AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wrinkles: ಚಿಕ್ಕ ವಯಸ್ಸಿನಲ್ಲೇ ನಿಮ್ಮ ಮುಖ ಸುಕ್ಕುಗಟ್ಟುತ್ತಿದೆಯೇ? ಸಿಂಪಲ್ ಟಿಪ್ಸ್ ನಿಮಗಾಗಿ

ಆಧುನಿಕ ಜೀವನದಲ್ಲಿ ನಾವು ನಿತ್ಯ ಸೇವಿಸುವ ಕಲಬೆರಕೆ ಆಹಾರ ಪದಾರ್ಥಗಳು, ಮಾಲಿನ್ಯ, ನಿದ್ರೆಯ ಸಮಯದಲ್ಲಿ ಬದಲಾವಣೆ ಇತ್ಯಾದಿಗಳಿಂದ ಅನೇಕ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

Wrinkles: ಚಿಕ್ಕ ವಯಸ್ಸಿನಲ್ಲೇ ನಿಮ್ಮ ಮುಖ ಸುಕ್ಕುಗಟ್ಟುತ್ತಿದೆಯೇ? ಸಿಂಪಲ್ ಟಿಪ್ಸ್ ನಿಮಗಾಗಿ
Wrinkles
TV9 Web
| Updated By: ನಯನಾ ರಾಜೀವ್|

Updated on: Nov 29, 2022 | 8:00 AM

Share

ಆಧುನಿಕ ಜೀವನದಲ್ಲಿ ನಾವು ನಿತ್ಯ ಸೇವಿಸುವ ಕಲಬೆರಕೆ ಆಹಾರ ಪದಾರ್ಥಗಳು, ಮಾಲಿನ್ಯ, ನಿದ್ರೆಯ ಸಮಯದಲ್ಲಿ ಬದಲಾವಣೆ ಇತ್ಯಾದಿಗಳಿಂದ ಅನೇಕ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮೆಟ್ರೋ ನಗರಗಳಲ್ಲಿ ವಾಸಿಸುವವರಿಗೆ ಈ ಸಮಸ್ಯೆ ಹೆಚ್ಚು ಸಾಮಾನ್ಯವಾಗಿದೆ. ಬಿಡುವಿಲ್ಲದ ಜೀವನದಿಂದ ಸೌಂದರ್ಯದ ಬಗ್ಗೆ ಗಮನ ಹರಿಸಲು ಸಮಯವಿಲ್ಲ. ಇದರಿಂದ ಚಿಕ್ಕ ವಯಸ್ಸಿನಲ್ಲೇ ಮುಖದಲ್ಲಿ ಸುಕ್ಕುಗಳು ಮೂಡುತ್ತವೆ. ಚಿಕ್ಕ ವಯಸ್ಸಿನಲ್ಲಿ ದೊಡ್ಡವರಂತೆ ಕಾಣುತ್ತಾರೆ. ಅಂತಹವರು ಬಾದಾಮಿಯನ್ನು ಆಹಾರದಲ್ಲಿ ಸೇರಿಸಿಕೊಂಡರೆ ಒಳ್ಳೆಯ ಫಲಿತಾಂಶ ಬರುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.

ನೀವು ಸುಕ್ಕುಗಳೊಂದಿಗೆ ವಯಸ್ಸಾದ ವ್ಯಕ್ತಿಯಂತೆ ಕಾಣುತ್ತಿದ್ದರೆ, ಇಡೀ ಮುಖವು ಪಿಗ್ಮೆಂಟೇಶನ್ ಕಲೆಗಳಿಂದ ಸುಂದರವಲ್ಲದಂತಾಗುತ್ತದೆ. ಈ ಸಮಸ್ಯೆಯಿಂದ ಪಾರಾಗಲು ಕೆಲವೊಂದು ಸಲಹೆಗಳನ್ನು ಪಾಲಿಸಿದರೂ ಅಡ್ಡ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ಮಹಿಳೆಯರು ಬಾದಾಮಿಯನ್ನು ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳುವ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು ಎಂದು ಅನೇಕ ಅಧ್ಯಯನಗಳು ತೋರಿಸಿವೆ.

ವಿಶೇಷವಾಗಿ ಮಹಿಳೆಯರ ಮುಖದಲ್ಲಿ ಸುಕ್ಕುಗಳು ಬಾದಾಮಿಯಲ್ಲಿ ಅಧಿಕವಾಗಿರುವ ಆಲ್ಫಾ ಟೊಕೊಫೆರಾಲ್ ಕಾರಣ, ಇದು ಮಹಿಳೆಯರಲ್ಲಿ ಸುಕ್ಕುಗಳು ಮತ್ತು ಪಿಗ್ಮೆಂಟೇಶನ್ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಬಾದಾಮಿಯು ಆಲ್ಫಾ ಟೋಕೋಫೆರಾಲ್ (ವಿಟಮಿನ್-ಇ), ಅಪರ್ಯಾಪ್ತ ಕೊಬ್ಬುಗಳು ಮತ್ತು ಇತರ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಆಲ್ಫಾಟೋಕೊಫೆರಾಲ್ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿದೆ. ಇವುಗಳು ಋತುಬಂಧಕ್ಕೊಳಗಾದ ಮಹಿಳೆಯರ ಮುಖದಲ್ಲಿನ ಸುಕ್ಕುಗಳು ಮತ್ತು ಪಿಗ್ಮೆಂಟೇಶನ್ ಸಮಸ್ಯೆಗಳ ತೀವ್ರತೆಯನ್ನು ಕಡಿಮೆ ಮಾಡುತ್ತದೆ ಮತ್ತು ಆದ್ದರಿಂದ ಬಾದಾಮಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ಪ್ರತಿದಿನ ಬಾದಾಮಿ ತಿನ್ನುವುದರಿಂದ ಮಹಿಳೆಯರ ಮುಖದಲ್ಲಿನ ಸುಕ್ಕುಗಳು ಕಡಿಮೆಯಾಗುವುದಲ್ಲದೆ ಚರ್ಮದ ಬಣ್ಣವೂ ಬದಲಾಗುತ್ತದೆ ಎಂದು ಭಾರತೀಯ ಸೌಂದರ್ಯ ತಜ್ಞರು ತೋರಿಸಿಕೊಟ್ಟಿದ್ದಾರೆ.

ಬಾದಾಮಿಯಲ್ಲಿ ವಿಟಮಿನ್-ಇ ಹೇರಳವಾಗಿದೆ ಇವುಗಳೊಂದಿಗೆ ಅಗತ್ಯವಾದ ಕೊಬ್ಬಿನಾಮ್ಲಗಳು ಮತ್ತು ಪಾಲಿಫಿನಾಲ್ಗಳು ಸಹ ಹೇರಳವಾಗಿವೆ. ಈ ಪೋಷಕಾಂಶಗಳು ಮಹಿಳೆಯರು ತಮ್ಮ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ಬಾದಾಮಿ ತಿನ್ನುವ ಮೂಲಕ ಸದಾ ಯೌವನದಿಂದ ಇರಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ