ವಿಶ್ವದಾದ್ಯಂತ ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತಾಗಿ ಅರಿವನ್ನು ಮೂಡಿಸುವ ಉದ್ದೇಶದೊಂದಿಗೆ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಪ್ರಯುಕ್ತ ಹೆಣ್ಣು ಮಕ್ಕಳಿಗೆ ಹೆಚ್ಚಿನ ಅವಕಾಶಗಳನ್ನು ನೀಡುವುದು ಜತೆಗೆ ಲಿಂಗ ಸಮಾನತೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳ ಶಿಕ್ಷಣ, ಪೋಷಣೆ, ಹಕ್ಕುಗಳು, ವೈದ್ಯಕೀಯ ಆರೈಕೆ ಮತ್ತು ತಾರತಮ್ಯದಿಂದ ರಕ್ಷಣೆ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಹೆಣ್ಣು ಮಗುವಿನ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಹೆಣ್ಣು ಮಕ್ಕಳ ಶೋಷಣೆ, ಹತ್ಯೆ, ಲೈಂಗಿಕ ಕಿರುಕುಳ ಇಂತಹ ಕೃತ್ಯಗಳನ್ನು ತಡೆಗಟ್ಟಲು ಜತೆಗೆ ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತೀ ವರ್ಷ ಅಕ್ಟೋಬರ್ 11ನೇ ತಾರೀಕಿನಂದು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. 2011 ಡಿಸೆಂಬರ್ 19ನೇ ತಾರೀಕಿನಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಅಕ್ಟೋಬರ್ 11ರಂದು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಘೋಷಿಸಿತು. ಆ ನಂತರದಲ್ಲಿ 2012ರಿಂದ ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಈ ದಿನವನ್ನು ಭಾರತದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ.
ಈ ವರ್ಷದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಥೀಮ್ ‘ಡಿಜಿಟಲ್ ಪೀಳಿಗೆ ಮತ್ತು ನಮ್ಮ ಪೀಳಿಗೆ’. ಇದು ಸಂಪರ್ಕ ಸಾಧನಗಳು ಮತ್ತು ಅವುಗಳ ಬಳಕೆ ಮತ್ತು ಉದ್ಯೋಗಗಳಲ್ಲಿ ಡಿಜಿಟಲ್ಗೆ ಹೊಂದಿಕೊಂಡು ಹೆಣ್ಣುಮಕ್ಕಳ ಮುನ್ನುಗ್ಗಬೇಕು. ಅವುಗಳ ಕುರಿತಾದ ಕೌಶಲ್ಯಗಳನ್ನುಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ವಿಶೇಷ ಬರಹಗಳನ್ನು ಹಂಚಿಕೊಳ್ಳುವ ಮೂಲಕ, ಮಹಿಳೆಯರ ಸಾಧನೆಯನ್ನು ಗೌರವಿಸುವ ಮೂಲಕ ಜತೆಗೆ ಸ್ಪೂರ್ತಿ ತುಂಬುವ ಕೆಲವು ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಈ ದಿನವನ್ನು ಆಚರಿಸಬಹದು.
ಹಿಂದುಳಿದ ಹೆಣ್ಣು ಮಕ್ಕಳ ಏಳಿಗೆಗಾಗಿ ಶ್ರಮಿಸುವುದು ಮತ್ತು ಅಭಿಯಾನ ಹಮ್ಮಿಕೊಳ್ಳುವ ಮೂಲಕ ಕೈಲಾದಷ್ಟು ಸಹಾಯ ಮಾಡುವುದು, ಬಡ ಮಕ್ಕಳಿಗೆ ಶಿಕ್ಷಣ ಒದಗಿಸುವ ಕುರಿತಾಗಿ ಜತೆಗೆ ಮಕ್ಕಳಿಗೆ ಶಿಕ್ಷಣ ಪಡೆಯಲು ಬೇಕಾದ ಸೌಲಭ್ಯಗಳನ್ನು ಒದಗಿಸುವುದು, ಈ ರೀತಿಯಾಗಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಪ್ರಯುಕ್ತ ನೀವು ಹೆಣ್ಣು ಮಗುವಿನ ಏಳಿಗೆಗೆ ಸಹಾಯ ಮಾಡುವ ಮೂಲಕ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ.
ಇದನ್ನೂ ಓದಿ: