AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Human Rights Day 2025: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯವು ಪ್ರತಿಯೊಬ್ಬ ವ್ಯಕ್ತಿಯ ಹಕ್ಕುಗಳಾಗಿವೆ. ಈ ಮಾನವ ಹಕ್ಕುಗಳ ಮಹತ್ವವನ್ನು ನಮಗೆ ಅರ್ಥಮಾಡಿಕೊಳ್ಳಲು ಹಾಗೂ ಅವುಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಡಿಸೆಂಬರ್‌ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ.

Human Rights Day 2025: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ
ಮಾನವ ಹಕ್ಕುಗಳ ದಿನImage Credit source: Freepik
ಮಾಲಾಶ್ರೀ ಅಂಚನ್​
|

Updated on:Dec 10, 2025 | 9:58 AM

Share

ಈ ಭೂಮಿಯ ಮೇಲೆ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಅದರಂತೆ ಸರಿ ಸಮಾನವಾಗಿ ಜೀವಿಸುವ, ತಮಗೆ ಬೇಕಾದದ್ದನ್ನು ತಿನ್ನು, ವಾಸಿಸುವ, ಓಡಾಡುವ, ಮಾತನಾಡುವ ಮೂಲಭೂತ ಹಕ್ಕುಗಳಿವೆ. ಈ ಮೂಲಭೂತ ಸವಲತ್ತುಗಳು, ಹಕ್ಕುಗಳನ್ನು ಪಡೆಯುವುದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ. ಆದರೆ ಕೆಲವು  ಸಂದರ್ಭದಲ್ಲಿ ಮನುಷ್ಯನ ಈ ಮೂಲಭೂತ ಹಕ್ಕುಗಳನ್ನು ಧಮನಿಸುವ ಪ್ರಯತ್ನಗಳು ನಡೆಯುತ್ತಿವೆ. ಇದು ಮಾನವ ಹಕ್ಕುಗಳ (Human Rights) ಉಲ್ಲಂಘನೆಯಾಗಿದೆ. ಹಾಗಾಗಿ ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಸಲುವಾಗಿ ಹಾಗೂ ಮೂಲಭೂತ ಹಕ್ಕುಗಳೊಂದಿಗೆ ಮಾನವ ಹಕ್ಕುಗಳ ಮಹತ್ವವನ್ನು ಅರ್ಥಮಾಡಿಕೊಳ್ಳಲು ಪ್ರತಿವರ್ಷ ಡಿಸೆಂಬರ್‌ 10 ರಂದು ವಿಶ್ವ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.

ಮಾನವ ಹಕ್ಕುಗಳ ದಿನದ ಇತಿಹಾಸವೇನು?

ಡಿಸೆಂಬರ್ 10, 1948 ರಂದು ಪ್ಯಾರಿಸ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಅಂಗೀಕರಿಸಿತು. ಈ ಘೋಷಣೆಯನ್ನು ಅಂಗೀಕರಿಸಿದ ನಂತರ, ಪ್ರಪಂಚದಾದ್ಯಂತ ಮಾನವ ಹಕ್ಕುಗಳ ರಕ್ಷಣೆಗೆ ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಯಿತು. 1948 ರಲ್ಲಿ ಈ ಘೋಷಣೆಯನ್ನು ಅಂಗೀಕರಿಸಿದಾಗ, ಪ್ರಪಂಚದ ವಿವಿಧ ಭಾಗಗಳಲ್ಲಿ ಯುದ್ಧ, ಶೋಷಣೆ ಮತ್ತು ದಬ್ಬಾಳಿಕೆಯ ಸಂದರ್ಭಗಳು ಇದ್ದವು. ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ ಉದ್ದೇಶವು ಮಾನವೀಯತೆಯ ಮೂಲಭೂತ ಹಕ್ಕುಗಳನ್ನು ಖಚಿತಪಡಿಸಿಕೊಳ್ಳುವುದಾಗಿತ್ತು. ನಂತರ 1950 ರಲ್ಲಿ ಮಾನವ ಹಕ್ಕುಗಳ ದಿನವನ್ನು ಔಪಚಾರಿಕವಾಗಿ ಸ್ಥಾಪಿಸಲಾಯಿತು.

ಇದನ್ನೂ ಓದಿ: ಭ್ರಷ್ಟಾಚಾರವೆಂಬ ವೈರಸ್ ರಾಷ್ಟ್ರದ ಪ್ರಗತಿಗೆ ಮಾರಕ

ಮಾನವ ಹಕ್ಕುಗಳ ದಿನದ ಮುಖ್ಯ ಉದ್ದೇಶಗಳೇನು?

ಮಾನವ ಹಕ್ಕುಗಳನ್ನು ಹೆಚ್ಚಿಸುವುದು ಶಿಕ್ಷಣ ಮತ್ತು ಜಾಗೃತಿ: ಈ ದಿನವು ಪ್ರಪಂಚದಾದ್ಯಂತ ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಒಂದು ಅವಕಾಶವನ್ನು ಒದಗಿಸುತ್ತದೆ.

ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಹೋರಾಡುವುದು: ಈ ದಿನವು ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಹೋರಾಡುತ್ತಿರುವ ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ಕೆಲಸ ಮಾಡುತ್ತಿರುವವರನ್ನು ಗೌರವಿಸುವ ಸಂದರ್ಭವಾಗಿದೆ.

ಮಾನವ ಹಕ್ಕುಗಳ ಗೌರವ ಮತ್ತು ರಕ್ಷಣೆ: ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಗೌರವ ಮತ್ತು ರಕ್ಷಣೆಗೆ ಅರ್ಹರು. ಮಾನವ ಹಕ್ಕುಗಳ ದಿನವು ಸರ್ಕಾರಗಳು, ಸಂಸ್ಥೆಗಳು ಮತ್ತು ನಾಗರಿಕರು ಮಾನವ ಹಕ್ಕುಗಳನ್ನು ಎತ್ತಿಹಿಡಿಯಲು ಮತ್ತು ರಕ್ಷಿಸಲು ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಉತ್ತೇಜಿಸುತ್ತದೆ.

ಸಾಮಾಜಿಕ ಬದಲಾವಣೆ ತರುವುದು: ಮಾನವ ಹಕ್ಕುಗಳ ದಿನವು ಸಾಮಾಜಿಕ ಬದಲಾವಣೆಯನ್ನು ತರುವ ಒಂದು ಅವಕಾಶವೂ ಆಗಿದೆ. ಇದು ಜನರು ಒಗ್ಗೂಡಿ ಮಾನವ ಹಕ್ಕುಗಳನ್ನು ಉಲ್ಲಂಘಿಸುವ ವಿಷಯಗಳ ವಿರುದ್ಧ ಮಾತನಾಡಲು ಅವಕಾಶವನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 am, Wed, 10 December 25