಧಾನಗಳು ಕೇವಲ ಸ್ವಲ್ಪ ಕ್ಷಣದವರೆಗೆ ಮಾತ್ರ ಒತ್ತಡ ನಿವಾರಿಸುತ್ತವೆ. ಮತ್ತು ಅವುಗಳಿಂದ ಬಹಳ ಉಪಯಗವೇನೂ ಇಲ್ಲ. ಆದ್ದರಿಂದಲೇ ತಜ್ಞರು ಒತ್ತಡದಿಂದ ದೂರವಾಗಲು, ದೀರ್ಘಕಾಲಿಕ ಪರಿಣಾಮಗಳನ್ನು ನೀಡುವ ಉತ್ತಮ ವಿಧಾನಗಳನ್ನು ಅಳವಡಿಸಿಕೊಳ್ಳಿ ಎಂದು ಸಲಹೆ ನೀಡುತ್ತಾರೆ. ಅಂತಹ ಕೆಲವು ವಿಧಾನಗಳನ್ನು ಇಲ್ಲಿ ನೀಡಲಾಗಿದೆ.

ಧ್ಯಾನ: ಒತ್ತಡವನ್ನು ನಿವಾರಿಸಲು, ಪ್ರತಿದಿನ ಕನಿಷ್ಠ 5 ರಿಂದ 10 ನಿಮಿಷಗಳ ಕಾಲ ಧ್ಯಾನ ಮಾಡಿ. ನಿಯಮಿತವಾಗಿ ಧ್ಯಾನ ಮಾಡುವುದರಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಜೊತೆಗೆ ಇದು ಒತ್ತಡ ರಹಿತರಾಗಿರಲು ಸಹಾಯ ಮಾಡುತ್ತದೆ.

ಆರೊಮ್ಯಾಟಿಕ್(ಸುವಾಸನೆ) ಸಾಧನಗಳನ್ನು ಬಳಸಿ: ಇದು ನಿಮ್ಮ ಮನಸ್ಥಿತಿಯನ್ನು ಚೆನ್ನಾಗಿರಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅರೋಮಾಥೆರಪಿ ಎಂಬ ವಿಭಾಗವೇ ಇದ್ದು, ಇದರ ಮೂಲಕ ಭಾವನೆ ಮತ್ತು ನೆನಪಿನ ಶಕ್ತಿಯನ್ನು ನಿರ್ವಹಿಸಲು ಸುಲಭವಾಗುತ್ತದೆ.

ಡೈರಿ ಬರೆಯಿರಿ: ನಿಮ್ಮ ಅನುಭವಗಳು, ಭಯಗಳು ಮತ್ತು ಆಲೋಚನೆಗಳ ಬಗ್ಗೆ ಪ್ರತಿದಿನ ಬರೆಯಿರಿ. ಇದು ನಮ್ಮ ಭಾವನೆಗಳನ್ನು ಹೊರಹಾಕುತ್ತದೆ. ಇದರ ಪರಿಣಾಮ ಮನಸ್ಸು ಹಗುರವಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ.

ಪ್ರಾಣಾಯಾಮ ಮಾಡಿ: ಒತ್ತಡವನ್ನು ನಿವಾರಿಸಲು ಪ್ರತಿದಿನ ಸ್ವಲ್ಪ ಹೊತ್ತು ಪ್ರಾಣಾಯಾಮ ಮಾಡಿ. ಇದನ್ನು ನಿಯಮಿತವಾಗಿ ಮಾಡುವುದರಿಂದ, ನಿರಾಳರಾಗಬಹುದು. ಇದನ್ನು ಪ್ರತಿದಿನ ಮಾಡುವುದರಿಂದ ನಿಮ್ಮ ಮೆಟಾಬಾಲಿಸಂ ಸುಧಾರಿಸುತ್ತದೆ.

ಸಾಕಷ್ಟು ನಿದ್ರೆ ಮಾಡಿ: ಪ್ರತಿದಿನ ಸಮಯಕ್ಕೆ ಸರಿಯಾಗಿ ನಿದ್ರಿಸಿ ಮತ್ತು ಬೆಳಿಗ್ಗೆ ವಾಕ್ ಮಾಡಲು ಹೋಗಿ. ನಿಮ್ಮ ದಿನಚರಿಯಲ್ಲಿ ಈ ಕೆಲಸಗಳನ್ನು ಮಾಡುವುದರಿಂದ, ನಿಮ್ಮ ಜೀವನಶೈಲಿಯಲ್ಲಿ ಹಲವು ಬದಲಾವಣೆಗಳನ್ನು ನೀವು ಕಾಣಬಹುದು. ಮಲಗುವ ಮುನ್ನ 3 ರಿಂದ 4 ಗಂಟೆಗಳ ಮೊದಲು ಮೊಬೈಲ್, ಐಫೋನ್ ಮತ್ತು ಟಿವಿ ಬಳಸುವುದನ್ನು ನಿಲ್ಲಿಸಿ. ಇದು ಉತ್ತಮ ಪರಿಣಾಮ ನೀಡುತ್ತದೆ.

ಇದನ್ನೂ ಓದಿ:

ಕೈ ನಡಿಗೆಯಿಂದ 20 ಮೀಟರ್ ದೂರವನ್ನು ಕೇವಲ 4.78 ಸೆಕೆಂಡ್​ನಲ್ಲಿ ತಲುಪಿದ ವಿಶೇಷ ಚೇತನ ಯುವಕ; ಗಿನ್ನೆಸ್ ದಾಖಲೆಗೆ ಸೇರ್ಪಡೆ

Viral Video: ಸಫಾರಿ ಮಾಡುತ್ತಿರುವ ಜೀಪ್ ಒಳಗೆ ನುಗ್ಗಿದ ಸಿಂಹಿಣಿ; ನಂತರ ಏನಾಯ್ತು? ಅಚ್ಚರಿಯ ವಿಡಿಯೊ ಇಲ್ಲಿದೆ

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ 3 ಬಗೆಯ ಆರೋಗ್ಯಕರ ಪಾನೀಯಗಳು ಸಹಾಯಕ

(How to manage stress here is the 5 easy steps you can follow)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ