ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು

ಬೇಸಿಗೆಯ ಆರಂಭದೊಂದಿಗೆ ಕಲ್ಲಂಗಡಿ ಹಣ್ಣಿನ ಸೀಸನ್‌ ಕೂಡ ಆರಂಭವಾಗಿದ್ದು, ಎಲ್ಲರೂ ಕೂಡ ಮುಗಿಬಿದ್ದು, ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಿದ್ದಾರೆ. ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ. ನಾವು ಎಸೆಯುವಂತಹ ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು
ಕಲ್ಲಂಗಡಿ ಹಣ್ಣಿನ ಸಿಪ್ಪೆ
Image Credit source: Pinterest

Updated on: Mar 24, 2026 | 7:52 PM

ಈ ಸುಡು ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ.  ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು  ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ.  ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ  ಕೆಲವು  ಕೆಲವು ರುಚಿಕರ ರೆಸಿಪಿಗಳನ್ನು ತಯಾರಿಸಿ.

ಕಲ್ಲಂಗಡಿ ಹಣ್ಣಿನ ಸಿಪ್ಪಿಯಿಂದ ತಯಾರಿಸಿ ಬಗೆಬಗೆಯ ರೆಸಿಪಿ:

ಕಲ್ಲಂಗಡಿ ಸಿಪ್ಪೆ ಜಾಮ್: ಕಲ್ಲಂಗಡಿ ಸಿಪ್ಪೆಗಳಿಂದ ನೀವು ಸುಲಭವಾಗಿ ಜಾಮ್ ಮಾಡಬಹುದು. ಈ ಜಾಮ್ ಬ್ರೆಡ್ ನಿಂದ ಚಪಾತಿವರೆಗೆ ಎಲ್ಲದರ ಜೊತೆಗೆ ರುಚಿಕರವಾಗಿರುತ್ತದೆ. ಕಲ್ಲಂಗಡಿ ಸಿಪ್ಪೆಯಿಂದ ಜಾಮ್ ಮಾಡಲು, ಮೊದಲು ಸಿಪ್ಪೆಯ ಹಸಿರು ಬಣ್ಣದ ಪದರವನ್ನು ಸುಳಿದು ಬಳಿಕ ಉಳಿದ ಸಿಪ್ಪೆಯನ್ನುಅದನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಕತ್ತರಿಸಿದ ಕಲ್ಲಂಗಡಿ ಸಿಪ್ಪೆಗೆ, ಎರಡು ಕಪ್ ಸಕ್ಕರೆ, ನಿಂಬೆ ರಸ ಮತ್ತು 1 ಟೀಚಮಚ ವೆನಿಲ್ಲಾ ಎಸೆನ್ಸ್ ಸೇರಿಸಿ. ಇದೆಲ್ಲವನ್ನೂ ಜೆಲ್ಲಿ ಹದಕ್ಕೆ ಬರುವವರೆಗೆ ಬಿಸಿ ಮಾಡಿಕೊಳ್ಳಿ. ನೀವು ಸುವಾಸನೆಗಾಗಿ ದಾಲ್ಚಿನ್ನಿ ಕೂಡ ಸೇರಿಸಬಹುದು.

ಕಲ್ಲಂಗಡಿ ಸಿಪ್ಪೆಯ ಉಪ್ಪಿನಕಾಯಿ: ಮಾವಿನ ಕಾಯಿ, ನಿಂಬೆ, ನೆಲ್ಲಿಕಾಯಿ, ಕ್ಯಾರೆಟ್‌ ಸೇರಿದಂತೆ ಬಗೆ ಬಗೆಯ ಉಪ್ಪಿನಕಾಯಿಗಳನ್ನು ತಯಾರಿಸುತ್ತಾರೆ. ಅದೇ ರೀತಿ ಕಲ್ಲಂಗಡಿ ಸಿಪ್ಪೆಯಿಂದಲೂ ಉಪ್ಪಿನಕಾಯಿ ತಯಾರಿಸಬಹುದು. ಈ ಉಪ್ಪಿನಕಾಯಿ ಮಾಡಲು, ನೀವು ಕಲ್ಲಂಗಡಿ ಸಿಪ್ಪೆಯ ಹಸಿರು ಸಿಪ್ಪೆಯನ್ನು ತೆಗೆದು  ಉಳಿದ ಭಾಗವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮಾವಿನಕಾವಿ ಉಪ್ಪಿನಕಾಯಿಯಂತೇ ಇದನ್ನೂ ತಯಾರಿಸಿ.

ಇದನ್ನೂ ಓದಿ: ಹಣ್ಣು, ತರಕಾರಿಗಳನ್ನು ಒಟ್ಟಿಗೆ ಸಂಗ್ರಹಿಸಿಡಲೇಬಾರದು, ಯಾಕೆ ಗೊತ್ತಾ?

ಕಲ್ಲಂಗಡಿ ಸಿಪ್ಪೆ ಚಟ್ನಿ: ಕಲ್ಲಂಗಡಿ ಸಿಪ್ಪೆಯಿಂದ ರುಚಿಕರ ಚಟ್ನಿಯನ್ನು ತಯಾರಿಸಬಹುದು.  ಈ ಚಟ್ನಿ ಮಾಡಲು, ಮೊದಲು 3 ರಿಂದ 4 ಕಪ್ ಕಲ್ಲಂಗಡಿ ಸಿಪ್ಪೆಯನ್ನು ತೆಗೆದುಕೊಳ್ಳಿ, ಆದರ ಹಸಿರು ಪದರವನ್ನು ತೆಗೆದುಹಾಕಿ. ಸಿಪ್ಪೆಯನ್ನು ಸಣ್ಣಗೆ ಕಟ್‌ ಮಾಡಿ ಅದಕ್ಕೆ ಒಂದು ರುಚಿಗೆ ತಕ್ಕಷ್ಟು ಉಪ್ಪು, ಮೆಣಸಿಕಾಯಿ, ಸ್ವಲ್ಪ ಸಣ್ಣಗೆ ಹೆಚ್ಚಿದ ಶುಂಠಿ ಜೊತೆಗೆ ನಿಮಗೆ ಬೇಕಾಗಿರುವ ಮಸಾಲೆಗಳನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಂಡರೆ ಕಲ್ಲಂಗಡಿ ಸಿಪ್ಪೆ ಚಟ್ನಿ ಸಿದ್ಧ.

ಇದಲ್ಲದೆ ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದ ಪಲ್ಯ, ಹಲ್ವಾ, ಟುಟ್ಟಿ ಫ್ರೂಟಿಯನ್ನು ತಯಾರಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Tue, 24 March 26

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us