ಅಲೋವೆರಾ ಜ್ಯೂಸ್ ಕುಡಿಯುವ ಅಭ್ಯಾಸ ಬೆಳಸಿಕೊಳ್ಳಿ, ಯಾಕೆ ಗೊತ್ತಾ? ಇಲ್ಲಿದೆ ಆರೋಗ್ಯದ ಗುಟ್ಟು

ನಮ್ಮ ದೇಹ ಎಲ್ಲವನ್ನು ಒಪ್ಪಿಕೊಳ್ಳುವುದಿಲ್ಲ, ಅದಕ್ಕೆ ಯಾವುದೂ ಬೇಕು ಅದನ್ನು ಮಾತ್ರ ತೆಗೆದುಕೊಳ್ಳುತ್ತೇವೆ. ಒಂದು ವೇಳೆ ಒತ್ತಡದಿಂದ ದೇಹಕ್ಕೆ ಒಗ್ಗಿಕೊಳ್ಳದ ಆಹಾರ ಸೇವನೆ ಮಾಡಿದ್ರೆ ಅಪಾಯ ಖಂಡಿತ, ಹಾಗಾಗಿ ಅಲೋವೆರಾ ನಮ್ಮ ಆರೋಗ್ಯಕ್ಕೆ ಒಳ್ಳೆಯದು, ಅಲೋವೆರಾ ಹೆಚ್ಚಿನವರ ಮನೆಯಂಗಳದಲ್ಲಿ ಇರುವ ಸಸ್ಯಗಳಲ್ಲಿ ಒಂದಾಗಿದ್ದು, ಸೌಂದರ್ಯ ವರ್ಧಕಗಳ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಲೋಳೆರಸದಿಂದ ಚರ್ಮ ಹಾಗೂ ಕೂದಲಿನ ಆರೋಗ್ಯವನ್ನು ಕಾಪಡಬಹುದು. ಅದರೊಂದಿಗೆ ದಿನನಿತ್ಯ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದ್ದು ಅನೇಕ ರೋಗಗಳಿಗೆ ಔಷಧವಾಗಿ ಕೆಲಸ ಮಾಡುತ್ತದೆ.

ಅಲೋವೆರಾ ಜ್ಯೂಸ್ ಕುಡಿಯುವ ಅಭ್ಯಾಸ ಬೆಳಸಿಕೊಳ್ಳಿ, ಯಾಕೆ ಗೊತ್ತಾ? ಇಲ್ಲಿದೆ ಆರೋಗ್ಯದ ಗುಟ್ಟು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 25, 2024 | 5:39 PM

ಮನೆಯಂಗಳದಲ್ಲಿರುವ ಈ ಅಲೋವೆರಾವನ್ನು ಮಹಿಳೆಯರು ಹೆಚ್ಚಾಗಿ ತ್ವಚೆ ಹಾಗೂ ಕೂದಲಿನ ಸೌಂದರ್ಯ ಕಾಪಾಡಲು ಬಳಸುತ್ತಾರೆ. ಅನಾದಿ ಕಾಲದಿಂದಲೂ ಈ ಅಲೋವೆರಾವನ್ನು ಔಷಧಿಯಾಗಿ ಬಳಕೆ ಮಾಡಲಾಗುತ್ತಿದೆ. ಈ ಅಲೋವೆರಾದಲ್ಲಿ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಅಲೋವೆರಾದಲ್ಲಿ ವಿಟಮಿನ್ ಎ, ಸಿ, ಇ ಮತ್ತು ಬಿ ಕಾಂಪ್ಲೆಕ್ಸ್ ಮತ್ತು ಖನಿಜಗಳಾದ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು ಮತ್ತು ಅಮೈನೋ ಆಮ್ಲಗಳು ಹೇರಳವಾಗಿದ್ದು, ದೇಹ, ತ್ವಚೆ ಹಾಗೂ ಕೂದಲಿನ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಅಲೋವೆರಾ ಜ್ಯೂಸ್ ಸೇವನೆ ಮಾಡುವುದರಿಂದ ಆರೋಗ್ಯ ಲಾಭಗಳು ಅಧಿಕವಾಗಿದೆ.

ಅಲೋವೆರಾ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನಗಳು

* ತೂಕ ನಷ್ಟಕ್ಕೆ ಸಹಕಾರಿ: ಅಲೋವೆರಾ ಆಹಾರವನ್ನು ಜೀರ್ಣವಾಗುವಂತೆ ಮಾಡಿ ಕೊಬ್ಬನ್ನು ಶೇಖರಿಸುವುದನ್ನು ತಪ್ಪಿಸುತ್ತದೆ. ಈ ಮೂಲಕ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

* ಜೀರ್ಣ ಕ್ರಿಯೆಯ ಸುಧಾರಣೆಗೆ ಸಹಾಯಕ : ಈ ಅಲೋವೆರಾ ಅಥವಾ ಲೋಳೆಸರದಲ್ಲಿನ ಕಿಣ್ವಗಳು ಹಾಗೂ ನಾರುಗಳು ಜೀರ್ಣಕ್ರಿಯೆ ಪ್ರಕ್ರಿಯೆ ಸುಧಾರಿಸುತ್ತದೆ. ಹೊಟ್ಟೆಯನ್ನು ಹೊಟ್ಟೆಯನ್ನು ಸ್ವಚ್ಛಗೊಳಿಸಿ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಸಮಸ್ಯೆಯನ್ನು ದೂರ ಮಾಡುತ್ತದೆ.

* ಕೂದಲು ಹಾಗೂ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ : ಅಲೋವೆರಾ ಜ್ಯೂಸ್ ಸೇವನೆಯಿಂದ ಚರ್ಮ ಹಾಗೂ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚರ್ಮದ ಕಾಂತಿಯು ಹೆಚ್ಚಾಗುವುದಲ್ಲದೆ, ಕೂದಲು ಉದುರುವ ಸಮಸ್ಯೆಯೂ ನಿವಾರಣೆಯಾಗುತ್ತದೆ.

* ಹಲ್ಲುಗಳ ಆರೋಗ್ಯಕ್ಕೆ ಪೂರಕ: ಲೋಳೆರಸದ ಜ್ಯೂಸ್ ಕುಡಿಯುವುದರಿಂದ ಬಾಯಿಯ ದುರ್ವಾಸನೆಯೂ ಕಡಿಮೆ ಮಾಡಿ, ಒಸಡು ಮತ್ತು ಹಲ್ಲುಗಳನ್ನು ಶುಚಿಯಾಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಇದನ್ನೂ ಓದಿ: ಈ ಸಿಂಪಲ್ ಮನೆ ಮದ್ದಿನಿಂದ ಮುಖದ ಮೇಲಿನ ಬೇಡದ ಕೂದಲನ್ನು ಹೋಗಲಾಡಿಸಿ!

* ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ : ಜಂಕ್‍ಫುಡ್ ಸೇವನೆ ಸೇರಿದಂತೆ ಇನ್ನಿತ್ತರ ಆಹಾರಗಳನ್ನು ಸೇವಿಸುವುದರಿಂದ ದೇಹದಲ್ಲಿ ವಿಷಕಾರಿ ಅಂಶ ಸೇರಿಕೊಂಡಿದ್ದು, ಈ ವಿಷಕಾರಿ ಅಂಶಗಳನ್ನು ಹೊರಹಾಕಿ ನಿಮ್ಮ ದೇಹವನ್ನು ಶುದ್ಧ ಹಾಗೂ ಆರೋಗ್ಯಯುತವಾಗಿರಿಸುತ್ತದೆ.

* ಹೃದಯದ ಆರೋಗ್ಯಕ್ಕೆ ಪರಿಣಾಮಕಾರಿ : ದಿನನಿತ್ಯ ಈ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

* ಉರಿಯೂತವನ್ನು ನಿವಾರಿಸುತ್ತದೆ : ಅಲೋವೆರಾ ಜ್ಯೂಸ್ ಸೇವನೆ ಮಾಡುವುದರಿಂದ ಉರಿಯೂತವನ್ನು ಕಡಿಮೆ ಮಾಡಿ, ಕರುಳಿನ ಕಾಯಿಲೆಗೆ ಔಷಧವಾಗಿ ಕೆಲಸ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್