ನೆಗಡಿ ಕಡಿಮೆಯಾದರೂ ಎದೆಯಲ್ಲಿ ಕಟ್ಟಿಕೊಂಡಿರುವ ಕಫ ಕಡಿಮೆ ಮಾಡುವುದು ಹೇಗೆ? ಇಲ್ಲಿದೆ ಮನೆಮದ್ದು

ಬದಲಾಗುತ್ತಿರುವ ಹವಾಮಾನದ ಕಾರಣದಿಂದಾಗಿ ಅನೇಕ ಜನರು ಶೀತ ಮತ್ತು ಜ್ವರದಂತಹ ಕಾಯಿಲೆಗೆ ಆಗಾಗ್ಗೆ ತುತ್ತಾಗುತ್ತಿರುತ್ತಾರೆ. ಮತ್ತೊಂದೆಡೆ ನೆಗಡಿ ವಾಸಿಯಾದ ನಂತರವೂ ಎದೆಯಲ್ಲಿ ಕಟ್ಟಿಕೊಂಡಿರುವ ಕಫ ಹಾಗೇನೇ ಉಳಿದುಕೊಂಡು ನಮ್ಮನ್ನು ತೊಂದರೆಗೀಡು ಮಾಡುತ್ತದೆ. ಔಷಧಿಗಳ ಬದಲು ಮನೆಮದ್ದುಗಳ ಸಹಾಯದಿಂದ ಈ ಕಫದ ಸಮಸ್ಯೆಯಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.

ನೆಗಡಿ ಕಡಿಮೆಯಾದರೂ ಎದೆಯಲ್ಲಿ ಕಟ್ಟಿಕೊಂಡಿರುವ ಕಫ ಕಡಿಮೆ ಮಾಡುವುದು ಹೇಗೆ? ಇಲ್ಲಿದೆ ಮನೆಮದ್ದು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 28, 2023 | 6:17 PM

ಬದಲಾಗುತ್ತಿರು ಹವಾಮಾನವು ವೈರಲ್ ಸೋಂಕುಗಳನ್ನು ಉಂಟುಮಾಡುತ್ತದೆ. ಇದರಿಂದ ಹೆಚ್ಚಿನ ಜನರಿಗೆ ಜ್ವರ ಮತ್ತು ಶೀತ, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಭಾದಿಸುತ್ತದೆ. ಶೀತ ಮತ್ತು ಜ್ವರ ಎರಡು ಅಥವಾ ಮೂರು ದಿನಗಳಲ್ಲಿ ಕಡಿಮೆಯಾಗುತ್ತದೆ. ಆದರೆ ಹೆಚ್ಚಿನವರಿಗೆ ನೆಗಡಿ ವಾಸಿಯಾದ ನಂತರವೂ ಕಫದ ಸಮಸ್ಯೆ ಪದೇ ಪದೇ ಕಾಡುತ್ತಲೇ ಇರುತ್ತದೆ. ಎದೆಯಲ್ಲಿ ಕಟ್ಟಿಕೊಂಡಿರುವ ಕಫವು ನ್ಯಪೋನಿಯಾ, ಕ್ಷಯ, ಶ್ವಾಸಕೋಶದ ಕ್ಯಾನ್ಸರ್, ಬ್ರಾಂಕಿಯೆಕ್ಟಾಸಿಸ್ ಮತ್ತು ಬ್ರಾಂಕೈಟಿಸ್ ನಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಫದ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಔಷಧಿಗಳಿಂದ ಈ ಸಮಸ್ಯೆ ಕಡಿಮೆಯಾಗದಿದ್ದರೆ, ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ ಎದೆಯಲ್ಲಿ ಕಟ್ಟಿಕೊಂಡಿರುವ ಕಫದ ಸಮಸ್ಯೆಯಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.

ಕಫದಿಂದ ಮುಕ್ತಿ ಪಡೆಯಲು ಪರಿಣಾಮಕಾರಿ ಮನೆಮದ್ದುಗಳು ಯಾವುದೆಂದರೆ:

ಒಣದ್ರಾಕ್ಷಿ ಮತ್ತು ಕರಿಮೆಣಸು ಮಿಶ್ರಿತ ನೀರು:

ಒಣದ್ರಾಕ್ಷಿ ಮತ್ತು ಕರಿಮೆಣಸು ಮಿಶ್ರಿತ ನೀರನ್ನು ಕುಡಿಯುವುದರಿಂದ ಎದೆಯಲ್ಲಿ ಕಟ್ಟಿಕೊಂಡಿರುವ ಕಫವನ್ನು ಹೋಗಲಾಡಿಸಬಹುದು. ನೀವು 10 ಒಣದ್ರಾಕ್ಷಿ ಮತ್ತು 6 ಕರಿಮೆಣಸನ್ನು ತೆಗೆದುಕೊಂಡು ಈ ಎರಡೂ ವಸ್ತುಗಳನ್ನು ಒಂದು ಪಾತ್ರೆಗೆ ಹಾಕಿ ಅದಕ್ಕೆ ಒಂದು ಲೋಟ ನೀರನ್ನು ಸೇರಿಸಿ ಚೆನ್ನಾಗಿ ಕುದಿಸಿ. ಮತ್ತು ನೀರು ಪಾತ್ರೆಯಲ್ಲಿ ಅರ್ಧದಷ್ಟು ಆವಿಯಾಗುವವರೆಗೆ ಕುದಿಸಿ. ಈ ನೀರನ್ನು ದಿನಕ್ಕೆ ಎರಡರಿಂದ ಮೂರು ಬಾರಿ ಕುಡಿಯುವುದರಿಂದ ಗಂಟಲು ಮತ್ತು ಎದೆಯಲ್ಲಿ ಸಂಗ್ರಹವಾಗಿರುವ ಕಫವನ್ನು ಸುಲಭವಾಗಿ ತೆಗೆದುಹಾಕಬಹುದು. ಮಾತ್ರವಲ್ಲದೆ ಇದು ಕೆಮ್ಮು ಮತ್ತು ನೆಗಡಿಯನ್ನು ಕಡಿಮೆ ಮಾಡುತ್ತದೆ. 3 ದಿನಗಳ ಕಾಲ ನಿರಂತರವಾಗಿ ಈ ಕಷಾಯವನ್ನು ಕುಡಿಯುವುದರಿಂದ ಕಫದಿಂದ ಮುಕ್ತಿ ಪಡೆಯಬಹುದು,

ಶುಂಠಿ ಮತ್ತು ಜೇನುತುಪ್ಪ:

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಜೇನುತುಪ್ಪವು ಕಫ ಮತ್ತು ಗಂಟಲು ನೋವನ್ನು ನಿವಾರಿಸಲು ಪರಿಣಾಮಕಾರಿ ಮನೆಮದ್ದಾಗಿದೆ. ಶುಂಠಿ ರಸದೊಂದಿಗೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ಕಫದಿಂದ ಮುಕ್ತಿ ಪಡೆಯಬಹುದು. ಇದು ಮಾತ್ರವಲ್ಲದೆ ನೀವು ಶುಂಠಿಯನ್ನು ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಚೆನ್ನಾಗಿ ಕುದಿಸಿ ಆ ನೀರನ್ನು ಮಲಗುವ ಮುನ್ನ ಕುಡಿಯಿರಿ. ಈ ಮನೆಮದ್ದು ಕೂಡ ಕಫದಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರು ಕುಡಿಯಬೇಡಿ

ಜೇನುತುಪ್ಪ ಮತ್ತು ಕರಿಮೆಣಸು:

ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ನಮಗೆ ರೋಗಗಳ ವಿರುದ್ಧ ಹೋರಾಡುವ ಸಾಮಾರ್ಥ್ಯವನ್ನು ಒದಗಿಸುತ್ತದೆ. ಕರಿಮೆಣಸಿನ ಪುಡಿಯೊಂದಿಗೆ ಸ್ವಲ್ಪ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ಎದೆಯಲ್ಲಿ ಕಟ್ಟಿಕೊಂಡಿರುವ ಕಫವನ್ನು ತೊಡೆದುಹಾಕಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ