Sign In

By signing in or creating an account, you agree with Associated Broadcasting Company's Terms & Conditions and Privacy Policy.

Human Rights Day 2024: ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಇಂದು ವಿಶ್ವ ಮಾನವ ಹಕ್ಕುಗಳ ದಿನ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಹಾಗೂ ಮೂಲಭೂತ ಹಕ್ಕುಗಳೊಂದಿಗೆ ಮಾನವನ ಹಕ್ಕುಗಳ ಮಹತ್ವದ ಕುರಿತು ತಿಳಿಸುವ ಉದ್ದೇಶದಿಂದ ಈ ದಿನವನ್ನು ಘೋಷಿಸಲಾಯಿತು. ಹೀಗಾಗಿ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗ ಶುರುವಾಯಿತು? ಮಹತ್ವ ಸೇರಿದಂತೆ ಇನ್ನಿತ್ತರ ಸಂಪೂರ್ಣ ಮಾಹಿತಿ ಇಲ್ಲಿದೆ.

Human Rights Day 2024: ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 10, 2024 | 10:33 AM

ಸಮಾಜದಲ್ಲಿ ಮಾನವನಿಗೆ ಯಾವುದೇ ಸ್ವಾತಂತ್ರ್ಯ ಹಾಗೂ ಹಕ್ಕುಗಳು ಇರದೇ ಹೋಗಿದ್ದರೆ ಹೇಗಿದ್ದೀರಬಹುದು. ಮಾನವನು ಹೇಗೆ ಬೇಕೋ ಹಾಗೆ ಬದುಕುತ್ತಿದ್ದ, ಯಾವುದೇ ಅಸ್ತಿತ್ವವೇ ಇಲ್ಲವಾಗಿರುತ್ತಿತ್ತು. ಮನುಷ್ಯನ ಬದುಕಿಗಾಗಿ ಹಾಗೂ ಅಸ್ತಿತ್ವಕ್ಕಾಗಿ ಇರುವುದೇ ಈ ಮಾನವನ ಹಕ್ಕುಗಳು. ಇಲ್ಲಿ ಯಾವುದೇ ಜಾತಿ ಜನಾಂಗ, ಬಣ್ಣ, ಧರ್ಮ, ಲಿಂಗ, ಭಾಷೆ, ರಾಜಕೀಯ, ಸ್ಥಾನಮಾನಗಳಿಗೆ ಬೆಲೆ ಕೊಡದೇ ಎಲ್ಲರೂ ಕೂಡ ಸರಿಸಮಾನರು. ಹೀಗಾಗಿ ಸಮಾಜದಲ್ಲಿರುವ ಪ್ರತಿಯೊಬ್ಬರು ಬದುಕುವ ಹಕ್ಕಿನೊಂದಿಗೆ ಇತರೆ ಹಕ್ಕುಗಳನ್ನು ಹೊಂದಿದ್ದಾರೆ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವುದು, ಮಾನವನ ಹಕ್ಕುಗಳ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಮಾನವ ಹಕ್ಕುಗಳ ದಿನದ ಇತಿಹಾಸ

1948ರ ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಮಾನವ ಹಕ್ಕುಗಳ ದಿನ ಎಂದು ಅಂಗೀಕರಿಸಿತು. ಆ ಬಳಿಕ ಮಾನವ ಹಕ್ಕುಗಳ ದಿನವನ್ನು ಔಷಚಾರಿಕವಾಗಿ 1950ರಲ್ಲಿ ಸ್ಥಾಪಿಸಲಾಯಿತು. ಅಸೆಂಬ್ಲಿಯು ರೆಸಲ್ಯೂಷನ್‌ 423 (V) ಅನ್ನು ಸ್ಥಾಪನೆ ಮಾಡಲಾಯಿತು. ಇದು ಎಲ್ಲಾ ರಾಷ್ಟ್ರಗಳು ಹಾಗೂ ಆಸಕ್ತ ಸಂಸ್ಥೆಗಳಿಗೆ ಡಿಸೆಂಬರ್‌ 10 ರಂದು ಮಾನವ ಹಕ್ಕಗಳು ದಿನವನ್ನಾಗಿ ಆಚರಿಸಲು ಕರೆ ನೀಡಿತು. ಅಂದಿನಿಂದ ಪ್ರತಿ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಗಂಡ ಎಷ್ಟೇ ಒಳ್ಳೆಯವನಾಗಿದ್ರು ಈ ಸಂದರ್ಭದಲ್ಲಿ ಹೆಣ್ಣಿಗೆ ತಾಯಿ ನೆನಪು ಕಾಡುತ್ತದೆಯಂತೆ

ಮಾನವ ಹಕ್ಕುಗಳ ದಿನದ ಈ ವರ್ಷದ ಥೀಮ್ ಹಾಗೂ ಮಹತ್ವ

ಪ್ರತಿ ವರ್ಷವು ಒಂದೊಂದು ಥೀಮ್ ನಲ್ಲಿ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ‘ಎಲ್ಲರಿಗೂ ಸಮಾನತೆ ಎನ್ನುವ ಥೀಮ್ ನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರುವ ಉದ್ದೇಶವನ್ನು ಹೊಂದಿದೆ. ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿನೊಂದಿಗೆ ಕೆಲವು ಮೂಲಭೂತ ಹಕ್ಕುಗಳು ಹಾಗೂ ಸ್ವಾತ್ರಂತ್ಯವನ್ನು ನೆನಪಿಸುವ ಸಲುವಾಗಿ ಈ ದಿನದ ಆಚರಣೆ ಯು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಮಾನವ ಹಕ್ಕುಗಳಿಗಾಗಿ ಹೋರಾಡಿದ ಎಲ್ಲಾ ಪ್ರಮುಖರನ್ನು ನೆನಪಿಸಿಕೊಳ್ಳಲಾಗುತ್ತದೆ. ಅದಲ್ಲದೇ ಜಾಗತಿಕ ಮಟ್ಟದಲ್ಲಿ ಕಾರ್ಯಾಗಾರಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್