
1947 ಆಗಸ್ಟ್ 15 ರಂದು ಭಾರತವು ಬ್ರಿಟೀಷರ ದಾಸ್ಯದಿಂದ ಮುಕ್ತವಾಗಿ ಸ್ವಾತಂತ್ರ್ಯ (Independence) ಗಳಿಸಿದ ದಿನ. ಈ ಸ್ವಾತಂತ್ರ್ಯ ದಿನವನ್ನು ಪ್ರತಿವರ್ಷ ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಧ್ವಜಾರೋಹಣ ಮಾಡಿ, ದೇಶಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿದಂತಹ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಗುತ್ತದೆ. ಈ ದಿನ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು, ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ (flag hoisting) ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಇದಲ್ಲದೆ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಬಳಿಕ ಮನೆ ಮನೆಗಳಲ್ಲೂ ರಾಷ್ಟ್ರ ಧ್ವಜ ಹಾರಿಸಲಾಗುತ್ತಿದೆ. ವಾಸ್ತವವಾಗಿ ರಾಷ್ಟ್ರ ಧ್ವಜವನ್ನು ಹಾರಿಸಲು ಮತ್ತು ಇಳಿಸಲು ಅದರದ್ದೇ ಆದ ಹಲವಾರು ನಿಯಮಗಳಿದ್ದು, ನಾಳೆ ಅಂದರೆ ಸ್ವಾತಂತ್ರ್ಯ ದಿನದಂದು ರಾಷ್ಟ್ರ ಧ್ವಜವನ್ನು ಹಾರಿಸುವ ಯೋಜನೆಯಲ್ಲಿದ್ದರೆ, ಧ್ವಜಾರೋಹಣ ಮಾಡುವಾಗ ಏನು ಮಾಡಬೇಕು, ಏನು ಮಾಡಬಾರದು ಎಂಬುದನ್ನು ತಪ್ಪದೆ ತಿಳಿದುಕೊಳ್ಳಿ.
ಭಾರತದ ಧ್ವಜ ಸಂಹಿತೆ 2002 ರ ಪ್ರಕಾರ ರಾಷ್ಟ್ರ ಧ್ವಜವನ್ನು ಹಾರಿಸಲು ಅದರದ್ದೇ ಆದ ನಿಯಮಗಳಿವೆ. ಆ ನಿಯಮಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.
ಇದನ್ನೂ ಓದಿ: 79 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಭಾರತದ ಸ್ವಾತಂತ್ರ್ಯ ದಿನದ ಆಸಕ್ತಿದಾಯಕ ಸಂಗತಿಯನ್ನು ತಿಳಿಯಿರಿ
2002 ರ ಧ್ವಜ ಸಂಹಿತೆಯ ತಿದ್ದುಪಡಿಯ ನಂತರ, ಈ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಕಚೇರಿಗಳು ಮಾತ್ರವಲ್ಲದೆ ಮನೆಗಳಲ್ಲೂ ಜನ ಧ್ವಜ ಹಾರಿಸಬಹುದಾಗಿದೆ. ಆದರೆ ರಾಷ್ಟ್ರಧ್ವಜಕ್ಕೆ ಅವಮಾನವಾಗುವಂತೆ ಎಂದಿಗೂ ನಡೆದುಕೊಳ್ಳಬಾರದು. ಒಂದು ವೇಳೆ ಧ್ವಜವನ್ನು ಅಗೌರವಿಸಿದರೆ ಅಥವಾ ಅದನ್ನು ದುರುಪಯೋಗಪಡಿಸಿಕೊಂಡರೆ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ 1971 ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡವನ್ನು ವಿಧಿಸುವ ಸಾಧ್ಯತೆಯಿದೆ. ಹೀಗೆ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ಕಾನೂನು ನಿಬಂಧನೆಗಳಿದ್ದು, ರಾಷ್ಟ್ರ ಧ್ವಜಕ್ಕೆ ಅಗೌರವ ತೋರುವುದು, ಅವಮಾನಿಸುವುದು ಶಿಕ್ಷಾರ್ಹ ಅಪರಾಧವಾಗಿದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:17 pm, Thu, 14 August 25