International Day of Democracy 2023: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಇತಿಹಾಸ, ಮಹತ್ವ ಇಲ್ಲಿದೆ

ಪ್ರಜಾಪ್ರಭುತ್ವ ಎಂಬ ಹೆಸರು ಡೆಮೊಸ್ ಮತ್ತು ಕ್ರಾಟೋಸ್ ಎಂಬ ಎರಡು ಗ್ರೀಕ್ ಪದಗಳಿಂದ ಬಂದಿದೆ. ಡೆಮೊಸ್ ಅಂದರೆ ನಗರ-ರಾಜ್ಯದ ಪ್ರಜೆ, ಕ್ರಾಟೋಸ್ ಅಂದರೆ ಅಧಿಕಾರ ಅಥವಾ ಆಡಳಿತ. ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಪ್ರಜಾಪ್ರಭುತ್ವದಡಿ ಆಡಳಿತ ನಡೆಸುತ್ತಿವೆ. ಈ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಗೌರವಿಸಲು ಪ್ರತಿವರ್ಷದ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ.

International Day of Democracy 2023: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಇತಿಹಾಸ, ಮಹತ್ವ ಇಲ್ಲಿದೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ 2023
Follow us
Rakesh Nayak Manchi
|

Updated on: Sep 15, 2023 | 8:25 AM

ಪ್ರಜಾಪ್ರಭುತ್ವ ಎಂಬ ಹೆಸರು ಡೆಮೊಸ್ ಮತ್ತು ಕ್ರಾಟೋಸ್ ಎಂಬ ಎರಡು ಗ್ರೀಕ್ ಪದಗಳಿಂದ ಬಂದಿದೆ. ಡೆಮೊಸ್ ಅಂದರೆ ನಗರ-ರಾಜ್ಯದ ಪ್ರಜೆ, ಕ್ರಾಟೋಸ್ ಅಂದರೆ ಅಧಿಕಾರ ಅಥವಾ ಆಡಳಿತ. ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಪ್ರಜಾಪ್ರಭುತ್ವದಡಿ ಆಡಳಿತ ನಡೆಸುತ್ತಿವೆ. ಈ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಗೌರವಿಸಲು ಪ್ರತಿವರ್ಷದ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ (International Day of Democracy) ಆಚರಿಸಲಾಗುತ್ತಿದೆ.

ಪ್ರಜಾಪ್ರಭುತ್ವವು ಸರ್ಕಾರದ ಒಂದು ರೂಪವಾಗಿದ್ದು, ನಾಗರಿಕರು ನೇರವಾಗಿ ಅಥವಾ ಪ್ರತಿನಿಧಿಗಳ ಮೂಲಕ ಶಾಸನದ ವಿಷಯಗಳನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿರುತ್ತಾರೆ. ಪ್ರಜಾಪ್ರಭುತ್ವದ ನಿರ್ಣಾಯಕ ಅಂಶಗಳನ್ನು ವಿವಿಧ ದೇಶಗಳು ವಿಭಿನ್ನ ರೀತಿಯಲ್ಲಿ ಅಳವಡಿಸಿಕೊಂಡಿವೆ.

ವಿಶ್ವಸಂಸ್ಥೆಯ ಪ್ರಕಾರ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ವಿಶ್ವದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯನ್ನು ತಿಳಿಯಲು ಅವಕಾಶವನ್ನು ಒದಗಿಸುತ್ತದೆ. ಪ್ರಜಾಪ್ರಭುತ್ವದ ಆದರ್ಶವನ್ನು ಎಲ್ಲರೂ, ಎಲ್ಲೆಡೆ ಪಾಲಿಸುವ ಮತ್ತು ವಾಸ್ತವಿಕವಾಗಿ ನೋಡುವಂತೆ ಮಾಡುವುದು ಈ ದಿನದ ಗುರಿಯಾಗಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಇತಿಹಾಸ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇಂಟರ್-ಪಾರ್ಲಿಮೆಂಟರಿ ಯೂನಿಯನ್ (IPU) 1997ರ ಸೆ.15 ರಂದು ಅಂಗೀಕರಿಸಿತು. 1988 ರಲ್ಲಿ ಇದಕ್ಕೆ ಪ್ರಚಾರ ದೊರಕಿತು. ಫಿಲಿಪೈನ್ಸ್‌ನ ಅಧ್ಯಕ್ಷ ಕೊರಾಜನ್ ಸಿ. ಅಕ್ವಿನೊ ಅವರು ಹೊಸ ಮತ್ತು ಮರುಸ್ಥಾಪಿತ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಪ್ರಾರಂಭಿಸಿದರು. 2006 ರಲ್ಲಿ, ಕತಾರ್‌ನಲ್ಲಿ ನಡೆದ ICNRD-6, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಮರುಸ್ಥಾಪಿಸುವ ಘೋಷಣೆ ಮಾಡಲಾಯಿತು. ನಂತರ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ನಿರ್ಣಯವನ್ನು ಉತ್ತೇಜಿಸಲು ಕತಾರ್ ಮುಂದಾಳತ್ವ ವಹಿಸಿತು.

ಇದನ್ನೂ ಓದಿ: ಷರಿಯಾದಲ್ಲಿ ರಾಜಕೀಯ ಪಕ್ಷಗಳ ಪರಿಕಲ್ಪನೆ ಇಲ್ಲ: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ನಿಷೇಧಿಸಿದ ತಾಲಿಬಾನ್

2007 ರಲ್ಲಿ ಮಂಡಿಸಿದ ನಿರ್ಣಯಕ್ಕೆ ಸಾಮಾನ್ಯ ಸಭೆಯು ಪ್ರತಿ ವರ್ಷ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆರಿಸಲು ನಿರ್ಧರಿಸಿತು. ಆ ವರ್ಷ, ನವೆಂಬರ್‌ನಲ್ಲಿ, ವಿಶ್ವಸಂಸ್ಥೆಯು ಜಗತ್ತಿನಾದ್ಯಂತ ಹೊಸ ಮತ್ತು ಮರುಸ್ಥಾಪಿತ ಪ್ರಜಾಪ್ರಭುತ್ವಗಳನ್ನು ಬೆಂಬಲಿಸುವ ನಿರ್ಣಯವನ್ನು ಅಂಗೀಕರಿಸಿತು. ಅಂದಿನಿಂದ ಭಾರತ ಸೇರಿದಂತೆ ಪ್ರಜಾಪ್ರಭತ್ವವನ್ನು ಅಳವಡಿಸಿರುವ ವಿಶ್ವದ ವಿವಿಧ ದೇಶಗಳು ಸೆ.15 ರಂದು ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿವೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ಕ್ರಿಯಾತ್ಮಕ ಪ್ರಜಾಪ್ರಭುತ್ವದ ಪ್ರಾಮುಖ್ಯತೆಯನ್ನು ಅಂಗೀಕರಿಸುವ ದಿನವಾಗಿದೆ. ಇದು ಮೂಲಭೂತವಾಗಿ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲು ತನ್ನ ಜನರಿಗೆ ಅಧಿಕಾರ ನೀಡುತ್ತದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತಕ್ಕೆ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ಆಡಳಿತ ಮಾದರಿಯ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರಮುಖ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಪ್ರಜಾಪ್ರಭುತ್ವ ದಿನದ ಆಚರಣೆ

ಪ್ರಜಾಪ್ರಭುತ್ವ ದಿನದಂದು ಸರ್ಕಾರಗಳು ಮಾತ್ರವಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಂಬಿಕೆ ಇಟ್ಟ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಆ ಮೂಲಕ ಪ್ರಜಾಪ್ರಭುತ್ವದ ತತ್ವಗಳು ಮತ್ತು ಅದರ ಮಹತ್ವಗಳನ್ನು ಸಾರಲಾಗುತ್ತದೆ. ಮಾತ್ರವಲ್ಲದೆ, ಪ್ರಜಾಪ್ರಭುತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಉತ್ತೇಜಿಸಲು ವಿಶ್ವಸಂಸ್ಥೆ ಕೂಡ ಕಾರ್ಯಕ್ರಮಗಳು, ಸಮ್ಮೇಳನಗಳು ಮತ್ತು ಚರ್ಚೆಗಳನ್ನು ಆಯೋಜಿಸುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?