AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿ ಈರುಳ್ಳಿ ಸೇವಿಸಿದರೆ ಈ ಸಮಸ್ಯೆಗಳೆಲ್ಲವು ದೂರ

ಭಾರತೀಯ ಅಡುಗೆ ಮನೆಯಲ್ಲಿ ಈರುಳ್ಳಿ ಇದ್ದೆ ಇರುತ್ತದೆ. ಬಹುತೇಕರು ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ಈರುಳ್ಳಿಯನ್ನು ಬಳಸುತ್ತಾರೆ. ಯಾವುದೇ ಆಹಾರವು ಈರುಳ್ಳಿಯಿಲ್ಲದೇ ಪೂರ್ಣವಾಗುವುದೇ ಇಲ್ಲ. ಆದರೆ ಹಸಿ ಈರುಳ್ಳಿಯಲ್ಲಿ ರುಚಿ ಹೆಚ್ಚಾಗಿರುವ ಕಾರಣ ಊಟದ ವೇಳೆಯಲ್ಲಿ ಹಸಿಯಾಗಿ ಸೇವಿಸುವವರು ಇದ್ದಾರೆ. ಈ ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಅಧಿಕವಾಗಿದ್ದು, ಆರೋಗ್ಯವನ್ನು ಸದಾ ಕಾಪಾಡುತ್ತದೆ.

ಹಸಿ ಈರುಳ್ಳಿ ಸೇವಿಸಿದರೆ ಈ ಸಮಸ್ಯೆಗಳೆಲ್ಲವು ದೂರ
ಸಾಯಿನಂದಾ
| Edited By: |

Updated on: Jan 31, 2024 | 6:19 PM

Share

ಈರುಳ್ಳಿಯನ್ನು ಬಹುತೇಕರು ಇಷ್ಟ ಪಟ್ಟರೆ ಇನ್ನು ಕೆಲವರು ಇಷ್ಟ ಪಡುವುದಿಲ್ಲ. ಈ ಹಸಿ ಈರುಳ್ಳಿ ಸೇವನೆ ಮಾಡಿದರೆ, ಬಾಯಿಯು ಹಸಿ ಈರುಳ್ಳಿ ವಾಸನೆ ಬರುತ್ತದೆ ಎನ್ನುವ ಕಾರಣಕ್ಕೆ ಹಸಿಯಾಗಿ ತಿನ್ನಲು ಇಷ್ಟಪಡುವುದಿಲ್ಲ. ಆದರೆ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವ ಈ ಈರುಳ್ಳಿಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್ ಫೋಲಿಕ್ ಆಸಿಡ್, ಕ್ರೋಮಿಯಂ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ತಾಮ್ರ, ರಂಜಕ, ಮ್ಯಾಂಗನೀಸ್ ಮತ್ತು ಫೈಬರ್ ಅಂಶಗಳು ಹೇರಳವಾಗಿದೆ. ಈ ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಆರೋಗ್ಯವು ಲಾಭವು ಅಧಿಕವಾಗಿದೆ.

ಹಸಿ ಈರುಳ್ಳಿ ಸೇವನೆಯಿಂದ ಆಗುವ ಪ್ರಯೋಜನಗಳು

* ಹೃದಯದ ಆರೋಗ್ಯ ಹೆಚ್ಚಿಸಲು ಸಹಕಾರಿ : ಈರುಳ್ಳಿಯಲ್ಲಿ ಫ್ಲೋವೊನೈಡ್ ಗಳು ಮತ್ತು ಥಿಯೋಸೆಲ್ಫಿನೇಟ್ ಗಳು ಸಮೃದ್ಧವಾಗಿದೆ. ಫ್ಲೋವೊನೈಡ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

* ಮೂಳೆಗಳನ್ನು ಬಲಪಡಿಸುತ್ತದೆ : ಈರುಳ್ಳಿಯಲ್ಲ ಕ್ಯಾಲ್ಸಿಯಂ ಅಂಶವು ಅಧಿಕವಾಗಿದ್ದು, ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಮೂಳೆಗಳನ್ನು ಬಲ ಪಡಿಸುತ್ತದೆ.

* ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ : ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸಿ, ಆರೋಗ್ಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತದೆ.

* ಚರ್ಮದ ಆರೋಗ್ಯಕ್ಕೆ ಸಹಕಾರಿ : ಈರುಳ್ಳಿಯಲ್ಲಿರುವ ವಿಟಮಿನ್ ಸಿ ಮತ್ತು ಕೆ, ಹಾಗೂ ಜೀವಸತ್ವಗಳು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಿ ಚರ್ಮವನ್ನು ಆರೋಗ್ಯಯುತವಾಗಿರಿಸುತ್ತದೆ. ಕೆಲವರು ಚರ್ಮದ ಆರೋಗ್ಯವನ್ನು ಕಾಪಾಡಲು ಈರುಳ್ಳಿಯನ್ನು ಫೇಸ್ ಪ್ಯಾಕ್ ಆಗಿ ಬಳಸುತ್ತಾರೆ.

* ಕೂದಲಿನ ಆರೋಗ್ಯ ಕಾಪಾಡುತ್ತದೆ : ಈರುಳ್ಳಿ ನಿತ್ಯದ ಆಹಾರದಲ್ಲಿ ಬಳಸುವುದಲ್ಲದೆ ಹಸಿಯಾಗಿ ಸೇವನೆ ಮಾಡುವುದರಿಂದ ಕೂದಲಿನ ಆರೋಗ್ಯವು ಸುಧಾರಣೆಯಾಗುತ್ತದೆ. ಅದಲ್ಲದೇ ಹಸಿ ಈರುಳ್ಳಿಯ ರಸವನ್ನು ತಲೆಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆಗೆ ಮುಕ್ತಿ ಸಿಗುತ್ತದೆ.

ಇದನ್ನೂ ಓದಿ: ಬಿಸಿ ನೀರಿನಿಂದ ಮುಖ ತೊಳೆಯುವ ಅಭ್ಯಾಸವಿದೆಯೇ? ಈ ಅಭ್ಯಾಸ ಇಂದೇ ನಿಲ್ಲಿಸಿ

* ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ : ಈರುಳ್ಳಿಯಲ್ಲಿ ಕ್ವೆರ್ಸೆಟಿನ್‌ ನಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಕ್ಯಾನ್ಸರ್ ಸಂಬಂಧಿ ಆರೋಗ್ಯ ಸಮಸ್ಯೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

* ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ : ಹಸಿ ಈರುಳ್ಳಿಯಲ್ಲಿ ಆಹಾರದ ನಾರಿನಾಂಶ ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ, ಮೂಲವ್ಯಾಧಿ ಸೇರಿದಂತೆ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್