AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beetroot Benefits: ಬೀಟ್ರೂಟ್​ನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ?

Beetroot Benefits:ಬೀಟ್ರೂಟ್(Beetroot)​ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂಬುದು ಕೆಲವಷ್ಟೇ ಮಂದಿಗೆ ಗೊತ್ತು. ಕೇವಲ ಸಾಂಬಾರಿನಲ್ಲಿ ಕ್ಯಾರೇಟ್​ ಜತೆಗೆ ತೇಲಿಬಿಡುವ ತರಕಾರಿಯಲ್ಲ

Beetroot Benefits: ಬೀಟ್ರೂಟ್​ನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ?
Beetroot
Follow us
TV9 Web
| Updated By: ನಯನಾ ರಾಜೀವ್

Updated on: May 16, 2022 | 5:25 PM

ಬೀಟ್ರೂಟ್(Beetroot)​ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂಬುದು ಕೆಲವಷ್ಟೇ ಮಂದಿಗೆ ಗೊತ್ತು. ಕೇವಲ ಸಾಂಬಾರಿನಲ್ಲಿ ಕ್ಯಾರೇಟ್​ ಜತೆಗೆ ತೇಲಿಬಿಡುವ ತರಕಾರಿಯಲ್ಲ. ಬೀಟ್ರೂಟ್ ನಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಈ ತರಕಾರಿಯನ್ನು ಆಹಾರದಲ್ಲಿ ನಿಯಮಿತವಾಗಿ ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಸಂಬಂಧಿ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಬೀಟ್ರೂಟ್​ನಲ್ಲಿ ಇರುವಂತಹ ನೈಟ್ರೇಟ್ ಅಂಶದಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ನೈಟ್ರೇಟ್ ಅಂಶವು ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆ ಆಗುವ ಕಾರಣದಿಂದಾಗಿ ಇದು ರಕ್ತನಾಳಗಳನ್ನು ಹಿಗ್ಗುವಂತೆ ಮಾಡುವುದು ಮತ್ತು ಇದರಿಂದ ರಕ್ತದೊತ್ತಡವು ಕಡಿಮೆ ಆಗುವುದು.

ಮಣ್ಣಿನ ಅಡಿಯಲ್ಲಿ ಸಿಗುವ ಕೆಲ ತರಕಾರಿಗಳಲ್ಲಿ ಇತರೆ ತರಕಾರಿಗಳಿಗಿಂತಲೂ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು ಹೇಳಲಾಗುತ್ತದೆ. ಬೀಟ್ ರೂಟ್ ಕೂಡ ಮಣ್ಣಿನ ಅಡಿಯಲ್ಲಿ ಸಿಗುವ ತರಕಾರಿಯಾಗಿದ್ದು, ಅದ್ಭುತವಾದ ತರಕಾರಿ ಎಂದೇ ಹೇಳಬಹುದು. ಬೀಟ್ ರೂಟ್ ನಲ್ಲಿ ಹಲವಾರು ವಿಧದ ವಿಟಮಿನ್, ಖನಿಜಾಂಶಗಳಿವೆ.

ಇದು ಚರ್ಮದ ಸಮಸ್ಯೆ ಮತ್ತು ನೆರಿಗೆ ವಿರುದ್ಧ ಹೋರಾಡುವುದು ಮಾತ್ರವಲ್ಲದೆ ಚರ್ಮಕ್ಕೆ ಪುನಶ್ಚೇತನ ನೀಡುವುದು. ನಿಯಮಿತವಾಗಿ ಬೀಟ್ರೂಟ್ ಜ್ಯೂಸ್ ಕುಡಿದರೆ ಅದರಿಂದ ಆರೋಗ್ಯಕಾರಿ ಮತ್ತು ಕಾಂತಿಯುತ ಚರ್ಮ ಪಡೆಯಬಹುದು. ಬೀಟ್ ರೂಟ್ ಜ್ಯೂಸ್ ನಿತ್ಯವೂ ಕುಡಿದರೆ ಅದರಿಂದ ವಯಸ್ಸಾಗುವ ಲಕ್ಷಣಗಳನ್ನು ತಡೆಯಬಹುದಾಗಿದೆ. ಬೀಟ್ ರೂಟ್ ನಲ್ಲಿ ಇರುವಂತಹ ಫಾಲಟೆ ಅಂಶವು ಈ ಕಾರ್ಯಕ್ಕೆ ಕಾರಣವಾಗಿದೆ.

ಮೆದುಳಿನ ಸಹಿತ ದೇಹದ ಪ್ರತಿಯೊಂದು ಅಂಗಾಂಗವು ಹೆಚ್ಚಿನ ರಕ್ತ ಸಂಚಾರವನ್ನು ಪಡೆದರೆ, ಆಗ ದೇಹವು ಹೆಚ್ಚು ಆಮ್ಲಜನಕ ಸರಬರಾಜು ಮಾಡಿದೆ ಎಂದು ಅರ್ಥ. ಬೀಟ್ ರೂಟ್ ನಲ್ಲಿ ನೈಸರ್ಗಿಕ ರಾಸಾಯನಿಕವಾಗಿರುವಂತಹ ನೈಟ್ರೇಟ್ ಇದೆ. ಇದು ಪ್ರತಿಕ್ರಿಯೆಗೆ ಒಳಗಾದ ಬಳಿಕ ನೈಟ್ರಿಕ್ ಆಕ್ಸೈಡ್ ಆಗಿ ಬದಲಾಗುವುದು ಮತ್ತು ರಕ್ತ ಸಂಚಾರವನ್ನು ಸುಗಮಗೊಳಿಸಲು ನೆರವಾಗುವುದು.

ಬೀಟ್ರೂಟ್​ನಲ್ಲಿ ವಿಟಮಿನ್ ಸಿ, ಮೆಗ್ನೇಶಿಯಂ ಹಾಗೂ ಕ್ಯಾಲ್ಶಿಯಂ ಹೇರಳವಾಗಿದ್ದು, ಪ್ರತಿನಿತ್ಯವೂ ಬೀಟ್ ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದ ತ್ರಾಣವು ಹೆಚ್ಚಾಗುತ್ತದೆ. ಇದೇ ನೈಟ್ರೇಟ್ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡ ಬಳಿಕ ವ್ಯಾಯಾಮ ಮತ್ತು ಇತರ ದೈಹಿಕ ಚಟುವಟಿಕೆ ವೇಳೆ ಆಮ್ಲಜನಕದ ಉಪಯೋಗವನ್ನು ತಗ್ಗಿಸುವ ಪರಿಣಾಮವಾಗಿ ದಣಿವು ಕಡಿಮೆ ಆಗುವುದು.

ಮಧುಮೇಹವೂ ದೂರ ಸಾಮಾನ್ಯವಾಗಿ ಮಧುಮೇಹದಿಂದ ಬಳಲುತ್ತಿರುವವರು ಬೀಟ್ರೂಟ್ ಸೇವನೆ ಮಾಡಲು ಹಿಂದೇಟು ಹಾಕುತ್ತಾರೆ. ಹಾಗೆಂದು ಬೀಟ್ರೂಟನ್ನೇ ಸೇವನೆ ಮಾಡದೆ ಸಂಪೂರ್ಣವಾಗಿ ನಿಯಂತ್ರಿಸಬಾರದು. ಮಧುಮೇಹದಿಂದ ಬಳಲುತ್ತಿರುವವರೂ ಕೂಡ ಮಧ್ಯಮ ಪ್ರಮಾಣದಲ್ಲಿ ಸೇವನೆ ಮಾಡಬಹುದಾಗಿದೆ.

ಕೂದಲಿಗೆ ಕಾಂತಿ ನೀಡುವುದು ಬೀಟ್ರೂಟ್ ಜ್ಯೂಸ್ ಕೂದಲಿನ ಕಾಂತಿ ಮತ್ತು ಹೊಳಪವನ್ನು ಕಾಪಾಡಿಕೊಂಡು ಸಂಪೂರ್ಣ ಆರೋಗ್ಯ ಕಾಪಾಡುವುದು. ನೈಸರ್ಗಿಕವಾಗಿ ಸೌಂದರ್ಯ ಪಡೆಯಲು ನೀವು ಕೂದಲಿಗೆ ಕೂಡ ಬೀಟ್ ರೂಟ್ ಬಳಸಬಹುದು. ಬೀಟ್ ರೂಟ್ ಕೂದಲಿನ ಗುಣಮಟ್ಟವನ್ನು ತುಂಬಾ ಚೆನ್ನಾಗಿ ಕಾಪಾಡಿಕೊಳ್ಳುವುದು.

ಕೂದಲು ಉದುರುವ ಸಮಸ್ಯೆ ನಿವಾರಣೆ ಒಣ ತಲೆಬುರುಡೆ, ಕೂದಲು ಉದುರುವಿಕೆ ಮತ್ತು ಕಾಂತಿಯುತ ಕೂದಲು ಪಡೆಯಲು ನೀವು ಬೀಟ್ರೂಟ್ ಜ್ಯೂಸ್ ಬಳಸಿ. ಬೀಟ್ ರೂಟ್ ಜ್ಯೂಸ್ ಗೆ ಸ್ವಲ್ಪ ಶುಂಠಿ ಹಾಕಿ ಕುಡಿದರೆ ಆಗ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆ ಮಾಡಬಹುದು. ಬೀಟ್ರೂಟ್ ಜ್ಯೂಸ್​ಗೆ ವಿನೇಗರ್ ಹಾಕಿದರೆ ಆಗ ಒಣ ತಲೆಬುರುಡೆ ಸಮಸ್ಯೆ ನಿವಾರಣೆಯಾಗುತ್ತದೆ.

ಬೊಜ್ಜು ಸಮಸ್ಯೆಯೂ ಕಡಿಮೆಯಾಗುವುದು ದೀರ್ಘಕಾಲದ ಉರಿಯೂತ, ಪಿತ್ತಜನಕಾಂಗ ಸಂಬಂಧಿಸಿದ ಕಾಯಿಲೆಗಳು, ಬೊಜ್ಜು ಮತ್ತು ಕ್ಯಾನ್ಸರ್ ನಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೂ ಈ ಬೀಟ್ರೂಟ್ ಸಾಕಷ್ಟು ಉಪಯೋಗಗಳನ್ನು ನೀಡಬಲ್ಲದು.

ರಕ್ತಹೀನತೆ ಸಮಸ್ಯೆಗೆ ಪರಿಹಾರ ರಕ್ತಹೀನತೆ, ರಕ್ತದ ಶುದ್ಧೀಕರಣ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಹಲ್ಲುಗಳ ಸಮಸ್ಯೆಗಳನ್ನೂ ದೂರಾಗಿಸುತ್ತದೆ. ಆದರೆ, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವವರು ಮಾತ್ರ ಬೀಟ್ ರೂಟ್ ಸೇವನೆ ಮಾಡುವ ವೇಳೆ ಬಹಳ ಎಚ್ಚರದಿಂದ ಇರಬೇಕಾಗುತ್ತದೆ.

ಏಕೆಂದರೆ ಇದರಲ್ಲಿ ಪೋಷಕಾಂಶಗಳು ಹೇರಳವಾಗಿರುವುದರಿಂದ ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಇಂತಹವರು ಮಿತವಾಗಿ ಆಹಾರ ಸೇವನೆ ಮಾಡುವುದು, ಗುಣಮಟ್ಟದ ಮೇಲೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ