AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy Day 2025: ಡಿಸೆಂಬರ್‌ 4 ರಂದೇ ಏಕೆ ಭಾರತೀಯ ನೌಕಾಪಡೆ ದಿನವನ್ನು ಆಚರಿಸಲಾಗುವುದು ಗೊತ್ತಾ?

ಭಾರತೀಯ ನೌಕಾಪಡೆಯು ದೇಶದ ಕಡಲ ಗಡಿಗಳನ್ನು ರಕ್ಷಿಸುವಲ್ಲಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಅಭೂತಪೂರ್ವ ಪಾತ್ರವನ್ನು ವಹಿಸುತ್ತದೆ. ಭಾರತೀಯ ನೌಕಾಪಡೆಯ ಈ ಶೌರ್ಯ, ವೀರೋಚಿತ ಪ್ರಯತ್ನಗಳು ಮತ್ತು ತ್ಯಾಗಗಳನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್ 4 ರಂದು ಭಾರತೀಯ ನೌಕಾಪಡೆಯ ದಿನವನ್ನು ಆಚರಿಸಲಾಗುತ್ತದೆ.

Indian Navy Day 2025: ಡಿಸೆಂಬರ್‌ 4 ರಂದೇ ಏಕೆ ಭಾರತೀಯ ನೌಕಾಪಡೆ ದಿನವನ್ನು ಆಚರಿಸಲಾಗುವುದು ಗೊತ್ತಾ?
ಭಾರತೀಯ ನೌಕಾಪಡೆ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on:Dec 04, 2025 | 9:50 AM

Share

ಭಾರತೀಯ ನೌಕಾಪಡೆಯು (Indian Navy) ವಿಶ್ವದ ಅತ್ಯಂತ ಬಲಿಷ್ಠ ನೌಕಾಪಡೆಗಳಲ್ಲಿ ಒಂದಾಗಿದ್ದು, ಈ ನೌಕಾಪಡೆ ದೇಶದ ಕಡಲ ಗಡಿಗಳನ್ನು ರಕ್ಷಿಸುವಲ್ಲಿ, ದೇಶಕ್ಕೆ ಭದ್ರತೆಯನ್ನು ಒದಗಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಸಮುದ್ರ ಗಡಿಗಳನ್ನು ಶತ್ರುಗಳಿಂದ ರಕ್ಷಣೆ ಮಾಡುವುದರ ಜೊತೆಗೆ ಬೇರೆ ದೇಶಗಳ ಜೊತೆ ಬಂದರು ಭೇಟಿ, ಜಂಟಿ ಕವಾಯತು, ವಿಪತ್ತು ಪರಿಹಾರ ಮುಂತಾದ ಅಂತಾರಾಷ್ಟ್ರೀಯ ಸಂಬಂಧವನ್ನು ವೃದ್ಧಿಸುವ ಕೆಲಸವನ್ನೂ ಮಾಡುತ್ತಿದೆ. ನೌಕಾಪಡೆಯ ಈ ಅದಮ್ಯ ಧೈರ್ಯ, ಶೌರ್ಯ ಮತ್ತು ಸಾಧನೆಗಳನ್ನು ಗೌರವಿಸಲು  ಪ್ರತಿವರ್ಷ ಡಿಸೆಂಬರ್‌ 4 ರಂದು ಭಾರತೀಯ ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ.

ಡಿಸೆಂಬರ್ 4 ರಂದೇ ಏಕೆ ನೌಕಾಪಡೆಯ ದಿನವನ್ನು ಆಚರಿಸಲಾಗುತ್ತದೆ?

ಭಾರತಕ್ಕೆ ಈ ದಿನ ವಿಜಯ್ ದಿವಸ್ ಇದ್ದಂತೆ. 1971 ರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದಲ್ಲಿ ಭಾರತೀಯ ನೌಕಾಪಡೆಯು ಮಹತ್ವದ ಪಾತ್ರ ವಹಿಸಿತ್ತು. ಡಿಸೆಂಬರ್ 3 ರಂದು ಪಾಕಿಸ್ತಾನವು ಭಾರತೀಯ ವಾಯುನೆಲೆಯ ಮೇಲೆ ದಾಳಿ ಮಾಡಿದಾಗ, ನಮ್ಮ ನೌಕಾಪಡೆಯು ಆಪರೇಷನ್‌ ಟ್ರೈಡೆಂಟ್‌ ಹೆಸರಿನ ಕಾರ್ಯಾಚರಣೆಯಲ್ಲಿ ಡಿಸೆಂಬರ್ 4 ಮತ್ತು 5 ರ ರಾತ್ರಿ ಪ್ರತಿದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಈ ಕಾರ್ಯಾಚರಣೆಯಲ್ಲಿ ಹಲವು ಸೈನಿಕರು ವೀರ ಮರಣವನ್ನು ಹೊಂದಿದರು. ಹಾಗಾಗಿ ಆಪರೇಷನ್‌ ಟ್ರೈಡೆಂಟ್‌ನಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ದೇಶ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿ ವೀರ ಮರಣ ಹೊಂದಿದ ವೀರ ಯೋಧರನ್ನು ಸ್ಮರಿಸುವ ಸಲುವಾಗಿ ಡಿಸೆಂಬರ್‌ 4 ರಂದು ಭಾರತೀಯ ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ವಿಶೇಷ ಚೇತನರ ದಿನವನ್ನು ಆಚರಿಸುವ ಉದ್ದೇಶವೇನು?

ಭಾರತೀಯ ನೌಕಾಪಡೆ ದಿನದ ಮಹತ್ವವೇನು?

  • ನೌಕಾಪಡೆಯ ಮಹತ್ವ ತಿಳಿಸುವುದು ಹಾಗೂ ಆಪರೇಷನ್‌ ಟ್ರೈಡೆಂಟ್‌ನಲ್ಲಿ ವೀರಮರಣ ಹೊಂದಿದ ಯೋಧರನ್ನು ಸ್ಮರಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.
  • ಅಲ್ಲದೆ ದೇಶ ರಕ್ಷಣೆಯ ವಿಚಾರದಲ್ಲಿ ನೌಕಾಪಡೆಯ ಕೊಡುಗೆಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ.
  • ಈ ದಿನ ಹಿರಿಯ ನೌಕಾ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಭದ್ರತೆಗೆ ಕೊಡುಗೆ ನೀಡುವ ನೌಕಾ ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಗುತ್ತದೆ. ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Thu, 4 December 25

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್