International Anti-Corruption Day 2024: ವಿಶ್ವದ ಭ್ರಷ್ಟ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ? ಇಲ್ಲಿದೆ ಮಾಹಿತಿ

ಭ್ರಷ್ಟಾಚಾರ ಚಾರ ಯಾವುದೋ ಒಂದು ದೇಶದ ಸಮಸ್ಯೆಯಲ್ಲ, ಬದಲಾಗಿ ಇದು ಇಡೀ ಪ್ರಪಂಚದಲ್ಲಿರುವ ಬಹುತೇಕ ಎಲ್ಲಾ ದೇಶಗಳನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಹೀಗಾಗಿ ಈ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 9 ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

International Anti-Corruption Day 2024: ವಿಶ್ವದ ಭ್ರಷ್ಟ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 09, 2024 | 10:10 AM

ಇಡೀ ಜಗತ್ತು ಎದುರಿಸುತ್ತಿರುವ ಗಂಭೀರ ಸಮಸ್ಯೆಯೆಂದರೆ ಅದುವೇ ಭ್ರಷ್ಟಾಚಾರ. ಇದು ಒಂದು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಕಾನೂನು ಸುವ್ಯವಸ್ಥೆಯಿದ್ದರೂ, ಕಠಿಣ ಕ್ರಮಗಳನ್ನು ಕೈಗೊಂಡರೂ ಭ್ರಷ್ಟಾಚಾರಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ. ಪ್ರಸ್ತುತ ದಿನಗಳಲ್ಲಿ ಭ್ರಷ್ಟಾಚಾರವು ಹೆಚ್ಚುತ್ತಲೇ ಇದ್ದು, ಇದರಿಂದ ಒಂದು ವರ್ಗದ ಜನರು ಮಾತ್ರ ಶ್ರೀಮಂತರಾಗುತ್ತಿದ್ದು, ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಹೀಗಾಗಿ ಭ್ರಷ್ಟಚಾರ ಕೃತ್ಯಗಳಲ್ಲಿ ತೊಡಗಿಕೊಳ್ಳದಿರುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಡಿಸೆಂಬರ್ 9 ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಇತಿಹಾಸ

ವಿಶ್ವದ ದೊಡ್ಡ ಸಮಸ್ಯೆಗಳಲ್ಲಿ ಒಂದಾದ ಭ್ರಷ್ಟಾಚಾರವನ್ನು ತಡೆಗಟ್ಟುವುದು. ಜನಸಾಮಾನ್ಯರು, ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದೆಂದು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಅಕ್ಟೋಬರ್ 31, 2003 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಅಂತಾರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನು ಆಚರಿಸಲು ಅಂಗೀಕರಿಸಿತು. ಹೀಗಾಗಿ ಪ್ರತಿ ವರ್ಷ ಡಿಸೆಂಬರ್ 9 ರಂದು ಈ ವಿಶೇಷ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿ ವರ್ಷವೂ ಡಿಸೆಂಬರ್ 9 ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಮಹತ್ವ ಹಾಗೂ ಆಚರಣೆ

ಭ್ರಷ್ಟಾಚಾರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಈ ಕೆಟ್ಟ ಕೃತ್ಯಗಳಲ್ಲಿ ನಾವು ತೊಡಗಿಕೊಳ್ಳದಿರುವುದು. ಈ ಸಮಾಜದ ವಂಚಿತ ವರ್ಗದ ಕಲ್ಯಾಣಕ್ಕಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವು ಬಹಳ ಮಹತ್ವದ್ದಾಗಿದೆ. ಪ್ರತಿಯೊಂದು ದೇಶದ ಸರ್ಕಾರಿ ಅಧಿಕಾರಿಗಳು, ನಾಗರಿಕ ಸೇವಕರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ನಾಗರಿಕ ಸಮಾಜ, ಶಿಕ್ಷಣ ತಜ್ಞರು, ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಅಗತ್ಯವಿದೆ. ಈ ದಿನದಂದು ಜನ ಸಾಮಾನ್ಯರಿಗೆ ಈ ಬಗ್ಗೆ ಅರಿವು ಮೂಡಿಸಲು ಅಭಿಯಾನಗಳು, ಕಾರ್ಯಾಗಾರಗಳು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಮಹಾಕುಂಭವನ್ನು ಸನಾತನ ಧರ್ಮದಲ್ಲಿ ಏಕೆ ವಿಶೇಷವೆಂದು ಪರಿಗಣಿಸಲಾಗಿದೆ?

ವಿಶ್ವದ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಶನಲ್ ಎಂಬ ಸಂಸ್ಥೆಯೂ ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿಯನ್ನು ಈ ವರ್ಷ ಜನವರಿಯಲ್ಲಿ ಬಿಡುಗಡೆ ಮಾಡಿದೆ. ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವೂ 180 ದೇಶಗಳು ಮತ್ತು ಪ್ರಾಂತ್ಯಗಳನ್ನು ಆಧರಿಸಿ ವರದಿಯೂ ಇದಾಗಿದೆ. ಭಾರತವು 39 ಅಂಕಗಳೊಂದಿಗೆ 2023 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕದಲ್ಲಿ 93 ನೇ ಸ್ಥಾನವನ್ನು ಪಡೆದಿದೆ. 2022 ರಲ್ಲಿ 85 ನೇ ಕ್ರಮಾಂಕದಲ್ಲಿದ್ದ ಭಾರತವು ಈ ವರ್ಷ 93 ಸ್ಥಾನಕ್ಕೆ ಬಂದು ತಲುಪಿದೆ ಎನ್ನುವುದು ನಿಜಕ್ಕೂ ವಿಪರ್ಯಾಸ. ಇನ್ನುಳಿದಂತೆ ನೆರೆ ರಾಷ್ಟ್ರಗಳಾದ ಪಾಕಿಸ್ತಾನ 133 ಮತ್ತು ಶ್ರೀಲಂಕಾ 115, ಬಾಂಗ್ಲಾದೇಶ 149, ಅಫ್ಘಾನಿಸ್ತಾನ 162, ಚೀನಾ 76, ಜಪಾನ್ 16 ನೇ ಸ್ಥಾನವನ್ನು ಪಡೆದುಕೊಂಡಿವೆ. ಸಾರ್ವಜನಿಕ ವಲಯದ ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಹೆಚ್ಚಿನ ರಾಷ್ಟ್ರಗಳು ಯಾವುದೇ ಪ್ರಗತಿಯನ್ನು ಸಾಧಿಸಿಲ್ಲ ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ