Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Coast Guard Day 2025: ಭಾರತೀಯ ಕರಾವಳಿ ಭದ್ರತಾ ಪಡೆ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ವಿಶ್ವದ ಅತಿದೊಡ್ಡ ಕರಾವಳಿ ಕಾವಲು ಪಡೆಗಳಲ್ಲಿ ಈ ಭಾರತೀಯ ಕರಾವಳಿ ಭದ್ರತಾ ಪಡೆ ಕೂಡ ಒಂದು. ಭಾರತದ ಕರಾವಳಿ ಮತ್ತು ಕಡಲ ವಲಯಗಳನ್ನು ಸುರಕ್ಷಿತವಾಗಿರಿಸುವಲ್ಲಿ ಈ ಭದ್ರತಾ ಪಡೆಯು ಪ್ರಮುಖ ಪಾತ್ರ ವಹಿಸಿದೆ. ಫೆಬ್ರವರಿ 1 ರಂದು ಭಾರತೀಯ ಕರಾವಳಿ ಭದ್ರತಾ ಪಡೆಯ ಸಂಸ್ಥಾಪನಾ ದಿನವಾಗಿದೆ. ಹಾಗಾದ್ರೆ ಈ ದಿನದ ಆಚರಣೆಯೂ ಯಾವಾಗದಿಂದ ಆರಂಭವಾಯಿತು? ಈ ದಿನದ ಮಹತ್ವವೇನು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Indian Coast Guard Day 2025: ಭಾರತೀಯ ಕರಾವಳಿ ಭದ್ರತಾ ಪಡೆ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 31, 2025 | 6:27 PM

ದೇಶಗಳು ಹಾಗೂ ರಾಷ್ಟ್ರಗಳ ನಡುವೆ ಸಂಪರ್ಕ ಸಾಧಿಸಲು ಇರುವ ಕೊಂಡಿಯಲ್ಲಿ ಸಮುದ್ರಮಾರ್ಗವು ಒಂದಾಗಿದ್ದು, ಇದರ ಮೂಲಕ ಶತ್ರು ರಾಷ್ಟ್ರಗಳು ಹಾಗೂ ದೇಶಗಳು ದಾಳಿ ಮಾಡುತ್ತವೆ. ಹೀಗಾಗಿ ಸಮುದ್ರ ತೀರದಲ್ಲಿ ಭದ್ರತೆ ನೀಡಿ ದೇಶದ ರಕ್ಷಣೆ ಮಾಡುವಲ್ಲಿ ಭಾರತೀಯ ಕರಾವಳಿ ಭದ್ರತಾ ಪಡೆಗಳ ಪಾತ್ರವು ಅಗಾಧವಾದದ್ದು. ಭಾರತೀಯ ಕರಾವಳಿ ಭದ್ರತಾ ಪಡೆಗಳ ಕಾರ್ಯಕವೈಖರಿಯನ್ನು ನೆನಪಿಸಿಕೊಳ್ಳಲು ಭಾರತೀಯ ಕರಾವಳಿ ಭದ್ರತಾ ಪಡೆ ದಿನ ಮೀಸಲಿಡಲಾಗಿದ್ದು, ಪ್ರತಿ ವರ್ಷ ಫೆಬ್ರವರಿ 1 ರಂದು ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಭಾರತೀಯ ಕರಾವಳಿ ಭದ್ರತಾ ಪಡೆ ದಿನದ ಇತಿಹಾಸ

ಭಾರತೀಯ ಕರಾವಳಿ ಭದ್ರತಾ ಪಡೆ ದಿನವನ್ನು ಮೊದಲ ಬಾರಿಗೆ ಭಾರತದ ಸಂಸತ್ತು ಆಗಸ್ಟ್ 18, 1978 ರಂದು ಜಾರಿಗೆ ತಂದಿತು. ಭಾರತೀಯ ಕರಾವಳಿ ಭದ್ರತಾ ಪಡೆ ಫೆಬ್ರವರಿ 1, 1977 ರಂದು ಪ್ರಾರಂಭವಾಯಿತು ಭಾರತೀಯ ಕರಾವಳಿ ಪಡೆಗೆ ಮಿಲಿಟರಿಯೇತರ ಕಡಲ ಸೇವೆಗಳನ್ನು ಒದಗಿಸಲು ಭಾರತೀಯ ಭದ್ರತಾ ಪಡೆಯನ್ನು ಸ್ಥಾಪಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಫೆಬ್ರವರಿ 1 ರಂದು ಕರಾವಳಿ ಭದ್ರತಾ ಪಡೆ ದಿನ ಆಚರಿಸುತ್ತಾ ಬರಲಾಗುತ್ತಿದೆ.

ಭಾರತೀಯ ಕರಾವಳಿ ಭದ್ರತಾ ಪಡೆ ದಿನದ ಮಹತ್ವ

ಭಾರತೀಯ ಕರಾವಳಿ ಕಾವಲು ಪಡೆಗಳು ಕಡಲಾಚೆಯ ನಿಲ್ದಾಣಗಳ ರಕ್ಷಣೆ, ಮೀನುಗಾರರಿಗೆ ರಕ್ಷಣೆ ಹಾಗೂ ನೆರವು, ಸಮುದ್ರ ಸುತ್ತ ಮುತ್ತಲಿನ ಪ್ರದೇಶಗಳ ರಕ್ಷಣೆ, ಕಳ್ಳಸಾಗಣೆ-ವಿರೋಧಿ ಕಾರ್ಯಾಚರಣೆಗಳು, ಕಡಲ ಕಾನೂನುಗಳ ಜಾರಿ ಸೇರಿದಂತೆ ಇನ್ನಿತ್ತರ ಕಾರ್ಯವನ್ನು ನಿರ್ವಹಿಸುತ್ತದೆ. ಕೋಸ್ಟ್ ಗಾರ್ಡ್ ಭಾರತೀಯ ನೌಕಾಪಡೆ, ಮೀನುಗಾರಿಕೆ ಇಲಾಖೆ, ಕಂದಾಯ ಇಲಾಖೆ (ಕಸ್ಟಮ್ಸ್) ಮತ್ತು ಕೇಂದ್ರ ಮತ್ತು ರಾಜ್ಯ ಪೊಲೀಸ್ ಪಡೆಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತದೆ.

ಇದರ ಪ್ರಧಾನ ಕಛೇರಿಯು ನವದೆಹಲಿಯಲ್ಲಿದೆ. ದೇಶೀಯ ಆರ್ಥಿಕತೆಗೆ ಸಮಸ್ಯೆಗಳನ್ನು ಉಂಟುಮಾಡುವ ಸರಕುಗಳ ಕಳ್ಳಸಾಗಣೆಯನ್ನು ತಡೆಗಟ್ಟುವ ಕೆಲಸವನ್ನು ಮಾಡುತ್ತದೆ. ಭಾರತೀಯ ಕೋಸ್ಟ್ ಗಾರ್ಡ್ ಭಾರತದ 7,51,660 ಕಿಮೀ ಕರಾವಳಿಯನ್ನು, ಹಲವಾರು ರಾಜ್ಯಗಳಲ್ಲಿ ಹಾಗೂ ಕೆಲವು ಜನನಿಬಿಡ ವ್ಯಾಪಾರ ಮಾರ್ಗಗಳಲ್ಲಿ ರಕ್ಷಿಸಿ, ದೇಶದ ರಕ್ಷಣೆಯನ್ನು ಮಾಡುತ್ತಿದೆ.

ಭಾರತೀಯ ಕರಾವಳಿ ಕಾವಲು ಪಡೆ ಎಷ್ಟು ಶಕ್ತಿಶಾಲಿಯಾಗಿದೆ?

ಆರಂಭದಲ್ಲಿ ಸಮುದ್ರ ಹಾಗೂ ವಿಶೇಷ ಆರ್ಥಿಕ ವಲಯದಲ್ಲಿ ಕಣ್ಗಾವಲುಗಾಗಿ ಏಳು ಹಡಗುಗಳು ಮಾತ್ರ ಇದ್ದವು. ಇದೀಗ ನೌಕಾಪಡೆಯಲ್ಲಿ 158 ಹಡಗುಗಳು ಮತ್ತು 78 ವಿಮಾನಗಳ ದಾಸ್ತಾನು ಹೊಂದಿದೆ. ಇದು 3 ಮಾಲಿನ್ಯ ನಿಯಂತ್ರಣ ಹಡಗುಗಳು, 27 ಆಫ್‌ಶೋರ್ ಗಸ್ತು ಹಡಗುಗಳು, 45 ವೇಗದ ಗಸ್ತು ಹಡಗುಗಳು, 82 ಗಸ್ತು ಹಡಗುಗಳು, 14 ಗಸ್ತು ನೌಕೆಗಳು ಮತ್ತು 18 ಹೋವರ್‌ಕ್ರಾಫ್ಟ್‌ಗಳನ್ನು ಹೊಂದಿದೆ. ಇದಲ್ಲದೆ, ಕೋಸ್ಟ್ ಗಾರ್ಡ್ 77 ವಿಮಾನಗಳನ್ನು ಹೊಂದಿದ್ದು, ಇದರಲ್ಲಿ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಸೇರಿವೆ. ಒಟ್ಟಾರೆಯಾಗಿ ಭಾರತೀಯ ಕರಾವಳಿ ಭದ್ರತಾ ಪಡೆಯು ವಿಶ್ವದ ನಾಲ್ಕನೇ ಅತಿ ದೊಡ್ಡ ಕೋಸ್ಟ್ ಗಾರ್ಡ್ ಆಗಿ ಬೆಳೆದು ನಿಂತಿದ್ದು ಕಡಲ ಗಡಿಗಳನ್ನು ರಕ್ಷಿಸುತ್ತಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!