ಮಲಗಿದ ತಕ್ಷಣ ನಿದ್ದೆ ಬರುವುದಿಲ್ಲವೇ ? ಹಾಗಿದ್ದರೆ ಈ ಅಭ್ಯಾಸಗಳನ್ನು ರೂಡಿಸಿಕೊಳ್ಳಿ ಉತ್ತಮ ನಿದ್ದೆ ಬರುತ್ತೆ

ನೀವು ನಿದ್ರಾ ಹೀನತೆಯಿಂದ ಬಳಲುತ್ತಿದ್ದರೇ ಈ ಸಲಹೆಗಳನ್ನು ಅನುಸರಿಸಿ ನಿಮಗೆ ಉತ್ತಮ ನಿದ್ದೆ ಬರುತ್ತದೆ

ಮಲಗಿದ ತಕ್ಷಣ ನಿದ್ದೆ ಬರುವುದಿಲ್ಲವೇ ? ಹಾಗಿದ್ದರೆ ಈ ಅಭ್ಯಾಸಗಳನ್ನು ರೂಡಿಸಿಕೊಳ್ಳಿ ಉತ್ತಮ ನಿದ್ದೆ ಬರುತ್ತೆ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 04, 2022 | 10:41 PM

ಬೆಳಿಗ್ಗೆ ಎದ್ದ ನಂತರ ಅನೇಕ ಜನರು ಸೋಮಾರಿತನ ಮತ್ತು ಆಲಸ್ಯವನ್ನು ಅನುಭವಿಸುತ್ತಾರೆ. ರಾತ್ರಿ ಸರಿಯಾಗಿ ನಿದ್ದೆ ಮಾಡದೇ ಇರುವುದು ಇದಕ್ಕೆ ಮುಖ್ಯ ಕಾರಣ ಎನ್ನಬಹದು. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವರ್ಷಕ್ಕೆ ಒಂದೋ ಎರಡೋ ಬಾರಿ ನಿದ್ದೆ ಕಳೆದುಕೊಂಡರೂ ಪರವಾಗಿಲ್ಲ.. ಆದರೆ ಪ್ರತಿ ರಾತ್ರಿ ನಿದ್ದೆ ಬಾರದಿದ್ದರೂ.. ಗಂಟೆಗಟ್ಟಲೆ ನಿದ್ದೆಯಿಲ್ಲದೆ ಹಾಸಿಗೆಯಲ್ಲಿ ಕಳೆದರೂ ಅದನ್ನು ನಿರ್ಲಕ್ಷಿಸಬಾರದು ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ. ಏಕೆಂದರೆ ನಿದ್ರೆಯ ಕೊರತೆಯು ನಿಮ್ಮ ಆರೋಗ್ಯಕ್ಕೂ ಅಪಾಯಕಾರಿ. ಆದ್ದರಿಂದ, ನಿಮ್ಮ ಜೀವನಶೈಲಿ ಮತ್ತು ಆಹಾರಕ್ರಮಕ್ಕೆ ನೀವು ವಿಶೇಷ ಗಮನ ನೀಡಬೇಕು. ಪ್ರತಿನಿತ್ಯ ಇವುಗಳನ್ನು ಅನುಸರಿಸುವುದರಿಂದ ನೀವು ಹಾಸಿಗೆಯ ಮೇಲೆ ಮಲಗಿದ ತಕ್ಷಣ ನಿದ್ದೆ ಬರುತ್ತದೆ.

1. ತಿಂದ ತಕ್ಷಣ ನಿದ್ದೆ ಮಾಡಬೇಡಿ: ಊಟ ಮಾಡಿದ ತಕ್ಷಣ ಮಲಗುವುದು ಒಳ್ಳೆಯದಲ್ಲ. ಏಕೆಂದರೆ ಆಹಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ ಮತ್ತು ರಾತ್ರಿಯಲ್ಲಿ ನಿದ್ರೆ ಮಾಡುವುದು ಕಷ್ಟ. ಅದಕ್ಕಾಗಿಯೇ ರಾತ್ರಿಯಲ್ಲಿ ಚೆನ್ನಾಗಿ ನಿದ್ದೆ ಮಾಡಲು, ನೀವು ಮಲಗುವ 4 ಗಂಟೆಗಳ ಮೊದಲು ಆಹಾರವನ್ನು ಸೇವಿಸಬೇಕು. ರಾತ್ರಿ ಸಾಕಷ್ಟು ನೀರು ಕುಡಿದ ನಂತರ ಮಲಗಿಕೊಳ್ಳಿ. ಈ ರೀತಿ ಮಾಡುವುದರಿಂದ ಉತ್ತಮ ನಿದ್ದೆ ಬರುತ್ತದೆ.

2. ಮಲಗುವ ಮುನ್ನ ಸ್ನಾನ ಮಾಡಿ : ರಾತ್ರಿ ನಿದ್ದೆ ಬರದಿದ್ದರೆ ಸ್ನಾನ ಮಾಡುವುದರಿಂದ ಚೆನ್ನಾಗಿ ನಿದ್ದೆ ಮಾಡಬಹುದು. ಮಲಗುವ ಮುನ್ನ ಸ್ನಾನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ. ರಾತ್ರಿ ಸ್ನಾನಕ್ಕೆ ಬೆಚ್ಚಗಿನ ನೀರನ್ನು ಬಳಸಬಹುದು. ಈ ರೀತಿ ಮಾಡುವುದರಿಂದ ಉತ್ತಮ ನಿದ್ದೆ ಬರುತ್ತದೆ. ಸ್ನಾನ ಮಾಡುವುದರಿಂದ ದೇಹ ಶುದ್ಧಿಯಾಗುವುದಲ್ಲದೆ ಆಯಾಸ ದೂರವಾಗುತ್ತದೆ.

3. ಮಲಗುವ ಮುನ್ನ ಲೈಟ್ ಆಫ್ ಮಾಡಿ: ಮಲಗುವ ಕೋಣೆಯಲ್ಲಿ ಲೈಟ್ ಆಫ್ ಮಾಡುವುದರಿಂದ ನಿಮ್ಮ ನಿದ್ರೆಗೆ ತೊಂದರೆಯಾಗುವುದಿಲ್ಲ. ಸಣ್ಣ ಎಣ್ಣೆಯ ದೀಪವನ್ನು ಆರಿಸಿ.

4. ಪುಸ್ತಕಗಳನ್ನು ಓದಿ: ಮಲಗುವ ಮುನ್ನ ಪುಸ್ತಕಗಳನ್ನು ಓದುವುದು ಮತ್ತು ನಿಮ್ಮ ನೆಚ್ಚಿನ ಸಂಗೀತವನ್ನು ಕೇಳುವುದು ಒಳ್ಳೆಯದು. ಹೀಗೆ ಮಾಡಿದರೆ ಉಪಶಮನದ ಜೊತೆಗೆ ನೆಮ್ಮದಿಯ ನಿದ್ದೆ ಬರುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Tue, 4 October 22

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು