ಪ್ರಜಾಪ್ರಭುತ್ವವು ಸರ್ಕಾರದ ಒಂದು ರೂಪವಾಗಿದ್ದು, ಈ ಹೆಸರು ಡೆಮೊಸ್ ಮತ್ತು ಕ್ರಾಟೋಸ್ ಎಂಬ ಎರಡು ಗ್ರೀಕ್ ಪದಗಳಿಂದ ಬಂದಿದೆ. ಡೆಮೊಸ್ ಅಂದರೆ ನಗರ-ರಾಜ್ಯದ ಪ್ರಜೆ, ಕ್ರಾಟೋಸ್ ಅಂದರೆ ಅಧಿಕಾರ ಅಥವಾ ಆಡಳಿತ ಎಂದರ್ಥ. ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಡಳಿತ ನಡೆಸುತ್ತಿವೆ. ಈ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಹಾಗೂ ಗೌರವಿಸಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವ ಕಲ್ಪನೆಯು ಪ್ರಜಾಪ್ರಭುತ್ವದ ಸಾರ್ವತ್ರಿಕ ಘೋಷಣೆಯನ್ನು ಆಧರಿಸಿದೆ. ಇದನ್ನು ಇಂಟರ್-ಪಾರ್ಲಿಮೆಂಟರಿ ಕೌನ್ಸಿಲ್ ತನ್ನ 161 ನೇ ಅಧಿವೇಶನದಲ್ಲಿ ಸೆಪ್ಟೆಂಬರ್ 15, 1997 ರಂದು ಅಂಗೀಕರಿಸಿತು. 1988 ರಲ್ಲಿ ಇದಕ್ಕೆ ಪ್ರಚಾರ ದೊರಕಿತು. ಫಿಲಿಪೈನ್ಸ್‌ನ ಅಧ್ಯಕ್ಷ ಕೊರಾಜನ್ ಸಿ. ಅಕ್ವಿನೊ ಅವರು ಹೊಸ ಮತ್ತು ಮರುಸ್ಥಾಪಿತ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಪ್ರಾರಂಭಿಸಿದರು. 2006 ರಲ್ಲಿ, ಕತಾರ್‌ನಲ್ಲಿ ನಡೆದ ICNRD-6, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಮರುಸ್ಥಾಪಿಸುವ ಘೋಷಣೆ ಮಾಡಲಾಯಿತು.
ತದನಂತರದಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ನಿರ್ಣಯವನ್ನು ಉತ್ತೇಜಿಸಲು ಕತಾರ್ ಮುಂದಾಳತ್ವ ವಹಿಸಿತು. 2007 ರಲ್ಲಿ ಮಂಡಿಸಿದ ನಿರ್ಣಯಕ್ಕೆ ಸಾಮಾನ್ಯ ಸಭೆಯು ಪ್ರತಿ ವರ್ಷ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆರಿಸಲು ನಿರ್ಧರಿಸಿತು. ಅದೇ ವರ್ಷ ನವೆಂಬರ್‌ನಲ್ಲಿ, ವಿಶ್ವಸಂಸ್ಥೆಯು ಜಗತ್ತಿನಾದ್ಯಂತ ಹೊಸ ಮತ್ತು ಮರುಸ್ಥಾಪಿತ ಪ್ರಜಾಪ್ರಭುತ್ವಗಳನ್ನು ಬೆಂಬಲಿಸುವ ನಿರ್ಣಯವನ್ನು ಅಂಗೀಕರಿಸಿತು. ಅಂದಿನಿಂದ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯನ್ನು ಪರಿಶೀಲಿಸಲು ಅವಕಾಶವನ್ನು ಒದಗಿಸುತ್ತದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ಹಾಗೂ ಗೌರವಿಸಲು ಈ ದಿನವು ಮಹತ್ವದ್ದಾಗಿದೆ.
ಇದನ್ನೂ ಓದಿ: National Engineers Day 2024: ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಇತಿಹಾಸ, ಮಹತ್ವವೇನು? ಈ ದಿನದ ಶುಭಾಶಯ ಈ ರೀತಿ ತಿಳಿಸಿ
ಪ್ರಜಾಪ್ರಭುತ್ವದ ತತ್ವಗಳು ಮತ್ತು ಅದರ ಮಹತ್ವಗಳನ್ನು ಸಾರುವ ಸಲುವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸರ್ಕಾರಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಅದಲ್ಲದೇ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉತ್ತೇಜಿಸಲು ವಿಶ್ವಸಂಸ್ಥೆಯು ವಿವಿಧ ಕಾರ್ಯಕ್ರಮಗಳು, ಸಮ್ಮೇಳನಗಳು ಮತ್ತು ಚರ್ಚೆಗಳನ್ನು ಆಯೋಜಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ