International Anti-Corruption Day 2025: ಭ್ರಷ್ಟಾಚಾರವೆಂಬ ವೈರಸ್ ರಾಷ್ಟ್ರದ ಪ್ರಗತಿಗೆ ಮಾರಕ

ಭ್ರಷ್ಟಾಚಾರ ಒಂದು ಸಾಮಾಜಿಕ ಪಿಡುಗಾಗಿದ್ದು, ಇದು ದೇಶದ ಸಾಮಾಜಿಕ ಮತ್ತುಆರ್ಥಿಕ ಅಭಿವೃದ್ಧಿಯನ್ನು ದುರ್ಬಲಗೊಳಿಸುತ್ತದೆ. ಹಾಗಾಗಿ ಸಮಾಜದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರವನ್ನು ನಿಲ್ಲಿಸುವುದು ಮತ್ತು ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಡಿಸೆಂಬರ್ 09 ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

International Anti-Corruption Day 2025: ಭ್ರಷ್ಟಾಚಾರವೆಂಬ ವೈರಸ್ ರಾಷ್ಟ್ರದ ಪ್ರಗತಿಗೆ ಮಾರಕ
ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ
Image Credit source: Freepik

Updated on: Dec 09, 2025 | 9:33 AM

ಭ್ರಷ್ಟಾಚಾರವು (Corruption) ಯಾವುದೇ ರಾಷ್ಟ್ರದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯನ್ನು ಹಾಳು ಮಾಡುತ್ತಿರುವ, ದೇಶದ ಪ್ರಗತಿಗೆ ಮಾರಕವಾಗಿರುವ ಮಾರಕ ಸೋಂಕು ಎಂದರೆ ತಪ್ಪಾಗಲಾರದು. ಈ ಸಾಮಾಜಿಕ  ಪಿಡುಗು ದೇಶದ ಸಾಮಾಜಿಕ ಮತ್ತುಆರ್ಥಿಕ ಅಭಿವೃದ್ಧಿಯನ್ನು ದುರ್ಬಲಗೊಳಿಸುತ್ತದೆ. ಈ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ದೇಶಗಳ ಆರ್ಥಿಕತೆಗೆ ತೀವ್ರವಾದ ಪೆಟ್ಟು ಬೀಳುತ್ತಿದೆ. ಹಾಗಾಗಿ ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹಾಗೂ ಭ್ರಷ್ಟಚಾರ ಕೃತ್ಯಗಳಲ್ಲಿ ತೊಡಗಿಕೊಳ್ಳದಿರುವಂತೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 09 ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಇತಿಹಾಸವೇನು?

ಭ್ರಷ್ಟಾಚಾರ ಬಹುತೇಕ ಎಲ್ಲಾ ದೇಶಗಳು ಎದುರಿಸುತ್ತಿರುವ ಒಂದು ಬಹುದೊಡ್ಡ  ಸಮಸ್ಯೆಯಾಗಿದ್ದು, ಈ ಒಂದು ಸಮಸ್ಯೆಯಿಂದ ಇಂದಿಗೂ ಅದೆಷ್ಟೋ ದೇಶಗಳು ಆರ್ಥಿಕವಾಗಿ ಹಿಂದುಳಿದಿವೆ. ಹಾಗಾಗಿ ಈ ಭ್ರಷ್ಟಾಚಾರವನ್ನು ತಡೆಗಟ್ಟಬೇಕು, ಜನರು, ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು  ಎಂದು ಪ್ರತಿಯೊಬ್ಬರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದೊಂದಿಗೆ ಅಕ್ಟೋಬರ್ 31, 2003 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಅಂತಾರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನು ಆಚರಿಸಲು ಅಂಗೀಕಾರವನ್ನು ನೀಡಿತು. ಮತ್ತು ಡಿಸೆಂಬರ್ 09 ರಂದು ಈ ವಿಶೇಷ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ  ಪ್ರತಿ ವರ್ಷ ಡಿಸೆಂಬರ್ 09 ರಂದು ಈ ಜಾಗೃತಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಆಚರಿಸುವುದೇಕೆ ಗೊತ್ತಾ?

ಅಂತಾರಾಷ್ಟ್ರೀಯ ಭ್ರಷ್ಟಾಚಾರ ದಿನದ ಮಹತ್ವವೇನು?

  • ಭ್ರಷ್ಟಾಚಾರದ ಬಗ್ಗೆ ಪ್ರತಿಯೊಬ್ಬ ನಾಗರಿಕರಲ್ಲೂ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ಭ್ರಷ್ಟಾಚಾರ ದಿನವನ್ನು ಆಚರಿಸಲಾಗುತ್ತದೆ.
  • ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವು ಜನರು, ಸಂಸ್ಥೆಗಳು ಮತ್ತು ಸರ್ಕಾರಗಳು ಭ್ರಷ್ಟಾಚಾರ ಮುಕ್ತ ವಾತಾವರಣವನ್ನು ಕಾಪಾಡಿಕೊಳ್ಳುವಲ್ಲಿ ತಮ್ಮ ಪಾತ್ರವನ್ನು ಪ್ರತಿಬಿಂಬಿಸಲು ಪ್ರೋತ್ಸಾಹಿಸುತ್ತದೆ.
  • ಈ ದಿನ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಎಲ್ಲಾ ರಾಷ್ಟ್ರಗಳ ಸರ್ಕಾರಗಳು ಹೆಚ್ಚು ಕಠಿಣ ಕಾನೂನುಗಳು ಮತ್ತು ನೀತಿಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುತ್ತದೆ.
  • ಈ ದಿನ ಭ್ರಷ್ಟಾಚಾರ ಮುಕ್ತ ಭವಿಷ್ಯವನ್ನು ನಿರ್ಮಿಸಲು ಯುವಕರ ಪಾತ್ರವನ್ನು ಗುರುತಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ