ಮೈಸೂರು ಸ್ಪೆಷಲ್ ಬಜ್ಜಿ; ಸಂಜೆ ಸ್ನ್ಯಾಕ್ಸ್ಗೆ ಮಾಡಿ ಸವಿಯಿರಿ
ಬಜ್ಜಿ 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ಮೈಸೂರು ಸ್ಪೆಷಲ್ ಬಜ್ಜಿ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.
ಲಾಕ್ಡೌನ್ ಕಾಲಘಟ್ಟದಲ್ಲಿ ಹೊರಗಿನ ತಿಂಡಿಗಳನ್ನು ತಿನ್ನುವುದು ಅಷ್ಟು ಸಮಂಜಸವಲ್ಲ. ಹಾಗಂತ ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು, ಬಜ್ಜಿ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ಬಜ್ಜಿ 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ಮೈಸೂರು ಸ್ಪೆಷಲ್ ಬಜ್ಜಿ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.
ಮೈಸೂರು ಬಜ್ಜಿ ಮಾಡಲು ಬೇಕಾಗುವ ಸಾಮಾಗ್ರಿಗಳು ಹಸಿ ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಜೀರಿಗೆ, ಉಪ್ಪು, ಅಡಿಗೆ ಸೋಡಾ, ಮೈದಾ ಹಿಟ್ಟು, ಮೊಸರು
ಮೈಸೂರು ಬಜ್ಜಿ ಮಾಡುವ ವಿಧಾನ
ಒಂದು ಬೌಲ್ಗೆ ಮೈದಾ ಹಿಟ್ಟು, ಮೊಸರು, ಜೀರಿಗೆ, ಉಪ್ಪು, ಅಡಿಗೆ ಸೋಡಾ, ಹಸಿ ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಬಳಿಕ ಒಂದು ಬಣಾಲೆಗೆ ಎಣ್ಣೆ ಹಾಕಿ ಅದು ಕಾದ ಮೇಲೆ ಬಜ್ಜಿ ಆಕಾರದಲ್ಲಿ ಉಂಡೆ ಮಾಡಿ ಕರಿಯಿರಿ. ಈಗ ರುಚಿಕರವಾದ ಮೈಸೂರು ಬಜ್ಜಿ ಸವಿಯಲು ಸಿದ್ಧ.
ಇದನ್ನೂ ಓದಿ:

ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
