AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

International Day for the Elimination of Violence against Women 2024 :ಮಹಿಳೆಯರು, ಹದಿಹರೆಯದ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ಮಾನಸಿಕ ಮತ್ತು ದೈಹಿಕ ದೌರ್ಜನ್ಯಗಳನ್ನು ತಡೆದು ಈ ಬಗ್ಗೆ ಪ್ರಪಂಚದಾದ್ಯಂತ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 25 ರಂದು ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗ ಪ್ರಾರಂಭವಾಯಿತು? ಏನಿದರ ಮಹತ್ವ ಸೇರಿದಂತೆ ಇನ್ನಿತ್ತರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 25, 2024 | 9:56 AM

Share

ದಿನ ಬೆಳಗಾದರೆ ಟಿವಿ, ನ್ಯೂಸ್‌ ಪೇಪರ್‌, ಡಿಜಿಟಲ್‌ ಮಾಧ್ಯಮಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತಾದ ಒಂದಲ್ಲ ಒಂದು ಸುದ್ದಿಗಳನ್ನು ಕೇಳುತ್ತಿರುತ್ತೇವೆ. ವರದಕ್ಷಿಣಿ, ಅತ್ಯಾಚಾರ, ಕೊಲೆ ಹೀಗೆ ನಾನಾ ಕಾರಣಕ್ಕಾಗಿ ಮಹಿಳೆಯರ ಮೇಲಿನ ದೌರ್ಜನ್ಯ ನಡೆಯುತ್ತಲೇ ಇದೆ. ಕಾನೂನು ಸುವ್ಯವಸ್ಥೆಯಿದ್ದರೂ ಕೂಡ ಈ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಹೀಗಾಗಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ನಿಲ್ಲಿಸುವುದು, ಸಮಾಜದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಕಡಿವಾಣ ಹಾಕುವುದು ಹಾಗೂ ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನದ ಇತಿಹಾಸ

1981 ರಲ್ಲಿ ಲ್ಯಾಟಿನ್ ಅಮೇರಿಕಾ ಮತ್ತು ಕೆರೆಬಿಯನ್ ಸ್ತ್ರೀವಾದಿ ಕಾರ್ಯಕರ್ತರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬೇಕು ಹಾಗೂ ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಬೇಕು ಎಂಬ ಕಾರಣಕ್ಕೆ ನವೆಂಬರ್ 25 ರಂದು ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಆಚರಿಸಬೇಕೆಂದು ನಿರ್ಧರಿಸಿದರು. ಈ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಈ ನಿರ್ಧಿಷ್ಟ ದಿನದಂದು ಆಚರಿಸಲು ಕಾರಣವೇನೆಂದರೆ, 1960 ರಲ್ಲಿ ನಡೆದ ಆ ಘಟನೆ ಎನ್ನಬಹುದು.

1960, ನವೆಂಬರ್ 25 ರಲ್ಲಿ ಮೂವರು ಸಹೋದರಿಯರಾದ ಪ್ಯಾಟ್ರಿಯಾ ಮರ್ಸಿಡಿಸ್ ಮೆರಾಬೆಲ್, ಮರಿಯಾ ಅರ್ಜೆಂಟೀನಾ ಮಿನಾರ್ವಾ ಮೆರಾಬೆಲ್ ಮತ್ತು ಆಂಟೋನಿಯಾ ಮಾರಿಯಾ ತೆರೇಸಾ ಮೆರಾಬೆಲ್ ಅವರನ್ನು ಡೊಮಿನಿಕನ್ ರಿಪಬ್ಲಿಕ್ ಆಡಳಿತಗಾರ ರಾಫೆಲ್ ಟ್ರುಜೆಲ್ಲೊನ ಆದೇಶದ ಮೇರೆಗೆ ಕ್ರೂರವಾಗಿ ಸಾಯಿಸಲಾಯಿತು. ಆ ಮೂವರು ಸಹೋದರಿಯರು ಈತನ ಸರ್ವಾಧಿಕಾರವನ್ನು ವಿರೋಧಿಸಿದ್ದ ಕಾರಣಕ್ಕೆ ಅವರನ್ನು ಕೊಲ್ಲಲಾಯಿತು. ಹಾಗಾಗಿ ಈ ಮೂವರು ದಿಟ್ಟ ಮಹಿಳೆಯರನ್ನು ಸ್ಮರಿಸುವ ಸಲುವಾಗಿ ನವೆಂಬರ್ 25 ರಂದು ಈ ವಿಶೇಷ ದಿನವನ್ನು ಆಚರಿಸುವುದೆಂದು ನಿರ್ಧರಿಸಲಾಯಿತು. ಆ ಬಳಿಕ ಮಹಿಳೆಯರ ಮೇಲಿ ದೌರ್ಜನ್ಯದ ಪ್ರಮಾಣ ತೀವ್ರವಾಗಿ ಹೆಚ್ಚಾದ ಕಾರಣ 1999 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಪ್ರತಿ ವರ್ಷ ನವೆಂಬರ್ 25 ರಂದು ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನವನ್ನು ಆಚರಿಸಲಾಗುವುದು ಎಂದು ಘೋಷಿಸಿತು. ಆ ಬಳಿಕ ಈ ದಿನದ ಆಚರಣೆಯೂ ಚಾಲ್ತಿಯಲ್ಲಿದೆ.

ಇದನ್ನೂ ಓದಿ: ಬೇಕರಿ ಶೈಲಿಯಲ್ಲಿ ಮನೆಯಲ್ಲೇ ಮಾಡಿ ಗೋಡಂಬಿ ಬರ್ಫಿ , ಇಲ್ಲಿದೆ ರೆಸಿಪಿ

ಅಂತಾರಾಷ್ಟ್ರೀಯ ಮಹಿಳಾ ಶೋಷಣೆ ನಿವಾರಣಾ ದಿನದ ಮಹತ್ವ ಹಾಗೂ ಆಚರಣೆ

ಮಹಿಳೆಯರ ಮೇಲಾಗುವ ದೈಹಿಕ ಮತ್ತು ಮಾನಸಿಕ ಹಿಂಸಾಚಾರಗಳನ್ನು ತಡೆಗಟ್ಟಲು ಮತ್ತು ಮಹಿಳೆಯರು ಹಾಗೂ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯುವುದು ಈ ದಿನದ ಮೂಲ ಉದ್ದೇಶವಾಗಿದೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಮುಕ್ತವಾಗಿ ಬದುಕಲು ಅವಕಾಶ ಕಲ್ಪಿಸುವುದು. ಲಿಂಗ ಅಸಮಾನತೆ ಹಾಗೂ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಈ ದಿನವು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ವಿವಿಧ ಸಂಘ ಸಂಸ್ಥೆಗಳು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ದ ಅರಿವು ಮೂಡಿಸಲು ನಾನಾ ರೀತಿಯ ಕಾರ್ಯಕ್ರಮಗಳು ಹಾಗೂ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ