AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಒಂದು ವಿಶೇಷ ದಿನ

International Day Of Women And Girls In Science 2025: ಇಂದು ಪ್ರತಿಯೊಂದು ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಛಾಪನ್ನು ಮೂಡಿಸಿದ್ದಾರೆ. ಅಂತೆಯೇ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕ್ಷೇತ್ರಗಳಲ್ಲೂ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಇನ್ನೂ ಹೆಚ್ಚು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಮತ್ತು ಕೊಡುಗೆಗಳನ್ನು ಗೌರವಿಸಲು ಫೆಬ್ರವರಿ 11 ರಂದು ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ವಿಶೇಷ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಒಂದು ವಿಶೇಷ ದಿನ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Feb 11, 2025 | 10:30 AM

Share

ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ. ಸಾಮಾಜಿಕ, ರಾಜಕೀಯ, ಶಿಕ್ಷಣ, ಆರ್ಥಿಕತೆ, ವಿಜ್ಞಾನ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮ ಛಾಪನ್ನು ಮೂಡಿಸಿದ್ದಾರೆ. ಹೀಗಿದ್ದರೂ ಕೂಡಾ ಮಹಿಳೆಯರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸಲು, ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಕ್ಷೇತ್ರಗಳಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸಲುವ ಸಲುವಾಗಿ ಫೆಬ್ರವರಿ 11 ರಂದು ಅಂತರಾಷ್ಟ್ರೀಯ ಮಹಿಳಾ ಮತ್ತು ಹೆಣ್ಣುಮಕ್ಕಳ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಬಾಲಕಿಯರ ದಿನದ ಇತಿಹಾಸ:

2015 ರಲ್ಲಿ ವಿಶ್ವಸಂಸ್ಥೆಯು ಫೆಬ್ರವರಿ 11 ರಂದು ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಬಾಲಕಿಯರ ವಿಶೇಷ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಲಿಂಗ ಸಮಾನತೆಯ ಗುರಿಯನ್ನು ಸಾಧಿಸಲು ಮತ್ತು ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತ ಕ್ಷೇತ್ರಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಸಲುವಾಗಿ ಈ ವಿಶೇಷ ದಿನವನ್ನು ಆಚರಣೆ ಮಾಡುವ ಮಹತ್ವದ ನಿರ್ಧಾರವನ್ನು ವಿಶ್ವಸಂಸ್ಥೆ ಕೈಗೊಂಡಿತು. ಅಂದಿನಿಂದ ಪ್ರತಿವರ್ಷ ಫೆಬ್ರವರಿ 11 ರಂದು ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಬಾಲಕಿಯರ ವಿಶೇಷ ದಿನವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸುತ್ತಾ ಬರಲಾಗುತ್ತಿದೆ.

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಬಾಲಕಿಯರ ದಿನದ ಮಹತ್ವ:

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಭಾಗವಹಿಸುತ್ತಿದ್ದಾರೆ. ಆದರೆ ವಿಜ್ಞಾನ ಕ್ಷೇತ್ರದಲ್ಲಿ ಬೆರಳೆಣಿಕೆಯಷ್ಟು ಮಹಿಳೆಯರು ಮಾತ್ರ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರೋತ್ಸಾಹ ನೀಡುವ ಸಲುವಾಗಿ ಈ ವಿಶೇಷ ದಿನವನ್ನು ಆಚರಿಸಲಾಗುತ್ತಿದೆ. ಅಷ್ಟೇ ಅಲ್ಲದೆ STEM ಕ್ಷೇತ್ರಗಳಲ್ಲಿ ಸಂಶೋಧನೆಗೆ ಮಹಿಳೆಯರು ಕಡಿಮೆ ಸಂಬಳವನ್ನು ಪಡೆಯುತ್ತಾರೆ. ಹೀಗಾಗಿ ಲಿಂಗತಾರಮತ್ಯವನ್ನು ಹೋಗಲಾಡಿಸಲು ಮತ್ತು ಮಹಿಳೆಯರು STEM ಕ್ಷೇತ್ರಗಳಲ್ಲಿ ಭಾಗಿಯಾಗುವಂತೆ ಮಾಡಲು ಈ ದಿನದಂದು ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡಲಾಗುತ್ತದೆ.

ಇದನ್ನೂ ಓದಿ: ಸುರಕ್ಷಿತ ಅಂತರ್ಜಾಲ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಿರುವ ಭಾರತೀಯ ಮಹಿಳಾ ವಿಜ್ಞಾನಿಗಳು:

ಟೆಸ್ಸಿ ಥಾಮಸ್ : ಭಾರತದ ‘ಕ್ಷಿಪಣಿ ಮಹಿಳೆ’ ಎಂದು ಕರೆಯಲ್ಪಡುವ ಟೆಸ್ಸಿ ಥಾಮಸ್ ಏರೋನಾಟಿಕಲ್ ಸಿಸ್ಟಮ್ಸ್ ಡೈರೆಕ್ಟರ್ ಜನರಲ್ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯಲ್ಲಿ ಅಗ್ನಿ- IV ಕ್ಷಿಪಣಿಯ ಯೋಜನಾ ನಿರ್ದೇಶಕರಾಗಿದ್ದರು. ಇವರು ಭಾರತದಲ್ಲಿ ಕ್ಷಿಪಣಿ ಯೋಜನೆಯ ಮುಖ್ಯಸ್ಥರಾದ ಮೊದಲ ಮಹಿಳಾ ವಿಜ್ಞಾನಿಯಾಗಿದ್ದಾರೆ.

ರಿತು ಕರಿಧಾಲ್ : ಚಂದ್ರಯಾನ್ -2 ಮಿಷನ್‌ನ ಮಿಷನ್ ನಿರ್ದೇಶಕರಾಗಿ, ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಚಂದ್ರಯಾನ ಯೋಜನೆಗಳಲ್ಲಿ ಒಂದನ್ನು ಹೆಲ್ಮಿಂಗ್ ಮಾಡುವ ಪಾತ್ರಕ್ಕಾಗಿ ರಿತು ಕರಿಧಾಲ್ ಅವರು ಆಯ್ಕೆಯಾಗಿದ್ದರು. ‘ಭಾರತದ ರಾಕೆಟ್ ವುಮನ್’ ಎಂದು ಕರೆಯಲ್ಪಡುವ ರಿತು 2007 ರಲ್ಲಿ ಇಸ್ರೋಗೆ ಸೇರಿದರು.

ಕಲ್ಪನಾ ಚಾವ್ಲಾ: ಇವರು ಮೊದಲ ಭಾರತೀಯ – ಅಮೆರಿಕನ್ ಗಗನಯಾತ್ರಿ ಮತ್ತು ಬಾಹ್ಯಾಕಾಶ ಹೋದ ಮೊದಲ ಭಾರತೀಯ ಮಹಿಳೆ. ಅವರು 1997 ರಲ್ಲಿ ಬಾಹ್ಯಾಕಾಶ ನೌಕೆಯ ಕೊಲಂಬಿಯಾದಲ್ಲಿ ಮಿಷನ್ ಸ್ಪೆಷಲಿಸ್ಟ್ ಮತ್ತು ಪ್ರಾಥಮಿಕ ರೊಬೊಟಿಕ್ ಆರ್ಮ್ ಆಪರೇಟರ್ ಆಗಿ ಬಾಹ್ಯಾಕಾಶಕ್ಕೆ ಹಾರಿದರು. ನಾಸಾ ಮುಖ್ಯಸ್ಥರು ಅವರನ್ನು “ಧೈರ್ಯಶಾಲಿ ಗಗನಯಾತ್ರಿ” ಬಿರುದು ನೀಡಿದರು.

ಭಿಬಾ ಚೌಧರಿ: ಭಿಬಾ ಚೌಧರಿ ಕೂಡ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಿದ ಭಾರತೀಯ ಮಹಿಳೆ ಎಂದೆನಿಸಿದ್ದು ಭಾರತದ ಪ್ರಥಮ ಎನರ್ಜಿ ಭೌತಶಾಸ್ತ್ರಜ್ಞರಾಗಿದ್ದು ಟಿಐಎಫ್‌ಆರ್‌ನಲ್ಲಿ ಸೇವೆ ಸಲ್ಲಿಸಿದ ಮೊದಲ ಮಹಿಳೆ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. ಅಂತರರಾಷ್ಟ್ರೀಯ ಖಗೋಳ ಒಕ್ಕೂಟವು ಬಿಳಿ ಹಳದಿ ಕುಬ್ಜ ನಕ್ಷತ್ರಕ್ಕೆ ಭಿಬಾ ಅವರ ಹೆಸರನ್ನಿರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ