ಸಮಾಜದಲ್ಲಿ ಮಾನವನಿಗೆ ಯಾವುದೇ ಸ್ವಾತಂತ್ರ್ಯ ಹಾಗೂ ಹಕ್ಕುಗಳು ಇರದೇ ಹೋಗಿದ್ದರೆ ಹೇಗಿದ್ದೀರಬಹುದು. ಮಾನವನು ಹೇಗೆ ಬೇಕೋ ಹಾಗೆ ಬದುಕುತ್ತಿದ್ದ, ಯಾವುದೇ ಅಸ್ತಿತ್ವವೇ ಇಲ್ಲವಾಗಿರುತ್ತಿತ್ತು. ಮನುಷ್ಯನ ಬದುಕಿಗಾಗಿ ಹಾಗೂ ಅಸ್ತಿತ್ವಕ್ಕಾಗಿ ಇರುವುದೇ ಈ ಮಾನವನ ಹಕ್ಕುಗಳು. ಇಲ್ಲಿ ಯಾವುದೇ ಜಾತಿ ಜನಾಂಗ, ಬಣ್ಣ, ಧರ್ಮ, ಲಿಂಗ, ಭಾಷೆ, ರಾಜಕೀಯ, ಸ್ಥಾನಮಾನಗಳಿಗೆ ಬೆಲೆ ಕೊಡದೇ ಎಲ್ಲರೂ ಕೂಡ ಸರಿಸಮಾನರು. ಹೀಗಾಗಿ ಸಮಾಜದಲ್ಲಿರುವ ಪ್ರತಿಯೊಬ್ಬರು ಬದುಕುವ ಹಕ್ಕಿನೊಂದಿಗೆ ಇತರೆ ಹಕ್ಕುಗಳನ್ನು ಹೊಂದಿದ್ದಾರೆ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವುದು, ಮಾನವನ ಹಕ್ಕುಗಳ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
1948ರ ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಮಾನವ ಹಕ್ಕುಗಳ ದಿನ ಎಂದು ಅಂಗೀಕರಿಸಿತು. ಆ ಬಳಿಕ ಮಾನವ ಹಕ್ಕುಗಳ ದಿನವನ್ನು ಔಷಚಾರಿಕವಾಗಿ 1950ರಲ್ಲಿ ಸ್ಥಾಪಿಸಲಾಯಿತು. ಅಸೆಂಬ್ಲಿಯು ರೆಸಲ್ಯೂಷನ್ 423 (V) ಅನ್ನು ಸ್ಥಾಪನೆ ಮಾಡಲಾಯಿತು. ಇದು ಎಲ್ಲಾ ರಾಷ್ಟ್ರಗಳು ಹಾಗೂ ಆಸಕ್ತ ಸಂಸ್ಥೆಗಳಿಗೆ ಡಿಸೆಂಬರ್ 10 ರಂದು ಮಾನವ ಹಕ್ಕಗಳು ದಿನವನ್ನಾಗಿ ಆಚರಿಸಲು ಕರೆ ನೀಡಿತು. ಅಂದಿನಿಂದ ಪ್ರತಿ ವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ.
ಇದನ್ನೂ ಓದಿ: ಗಂಡ ಎಷ್ಟೇ ಒಳ್ಳೆಯವನಾಗಿದ್ರು ಈ ಸಂದರ್ಭದಲ್ಲಿ ಹೆಣ್ಣಿಗೆ ತಾಯಿ ನೆನಪು ಕಾಡುತ್ತದೆಯಂತೆ
ಪ್ರತಿ ವರ್ಷವು ಒಂದೊಂದು ಥೀಮ್ ನಲ್ಲಿ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ‘ಎಲ್ಲರಿಗೂ ಸಮಾನತೆ ಎನ್ನುವ ಥೀಮ್ ನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತರುವ ಉದ್ದೇಶವನ್ನು ಹೊಂದಿದೆ. ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿನೊಂದಿಗೆ ಕೆಲವು ಮೂಲಭೂತ ಹಕ್ಕುಗಳು ಹಾಗೂ ಸ್ವಾತ್ರಂತ್ಯವನ್ನು ನೆನಪಿಸುವ ಸಲುವಾಗಿ ಈ ದಿನದ ಆಚರಣೆ ಯು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಮಾನವ ಹಕ್ಕುಗಳಿಗಾಗಿ ಹೋರಾಡಿದ ಎಲ್ಲಾ ಪ್ರಮುಖರನ್ನು ನೆನಪಿಸಿಕೊಳ್ಳಲಾಗುತ್ತದೆ. ಅದಲ್ಲದೇ ಜಾಗತಿಕ ಮಟ್ಟದಲ್ಲಿ ಕಾರ್ಯಾಗಾರಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ